ಬ್ರೇಕಿಂಗ್ ನ್ಯೂಸ್
05-10-20 12:38 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 05 : ಈ ಬಾರಿ ಕೃಷ್ಣಾಷ್ಟಮಿ, ಗಣೇಶೋತ್ಸವಕ್ಕೆ ಕೊರೊನಾ ನಿರ್ಬಂಧ ನೆಪದಲ್ಲಿ ಆಚರಣೆಗೆ ಅವಕಾಶ ನೀಡಿರದ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಸರಾ ಉತ್ಸವಕ್ಕೆ ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ದೇವಸ್ಥಾನಗಳಲ್ಲಿ ಆಚರಿಸಲು ಅವಕಾಶ ನೀಡಿದೆ.
ದೇವಸ್ಥಾನಗಳಲ್ಲಿ ದಸರಾ ಹಬ್ಬದ ನಿಮಿತ್ತ ಶಾರದಾ ವಿಗ್ರಹ ಸ್ಥಾಪನೆ ಮಾಡಿದರೂ ಹೆಚ್ಚಿನ ಜನ ಸೇರಲು ಅವಕಾಶ ಇಲ್ಲ. ಯಾವುದೇ ತರಹದ ಸಭೆ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಇರಲ್ಲ. ಅಲ್ಲದೆ, ಹುಲಿವೇಷ ತಂಡಕ್ಕೂ ಅವಕಾಶ ನೀಡದಿರಲು ಜಿಲ್ಲಾ ಧಾರ್ಮಿಕ ಪರಿಷತ್ ಸರ್ವಾನುಮತದ ನಿರ್ಣಯ ಕೈಗೊಂಡಿದೆ.

ದಸರಾ ಹಬ್ಬ ನೆಪದಲ್ಲಿ ಜನಸಂದಣಿ ಸೇರುವಂತಿಲ್ಲ. ಅಲ್ಲದೆ ದೇವಸ್ಥಾನಗಳಲ್ಲಿ ಭಕ್ತರಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕಾೃನಿಂಗ್, ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ನಿಯಮಗಳನ್ನು ಜಾರಿಗೆ ತರಲು ಸ್ವಯಂಸೇವಕರನ್ನು ಬಳಸಿಕೊಳ್ಳಬೇಕು. ದೇವಸ್ಥಾನದ ಒಳಗೆ ಸಾಮಾಜಿಕ ಅಂತರ ಕಾಪಾಡಲು ಕುರ್ಚಿಗಳನ್ನು ಇರಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯಕ್ರಮ ನೇರಪ್ರಸಾರ ಮಾಡಿ, ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು. ದೊಡ್ಡ ಗಾತ್ರದ ಶಾಮಿಯಾನ, ಚಪ್ಪರ ಹಾಕಲು ಅವಕಾಶ ನೀಡದಂತೆ ಎಲ್ಲಾ ದೇವಸ್ಥಾನಗಳಿಗೆ ಸೂಚಿಸುವ ನಿಟ್ಟಿನಲ್ಲಿ ನಿರ್ಧಾರಕ್ಕೆ ಬರಲಾಗಿದೆ. ಇಷ್ಟೇ ಅಲ್ಲದೆ ಹಬ್ಬದಲ್ಲಿ ಅಂಗಡಿ ವ್ಯಾಪಾರಕ್ಕೆ ಕೂಡ ಅವಕಾಶ ನೀಡಲಾಗಿಲ್ಲ.

ಇದೇ ವೇಳೆ ಮುಂಬರುವ ದೀಪಾವಳಿ ಹಬ್ಬವನ್ನೂ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ದೀಪಾವಳಿಗೆ ಸುಡುಮದ್ದು/ಪಟಾಕಿ ಶೇಖರಣೆ, ಮಾರಾಟ ಹಾಗೂ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರೂ ಆಗಿರುವ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ಈ ಸಭೆಯಲ್ಲಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಕೆ.ಸೂರ್ಯ ಕಶೆಕೋಡಿ, ಸೂರ್ಯನಾರಾಯಣ ಭಟ್, ಹಾಗೂ ವಿವಿಧ ದೇವಸ್ಥಾನಗಳ ಆಡಳಿತ ಮುಖ್ಯಸ್ಥರು ಉಪಸ್ಥಿತರಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am