ಬ್ರೇಕಿಂಗ್ ನ್ಯೂಸ್
30-08-22 10:19 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಫಾಜಿಲ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ತೋರಿಕೆಗೆ ಮಾತ್ರ ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಕೃತ್ಯದ ಹಿಂದೆ ಯಾರಿದ್ದಾರೆ, ಯಾರೆಲ್ಲ ಸೇರಿ ಸಂಚು ನಡೆಸಿದ್ದಾರೆ ಎಂಬ ಬಗ್ಗೆ ತನಿಖೆ ಆಗಿಲ್ಲ. ಕೃತ್ಯದ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ ಎಂದು ಫಾಝಿಲ್ ತಂದೆ ಫಾರೂಕ್ ಕಣ್ಣೀರು ಹಾಕಿದ್ದಾರೆ. ನನ್ನ ಮಗನಿಗೆ ಬಂದಿರುವ ಸ್ಥಿತಿ ಇನ್ಯಾರಿಗೂ ಬರಬಾರದು. ಇವರನ್ನು ಶಿಕ್ಷಿಸದೆ ಬಿಟ್ಟರೆ ಮತ್ತೆ ಇಂತಹದ್ದೇ ಕೃತ್ಯ ನಡೆಯುತ್ತದೆ ಎಂದು ಹೇಳಿದ್ದಾರೆ.
ಸುರತ್ಕಲ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಫಾರೂಕ್ ಅವರು, 27 ವರ್ಷ ಹಳೆಯ ಕಾರಿನಲ್ಲಿ ಏಳು ಮಂದಿ ಆರೋಪಿಗಳು ಪರಾರಿಯಾಗಲು ಸಾಧ್ಯನಾ? ಇದ್ರ ಹಿಂದೆ ರಾಜಕೀಯ ವ್ಯಕ್ತಿಗಳ ಕೈವಾಡ ಇದೆ. ಷಡ್ಯಂತ್ರ ನಡೆಸಿ ಮಗನನ್ನು ಕೊಂದಿದ್ದಾರೆ. ಕೃತ್ಯಕ್ಕೆ ಸಹಕಾರ ನೀಡಿದ ನೆಪದಲ್ಲಿ ಪಲ್ಲಮಜಲು ನಿವಾಸಿಯನ್ನು ಬಂಧಿಸಲಾಗಿದೆ. ಆದರೆ ಆತನನ್ನು ನೋಡಿದರೆ, ಆತ ಹಣ ನೀಡೋದಲ್ಲ. ಚಹಾ ಕುಡಿಯಲು ಆತನಿಗೇ ಯಾರಾದ್ರೂ ಹಣ ನೀಡಬೇಕು ಎನ್ನುವಂತಿದ್ದಾನೆ. ಅಂಥವರು ಕೃತ್ಯಕ್ಕೆ ಹಣ ಸಹಾಯ ಮಾಡಿದ್ದಾರೆ ಎಂದರೆ ನಂಬುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಇಲ್ಲಿನ ಪೊಲೀಸ್ ಅಧಿಕಾರಿಗಳು ಸರಿಯಾಗಿದ್ದಾರೆ, ಸರಿಯಾಗಿಲ್ಲ ಎಂದು ಹೇಳುವುದಿಲ್ಲ. ಆದರೆ ರಾಜಕೀಯದವರು ಪೊಲೀಸರ ಕೈ ಕಟ್ಟಿ ಹಾಕಿದ್ದಾರೆ. ಕೃತ್ಯದ ಹಿಂದೆ ಕಾಣದ ಕೈಗಳ ಸಹಕಾರ ಇದೆ. ಅವರನ್ನು ಬಂಧಿಸಿಲ್ಲ ಎಂದು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೂರು ವಾಹನಗಳ ಮಾಲೀಕರು ಯಾರು ಎಂಬುದನ್ನು ಬಹಿರಂಗಪಡಿಸಿಲ್ಲ. ಆಯುಧಗಳನ್ನು ಪೂರೈಸಿದ್ದು ಯಾರು ಎಂದು ಹೇಳಿಲ್ಲ. ಕೇವಲ ಸಿಸಿಟಿವಿ ಫೂಟೇಜ್ ಹಿಡಿದು ನಾಮಕಾವಸ್ತೆಗೆ ಪ್ರಕರಣವನ್ನು ಮುಗಿಸಿದ್ದಾರೆ. ಕೊಲೆಯ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ನಮ್ಮಲ್ಲು ಕೆಲವು ದಾಖಲೆಗಳಿವೆ. ಪೊಲೀಸರು ಕೇಳಿದರೆ ಆ ದಾಖಲೆಗಳನ್ನು ನೀಡಲು ಸಿದ್ಧರಿದ್ದೇವೆ, ಫಾಝಿಲ್ ಕೊಲೆಯ ಹಿಂದೆ ಇರುವ ಕಾಣದ ಕೈಗಳನ್ನು ಪೊಲೀಸರು ಹೊರತರಬೇಕು ಎಂದವರು ಆಗ್ರಹಿಸಿದರು.
Farooq, father of youngster Fazil who was brutally hacked to death in Surathkal, alleged that more arrests need to be done in his son's murder case.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm