ಬ್ರೇಕಿಂಗ್ ನ್ಯೂಸ್
19-08-22 07:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19 : ಸಾವರ್ಕರ್ ಬಗ್ಗೆ ಕಾಂಗ್ರೆಸ್ ಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಮಾತ್ರ ಇರೋದು. ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ನಾವೆಲ್ಲೂ ಹೇಳಿಲ್ಲ. ಸ್ವಾತಂತ್ರ್ಯ ಹೋರಾಟ ಮಾಡಿದ್ದಕ್ಕೆ ಬ್ರಿಟಿಷರು ಅವರನ್ನು ಅಂಡಮಾನ್ ಜೈಲಿಗೆ ಹಾಕಿದ್ದರು ಎಂದು ಕಾಂಗ್ರೆಸ್ ಮುಖಂಡ, ವಿಪಕ್ಷ ಉಪ ನಾಯಕ ಯುಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣೆ ಕೋರಿ ಪತ್ರ ಬರೆದಿದ್ದಕ್ಕೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಹಾಗೆ ಜೈಲಿನಿಂದ ಹೊರಬಂದಿದ್ದ ಸಾವರ್ಕರ್, ಸ್ವಾತಂತ್ರ್ಯಕ್ಕಾಗಿ ಆನಂತರ ಹೋರಾಡಲಿಲ್ಲ. 1924ರ ನಂತರ ಸಾವರ್ಕರ್ ದೇಶಕ್ಕಾಗಿ ಹೋರಾಟ ಮಾಡಿದ ಉದಾಹರಣೆ ಇದೆಯಾ ? ಆಬಳಿಕ ಸಾವರ್ಕರ್ ಸ್ವಾತಂತ್ರ್ಯ ಸಂಗ್ರಾಮದ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ. ಈ ಬಗ್ಗೆ ಮಾತ್ರ ಕಾಂಗ್ರೆಸ್ ಪ್ರಶ್ನೆ ಇರುವುದು. ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದೂ ಇದನ್ನು ಮಾತ್ರ ಎಂದು ಹೇಳಿದರು.
ಹಾಗೆಂದು, ಸಿದ್ದರಾಮಯ್ಯ ಯಾರಿಗೂ ಆಕ್ರೋಶ ಬರುವಂತೆ ಹೇಳಿಕೆಯನ್ನು ಕೊಟ್ಟಿಲ್ಲ. ಬ್ಯಾನರ್ ಹಾಕಿದ್ದಕ್ಕೆ ಆಕ್ಷೇಪ ಮಾಡಿಲ್ಲ. ಆದರೆ ಬ್ಯಾನರ್ ಹಾಕಿದ್ದವರ ಉದ್ದೇಶದ ಬಗ್ಗೆ ಮಾತಾಡಿದ್ದರು. ಯಾರು ಯಾರ ಬ್ಯಾನರ್ ಹಾಕಿದ್ರೂ ಮೂರನೇ ವ್ಯಕ್ತಿ ತೆಗೆಯುವಂತಿಲ್ಲ. ಯಾರು ಕೂಡ ಆಯಾ ಆಡಳಿತದಿಂದ ಅನುಮತಿ ಪಡೆದು ಬ್ಯಾನರ್ ಹಾಕಬಹುದು. ಬ್ಯಾನರ್ ಹಾಕುವವರು ಉತ್ತಮ ಉದ್ದೇಶದಿಂದ ಹೊಂದಿರಬೇಕು ಅಷ್ಟೇ. ಉದ್ದೇಶ, ದುರುದ್ದೇಶ ಎರಡನ್ನೂ ಇಲ್ಲಿ ಗಮನಿಸಬೇಕು ಎಂದು ಯು.ಟಿ ಖಾದರ್ ಹೇಳಿದರು.
ಆದರೆ ಮಡಿಕೇರಿಯಲ್ಲಿ ಆಗಿರುವ ಘಟನೆಯನ್ನು ಕಾಂಗ್ರೆಸ್ ಸಹಿಸುವುದಿಲ್ಲ. ವಿಪಕ್ಷ ನಾಯಕರ ಕಾರಿಗೆ ಮೊಟ್ಟೆ ಎಸೆದಿರುವ ಘಟನೆಗೆ ರಾಜ್ಯ ಸರ್ಕಾರವೇ ನೇರ ಜವಾಬ್ದಾರಿ. ಬಿಜೆಪಿ ಆಡಳಿತದಲ್ಲಿ ಪೊಲೀಸ್ ಇಲಾಖೆ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ರಾಜಕೀಯ ಪಕ್ಷದ ಕೈಗೊಂಬೆಯಾಗಿ ಪೊಲೀಸ್ ಇಲಾಖೆ ಕೆಲಸ ಮಾಡುತ್ತಿದೆ. ಕರ್ನಾಟಕ ರಾಜ್ಯವನ್ನು ಕೋಮುವಾದಿಗಳ ಮತ್ತು ಗೂಂಡಾಗಳ ಕೈಯಲ್ಲಿ ಕೊಟ್ಟು ಸರ್ಕಾರ ಮೌನವಾಗಿ ಕುಳಿತಿದೆ. ಸಮಾಜದಲ್ಲಿ ಅರಾಜಕತೆ ಸೃಷ್ಟಿಸುವವರ ಮೇಲೆ ಕ್ರಮ ತೆಗೆದುಕೊಳ್ಳುವಲ್ಲಿಯೂ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.
Mangalore Congress party has never said Savarkar is not a freedom fighter says MLA UT Khader
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm