ಬ್ರೇಕಿಂಗ್ ನ್ಯೂಸ್
01-09-22 09:38 pm Mangalore Correspondent ಕರಾವಳಿ
ಮಂಗಳೂರು, ಸೆ.1 : ಪ್ರಧಾನಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹೈಎಲರ್ಟ್ ಮಾಡಲಾಗಿದೆ. ಕಾರ್ಯಕ್ರಮ ನಡೆಯುವ ವೇದಿಕೆಯನ್ನು ಸಂಪೂರ್ಣ ಎಸ್ ಪಿಜಿ ಭದ್ರತಾ ತಂಡ ವಶಕ್ಕೆ ಪಡೆದಿದೆ.
ಕಾರ್ಯಕ್ರಮದ ಸಭಾಂಗಣ, ವೇದಿಕೆ ಮತ್ತು ಬೃಹತ್ ಪೆಂಡಾಲ್ ಅಳವಡಿಕೆ ಕಾರ್ಯ ಸಂಪೂರ್ಣ ಆಗಿದ್ದು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಬಂದೋಬಸ್ತ್ ಮತ್ತು ಅಂತಿಮ ಹಂತದ ಸಿದ್ಧತೆಯನ್ನು ವೀಕ್ಷಣೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ದ.ಕ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ಗೃಹ ಸಚಿವರು ಪೆಂಡಾಲ್ ಮತ್ತು ವೇದಿಕೆಯನ್ನು ವೀಕ್ಷಣೆ ಮಾಡಿದ್ದಾರೆ. ಅಲ್ಲದೆ, ಭದ್ರತೆ ಬಗ್ಗೆಯೂ ನಿಗಾ ವಹಿಸಿದ್ದಾರೆ.
ಸುಮಾರು 25 ಎಕರೆ ಜಾಗದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು ಎರಡು ಜಿಲ್ಲೆಗಳ ಸರಕಾರಿ ನೌಕರರು, ಸ್ವಸಹಾಯ ಗುಂಪುಗಳ ಸದಸ್ಯರು, ಕೇಂದ್ರ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ. ಇದಲ್ಲದೆ, ಎರಡೂ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವೇದಿಕೆಯ ಆಸುಪಾಸಿನಲ್ಲಿ 10ಕ್ಕೂ ಹೆಚ್ಚು ಎಲ್.ಇ.ಡಿ ಪರದೆ ಅಳವಡಿಸಲಾಗಿದೆ. ವೇದಿಕೆಯ ಸುತ್ತ ತಡೆಬೇಲಿ ಹಾಕಿದ್ದು ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಅಲ್ಲದೆ, ಮೈದಾನದ ಸುತ್ತಲೂ ತಡೆಬೇಲಿ ಹಾಕಿದ್ದಾರೆ.
ಹೊರ ಜಿಲ್ಲೆಗಳಿಂದಲೂ ಹೆಚ್ಚುವರಿ ಪೊಲೀಸರನ್ನು ಕರೆಸಿ ಅಲ್ಲಲ್ಲಿ ನಿಯೋಜನೆ ಮಾಡಲಾಗಿದೆ. ಒಟ್ಟು ಮೂರು ಸಾವಿರಕ್ಕೂ ಹೆಚ್ಚು ಪೊಲೀಸರು ಮೈದಾನ ಮತ್ತು ಆಸುಪಾಸಿನಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದಾರೆ. ರಾಪಿಡ್ ಆ್ಯಕ್ಷನ್ ಫೋರ್ಸ್ ತಂಡವನ್ನೂ ಕರೆಸಲಾಗಿದ್ದು ಯಾವುದೇ ಅಹಿತಕರ ಘಟನೆ ನಡೆದಲ್ಲಿ ಈ ಪಡೆ ಕ್ರಮಕ್ಕೆ ಮುಂದಾಗಲಿದೆ.
ಡಿಜಿಪಿ, ಎಡಿಜಿಪಿ ಭದ್ರತೆ ಹೊಣೆ
ವೇದಿಕೆ ಪರಿಶೀಲನೆ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರಧಾನಿಯವರು ಬಂದು ವಾಪಾಸ್ ಹೋಗುವವರೆಗೆ ಎಲ್ಲಾ ಭದ್ರತೆ ಮಾಡಲಾಗಿದೆ. ಡಿಜಿಪಿ ಮತ್ತು ಎಡಿಜಿಪಿಯವರು ಸಂಪೂರ್ಣ ಭದ್ರತೆ ನೋಡಿಕೊಳ್ತಾರೆ. 100 ಜನ ಉನ್ನತ ಪೊಲೀಸ್ ಅಧಿಕಾರಿಗಳು ಇಲ್ಲಿ ಇರ್ತಾರೆ. ಸುಮಾರು 2000 ಸಾವಿರ ಸಿವಿಲ್ ಪೊಲೀಸರನ್ನು ಭದ್ರತೆಗೆ ನೇಮಿಸಲಾಗಿದೆ. ಕೆಎಸ್ಸಾರ್ಪಿ, ಸಿಎಆರ್, ಎಎನ್ ಎಫ್, ಆರ್ ಎಎಫ್, ಕೋಸ್ಟಲ್ ಸೆಕ್ಯೂರಿಟಿ, ಐಎಸ್ ಡಿ ಹಾಗೂ ಗರುಡ ಪಡೆ ಇರುತ್ತದೆ. ಒಟ್ಟಾರೆ ಮೂರು ಸಾವಿರಕ್ಕೂ ಹೆಚ್ಚು ಪೊಲೀಸ್ ಭದ್ರತೆ ಇರಲಿದೆ ಎಂದು ತಿಳಿಸಿದ್ದಾರೆ.
As Modi to arrive to Mangalore high alert has been issued all over the city for which three thousand policemen have been deployed for security purposes.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm