ಬ್ರೇಕಿಂಗ್ ನ್ಯೂಸ್
06-10-20 11:45 am Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 06: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಸೋಂಕು ಎಲ್ಲೆಂದರಲ್ಲಿ ಹರಡುತ್ತಿದೆ. ಆದರೆ, ಜಿಲ್ಲಾಡಳಿತ ಕೆಲವೊಂದು ಚಟುವಟಿಕೆಗಳಿಗೆ ಅ.15ರ ಬಳಿಕ ಮುಕ್ತ ಅವಕಾಶ ನೀಡುವ ಸುಳಿವು ನೀಡಿದೆ.
ಅ.15ರ ಬಳಿಕ ಕೆಲವೊಂದು ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗುವುದು. ಆದರೆ ಕೋವಿಡ್ ನಿಯಮಗಳಲ್ಲಿ ಯಾವುದೇ ಸಡಿಲಿಕೆ ಇರುವುದಿಲ್ಲ. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲನೆ ಇತ್ಯಾದಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಮುಖವಾಗಿ ಶಾಲೆ, ಕಾಲೇಜು ಸೇರಿದಂತೆ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳ ಚಟುವಟಿಕೆಗಳಿಗೆ ಅ.15ರ ನಂತರ ಹಂತ-ಹಂತವಾಗಿ ಅನುಮತಿ ಸಿಗಲಿದೆ. ಕಂಟೈನ್ಮೆಂಟ್ ವಲಯ ಹೊರತುಪಡಿಸಿ ಇತರೆಡೆ ಈಜುಕೊಳ, ಸಿನೆಮಾ ಮಂದಿರ/ ರಂಗಮಂದಿರ/ ಮಲ್ಟಿಪ್ಲೆಕ್ಸ್ಗಳನ್ನು, ಮನೋರಂಜನಾ ಉದ್ಯಾನಗಳು ಮತ್ತು ಇನ್ನಿತರ ಚಟುವಟಿಕೆಗೆ ಷರತ್ತು ಸಹಿತ ಅನುಮತಿ ನೀಡಲಾಗುತ್ತದೆ. ಒಳಾಂಗಣ ಸ್ಥಳಗಳಲ್ಲಿ 200 ಜನರ ಪರಿಮಿತಿಗೆ ಒಳಪಟ್ಟು ಸಭಾಭವನದ ಒಟ್ಟು ಸಾಮರ್ಥ್ಯದ ಗರಿಷ್ಠ ಶೇ. 50ರಷ್ಟಕ್ಕೆ ಅನುಮತಿ ದೊರೆಯಲಿದೆ.
ಜಿಲ್ಲೆಯೊಳಗೆ ಹಾಗೂ ಜಿಲ್ಲೆಯ ಹೊರಗೆ ಓಡಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಅಂತಾರಾಷ್ಟ್ರೀಯ ವಿಮಾನ ಪ್ರಯಾಣದ ಮೇಲೆ ನಿರ್ಬಂಧ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am