ಬ್ರೇಕಿಂಗ್ ನ್ಯೂಸ್
07-09-22 10:59 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಹಸಿರು ವಲಯ ನಿರ್ಮಿಸಲು ಹಿಂದೇಟು ಹಾಕುತ್ತಿರುವ ಎಮ್ಆರ್ ಪಿಎಲ್, ಗಂಭೀರ ಪರಿಸರ ಮಾಲಿನ್ಯ ಎಸಗುತ್ತಿರುವ ಅದಾನಿ ವಿಲ್ಮಾ, ರುಚಿಗೋಲ್ಡ್, ಯುಬಿ ಬಿಯರ್ ಸಹಿತ ಬೃಹತ್ ಕೈಗಾರಿಕೆಗಳ ಮೇಲೆ ಕ್ರಮ ಕೈಗೊಳ್ಳದ ಮಾಲಿನ್ಯ ನಿಯಂತ್ರಣ ಮಂಡಳಿಯ ವಿರುದ್ಧ ನಾಗರಿಕ ಹೋರಾಟ ಸಮಿತಿ, ಜೋಕಟ್ಟೆ ವತಿಯಿಂದ ಅಣಕು ಶವಯಾತ್ರೆ, ಪ್ರತಿಕೃತಿ ದಹನ ಪ್ರತಿಭಟನೆ ಬೈಕಂಪಾಡಿ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮುಂದೆ ನಡೆಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಪರಿಸರ ಮಾಲಿನ್ಯ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕಾದ ಮಾಲಿನ್ಯ ನಿಯಂತ್ರಣ ಮಂಡಳಿ ಬೃಹತ್ ಕೈಗಾರಿಕೆಗಳ ಅಡಿಯಾಳಾಗಿ ಅಕ್ರಮಗಳನ್ನು ಮುಚ್ಚಿ ಹಾಕುವ ಕೆಲಸ ಮಾಡುತ್ತಿದೆ. ಇದರಿಂದಾಗಿ ಜೋಕಟ್ಟೆ, ಬಜ್ಪೆ, ಬೈಕಂಪಾಡಿ, ಸುರತ್ಕಲ್ ಮುಂತಾದ ಕೈಗಾರಿಕಾ ಬಾಹುಳ್ಯ ಪ್ರದೇಶಗಳು ಗಂಭೀರ ಕೈಗಾರಿಕಾ ಮಾಲಿನ್ಯಕ್ಕೆ ಗುರಿಯಾಗಿದ್ದು ಜನರ ಆರೋಗ್ಯಕ್ಕೆ ಕಂಟಕ ಎದುರಾಗಿದೆ ಎಂದು ಆರೋಪಿಸಿದರು.
ಸರಕಾರದ ಆದೇಶದ ಹೊರತಾಗಿಯು ಹಸಿರು ವಲಯ ನಿರ್ಮಾಣಕ್ಕಾಗಿ ಎಂ ಆರ್ ಪಿ ಎಲ್ 27 ಎಕರೆ ಭೂಸ್ವಾಧೀನಕ್ಕೆ ಸಹಕರಿಸುತ್ತಿಲ್ಲ. 33 ಶೇಕಡಾ ಜಮೀನಿನಲ್ಲಿ ಹಸಿರು ವಲಯ ನಿರ್ಮಿಸದಿರುವುದು ಕಂಪೆನಿಗೆ ಬೀಗ ಜಡಿಯುವ ಅಪರಾಧವಾದರೂ ಮಾಲಿನ್ಯ ನಿಯಂತ್ರಣ ಮಂಡಳಿ ಎಂ ಆರ್ ಪಿಎಲ್ ಅಧಿಕಾರಿಗಳಿಗೆ ವಿಧೇಯವಾಗಿ ನಡೆದುಕೊಳ್ಳುತ್ತಿದೆ. ಗೌತಮ್ ಅದಾನಿಯ ವಿಲ್ಮಾ, ಬಾಬಾ ರಾಮ್ ದೇವ್ ಒಡೆತನದ ರುಚಿಗೋಲ್ಡ್ ಮತ್ತಿತರ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಬೃಹತ್ ಕಂಪೆನಿಗಳ ಮಾಲಿನ್ಯದಿಂದ ಫಲ್ಗುಣಿ ನದಿ ವಿಷಮಯ ಆಗುತ್ತಿದ್ದರೂ ಮಾಲಿನ್ಯ ನಿಯಂತ್ರಣ ಮಂಡಳಿ ಕಣ್ಣು ಮುಚ್ಚಿ ಕೂತಿದೆ. ಈ ಕುರಿತು ಹದಿನೈದು ದಿನಗಳ ಅಂತರದಲ್ಲಿ ಎರಡು ಬಾರಿ ಮಾಲಿನ್ಯ ನಿಯಂತ್ರಣ ಮಂಡಳಿ ಮುಂದೆ ಪ್ರತಿಭಟನೆ ನಡೆಸಿದರೂ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಇಂತಹ ಹೊಣೆಗೇಡಿತನದ ವಿರುದ್ದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ ಎಂದು ಮುನೀರ್ ಕಾಟಿಪಳ್ಳ ಹೇಳಿದರು.
ಮಾಜಿ ಉಪಮೇಯರ್ ಪುರುಷೋತ್ತಮ ಚಿತ್ರಾಪುರ, ಡಿವೈಎಫ್ಐ ಮುಖಂಡರಾದ ಬಿ ಕೆ ಇಮ್ತಿಯಾಜ್, ಶ್ರೀನಾಥ್ ಕುಲಾಲ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಆರಂಭದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಅಣಕು ಶವಯಾತ್ರೆಯನ್ನು ಬೈಕಂಪಾಡಿ ಜಂಕ್ಷನ್ ನಿಂದ ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿ ವರಗೆ ನಡೆಸಲಾಯಿತು. ತಾಲೂಕು ಪಂಚಾಯತ್ ಮಾಜಿ ಸದಸ್ಯ ಬಿ ಎಸ್ ಬಶೀರ್, ಹೋರಾಟ ಸಮಿತಿ ಸಹ ಸಂಚಾಲಕ ಅಬೂಬಕ್ಕರ್ ಬಾವ, ಗ್ರಾಪಂ ಸದಸ್ಯೆ ಜುಬೇದಾ, ಮನೋಜ್ ಜೋಕಟ್ಟೆ, ಶ್ರೀನಿವಾಸ್, ಸುರೇಂದ್ರ ಜೋಕಟ್ಟೆ, ಶೇಖರ್ ನಿರ್ಮುಂಜೆ, ಇಕ್ಬಾಲ್ ಜೋಕಟ್ಟೆ, ಚಂದ್ರ ಶೇಖರ್, ಸಿಲ್ವಿಯಾ, ಯಮುನಾ ಕೆಂಜಾರು, ಹನೀಫ್ ಜೋಕಟ್ಟೆ, ರಾಜು ಜೋಕಟ್ಟೆ, ಲಾನ್ಸಿ ಜೋಕಟ್ಟೆ, ದೊಂಬಯ್ಯ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
Protest by DYFI against MRPL over pollution of deadly chemicals in the air.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm