ಬ್ರೇಕಿಂಗ್ ನ್ಯೂಸ್
18-08-22 10:18 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 18: ಬೆಂಗಳೂರು, ಶಿವಮೊಗ್ಗ, ಮಂಗಳೂರು ಸೇರಿ ರಾಜ್ಯದ ಹಲವೆಡೆ ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಕಾರ್ಯಕರ್ತರು ಫ್ಲೆಕ್ಸ್ ಹಾಕಿದರೆ, ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಅದನ್ನು ತೆರವು ಮಾಡಿ ಕಿಚ್ಚು ಹೊತ್ತಿಕೊಳ್ಳುವಂತೆ ಮಾಡಿದ್ದಾರೆ. ಆದರೆ ಕೋಮು ಸೂಕ್ಷ್ಮ ಪ್ರದೇಶ ಉಳ್ಳಾಲದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಲ್ಲಿ ಗುರುತಿಸಿಕೊಂಡಿರುವ ಮುಸ್ಲಿಂ ಮುಖಂಡರೊಬ್ಬರು ಬಹಿರಂಗವಾಗಿಯೇ ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿ ಗಮನ ಸೆಳೆದಿದ್ದಾರೆ.
ಯುಟಿ ಖಾದರ್ ಕಳೆದ ಮೂರು ಅವಧಿಯಲ್ಲಿ ಪ್ರತಿನಿಧಿಸುತ್ತಿರುವ ಮುಸ್ಲಿಂ ಬಾಹುಳ್ಯದ ಮಂಗಳೂರು ವಿಧಾನಸಭಾ ಕ್ಷೇತ್ರದ ಎರಡು ಕಡೆ ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಲಾಗಿದೆ. ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ ಬೃಹತ್ ಪೋಸ್ಟರ್ ಹಾಕಿದ್ದು, ಸಾವರ್ಕರ್ ಅವರಿಗೆ ನಮನಗಳು ಎಂದು ಬರೆದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಎ.ಆರ್. ಫಝಲ್ ಫ್ಲೆಕ್ಸ್ ಹಾಕಿದ್ದಾರೆ. ದೇರಳಕಟ್ಟೆ ಮುಸ್ಲಿಂ ಬಾಹುಳ್ಯದ ಪ್ರದೇಶವಾಗಿದ್ದರೆ, ಅಸೈಗೋಳಿಯಲ್ಲಿ ಎರಡೂ ಸಮುದಾಯದ ಜನರು ಇದ್ದಾರೆ. ಗುರುವಾರ ಸಂಜೆ ಹೊತ್ತಿಗೆ ಎರಡೂ ಕಡೆ ಫ್ಲೆಕ್ಸ್ ಕಂಡುಬಂದಿದ್ದು ಕೆಲವರಿಂದ ವಿರೋಧವೂ ವ್ಯಕ್ತವಾಗಿತ್ತು.
ಆದರೆ ಈ ರೀತಿ ಫ್ಲೆಕ್ಸ್ ಹಾಕಿದ ಬೆನ್ನಲ್ಲೇ ಕೋಣಾಜೆ ಪೊಲೀಸರು ದೇರಳಕಟ್ಟೆಯಲ್ಲಿ ಹಾಕಿದ್ದ ಫ್ಲೆಕ್ಸನ್ನು ತೆರವು ಮಾಡಿದ್ದಾರೆ. ದೇರಳಕಟ್ಟೆ ಮುಸ್ಲಿಂ ಬಾಹುಳ್ಯದ ಪ್ರದೇಶ ಆಗಿರುವುದರಿಂದ ಘರ್ಷಣೆಗೆ ಅವಕಾಶ ಮಾಡಿಕೊಡುವುದು ಬೇಡವೆಂದು ಪೊಲೀಸರೇ ತೆರವು ಕಾರ್ಯ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಪೊಲೀಸರೇ ಫ್ಲೆಕ್ಸ್ ತೆರವು ಮಾಡಿರುವುದು ಬಿಜೆಪಿ ಮುಖಂಡರನ್ನು ಕೆರಳಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫಜಲ್, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಸಾವರ್ಕರ್ ಅವರಿಗೆ ನಮನ ಸಲ್ಲಿಸುವುದರಲ್ಲಿ ತಪ್ಪೇನಿದೆ. ನಾನು ಭಯೋತ್ಪಾದಕರ ಪರವಾಗಿ ಫ್ಲೆಕ್ಸ್ ಹಾಕಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಒಂದು ದಿವಸ ಆಗಿರಲಿ, 50 ವರ್ಷ ಆಗಿರಲಿ, ಹೋರಾಟ ಮಾಡಿದವರೆಲ್ಲ ಪ್ರಾತಃ ಸ್ಮರಣೀಯರು. ಅಂತಹ ವ್ಯಕ್ತಿಗಳಿಗೆ ಅವಮಾನ ಮಾಡುವುದು ಸರಿಯಲ್ಲ. ಕೊಣಾಜೆ ಪೊಲೀಸರು ಎಸ್ಡಿಪಿಐ ಕಾರ್ಯಕರ್ತರ ರೀತಿ ವರ್ತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Mangalore Muslim Bjp Minority morcha member installs Veer Savarkar flex in Ullal, police remove after knowing it can create spark as it was installed in Muslim based area.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm