ಬ್ರೇಕಿಂಗ್ ನ್ಯೂಸ್
05-10-20 06:32 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 5: ಚುನಾವಣೆ ಸಂದರ್ಭದಲ್ಲಿ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ಕೆಪಿಸಿಸಿ ಸದಸ್ಯ ಐವನ್ ಡಿಸೋಜಾ ಪ್ರಶ್ನೆ ಮಾಡಿದ್ದಾರೆ.
ಸಿಬಿಐ ದಾಳಿ ಬಿಜೆಪಿ ರಾಜಕೀಯ ಉದ್ದೇಶ ಹೊಂದಿದೆ. ಇಡಿ, ಐ ಟಿ ಬಳಿಕ ಕೇಂದ್ರ ಸರಕಾರ ಈಗ ಸಿಬಿಐಯನ್ನು ದುರ್ಬಳಕೆ ಮಾಡಿದೆ. ದ್ವೇಷ ರಾಜಕಾರಣದಿಂದ ಈ ದಾಳಿ ನಡೆಸಲಾಗಿದೆ. ಈ ದಾಳಿ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಟುವಾಗಿ ಟೀಕಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಐವನ್ ಡಿಸೋಜ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು.
ಉಪ ಚುನಾವಣೆಗೆ ಮೊದಲೇ ಬಿಜೆಪಿ ತನ್ನ ಸೋಲು ಒಪ್ಪಿಕೊಂಡಿದೆ. ಸೋಲಿನ ಭಯದಿಂದ ಸಿಬಿಐ ದಾಳಿ ನಡೆಸಿದೆ. ಭ್ರಷ್ಟಾಚಾರ ವಿಚಾರದಲ್ಲಿ ದಾಳಿ ನಡೆಸುವುದಿದ್ದರೆ ಇವರಿಗೆ ಚುನಾವಣೆ ಸಂದರ್ಭದಲ್ಲಿಯೇ ನೆನಪಾಗುವುದೇ ? ಭ್ರಷ್ಟಾಚಾರ ಬಗ್ಗೆ ತನಿಖೆ ನಡೆಸುವುದಿದ್ದರೆ ಮುಖ್ಯಮಂತ್ರಿ ತಮ್ಮ ಮಗನ ಬಗ್ಗೆ ತನಿಖೆ ನಡೆಸಲಿ. ತಾಕತ್ತಿದ್ದರೆ ತಮ್ಮ ಮಗ ಕಿಕ್ ಬ್ಯಾಕ್ ಪಡೆದ ಬಗ್ಗೆ ತನಿಖೆಗೆ ಆದೇಶಿಸಲಿ. ಯಡಿಯೂರಪ್ಪ ಅವರಿಗೆ ಗಂಡಸ್ತನ ಇದ್ರೆ ತಮ್ಮ ಮಗ 17 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದ ಬಗ್ಗೆ ತನಿಖೆಗೆ ಆದೇಶಿಸಲಿ ಎಂದು ಸವಾಲು ಹಾಕಿದ್ದಾರೆ.
ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಆರ್ ಟಿ ಜಿ ಎಸ್ ಮುಖಾಂತರ ಲಂಚ ಪಡೆದಿದ್ದಾರೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕೆಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ಈ ಪ್ರಕರಣದಲ್ಲಿ ಬಿಜೆಪಿಯ ಹಲವರ ಮೇಲೆ ತನಿಖೆ ಆಗಬೇಕಿದೆ ಎಂದು ಐವನ್ ಡಿಸೋಜ ಒತ್ತಾಯಿಸಿದ್ದಾರೆ.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm