ಬ್ರೇಕಿಂಗ್ ನ್ಯೂಸ್
02-09-22 01:48 pm Mangalore Correspondent ಕರಾವಳಿ
ಮಂಗಳೂರು, ಸೆ.2: ಮಂಗಳೂರು ಕ್ಷೇತ್ರದ ಶಾಸಕ, ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿರುವ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಆದಕಾರಣ ರಾಜ್ಯದ ಮುಖ್ಯಮಂತ್ರಿಗಳ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರಧಾನ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮುಂದಿಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿಯವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರಮುಖ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಲು ಶಾಸಕ ಯು.ಟಿ.ಖಾದರ್ ನಿರ್ಧರಿಸಿದ್ದರು. ಇದೀಗ ಶಾಸಕರಿಗೆ RTPCR Test Positive ಬಂದ ಕಾರಣ ಪ್ರಧಾನಿ ಭೇಟಿ ಅಸಾಧ್ಯವಾದ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯಮಂತ್ರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿರವರಿಗೆ ಮನವಿ ಸಲ್ಲಿಸಲಿದ್ದಾರೆ.
ಪ್ರಧಾನ ಬೇಡಿಕೆಗಳು
▪️ತುಳುಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕೆನ್ನುವುದು ತುಳುವರ ಬಹುಕಾಲದ ಬೇಡಿಕೆ. ಈ ಬೇಡಿಕೆಯನ್ನು ಈಡೇರಿಸಬೇಕಾಗಿ ಕೋರಿಕೆ.
▪️ದಕ್ಷಿಣ ಕನ್ನಡ ಜಿಲ್ಲೆಯ NMPA, ONGC, AIRPORT, MRPL, BANK ಗಳಲ್ಲಿ ದಕ್ಷಿಣ ಕನ್ನಡ
ಜಿಲ್ಲೆಯ ತುಳುವರಿಗೆ ಹಾಗೂ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ಪ್ರಥಮ ಆದ್ಯತೆ ನೀಡುವುದು.
▪️ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ತುಳುನಾಡಿನ ಕಾರ್ಣಿಕ ಪುರುಷರಾದ ಕೋಟಿ ಚೆನ್ನಯರ ಹೆಸರನ್ನು ಇಡುವುದು.
▪️ಕರಾವಳಿ ಭಾಗದ ತಲಪಾಡಿಯಿಂದ ಉಡುಪಿಯಿಂದ ಹಿಡಿದು ಕಾರವಾರದ ವರೆಗೆ ಕಡಲ್ಗೊರೆತ ಸಮಸ್ಯೆ ತೀವ್ರವಾಗಿದ್ದು ಇದನ್ನು ಹಾಗೂ ಸಿ.ಆರ್.ಜೆಡ್ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳುವುದು.
▪️ಮಂಗಳೂರು- ಬೆಂಗಳೂರು- ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಂಗ ಮಾರ್ಗದ
ಯೋಜನೆಯನ್ನು ಶೀಘ್ರವಾಗಿ ಆರಂಭಿಸಲು ಕ್ರಮಕೈಗೊಳ್ಳುವುದು.
▪️ಅವ್ಯವಸ್ಥೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಹಾಗೂ ಟೋಲ್ ಸಮಸ್ಯೆಯನ್ನು ಸೂಕ್ತ ರೀತಿಯಲ್ಲಿ
ಬಗೆಹರಿಸಿ ಜನರಲ್ಲಿರುವ ಗೊಂದಲಕ್ಕೆ ಮುಕ್ತಿ ನೀಡುವುದು.
Mangalore Make Tulu as recognised language in Dakshina Kannada UT Khaders request to Modi
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm