ಬ್ರೇಕಿಂಗ್ ನ್ಯೂಸ್
07-10-20 08:48 pm Headline Karnataka News Network ಕರಾವಳಿ
ಕಾರವಾರ, ಅಕ್ಟೋಬರ್ 07 : ಭಯೋತ್ಪಾದಕರ ದಾಳಿ, ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಿಶೀಲಿಸಲು ನಗರದ ವಿವಿಧೆಡೆ ಬುಧವಾರ 'ಸಾಗರ ಕವಚ' ಅಣಕು ಕಾರ್ಯಾಚರಣೆ ಹಮ್ಮಿಕೊಳ್ಳಲಾಯಿತು.
ವಿದ್ವಂಸಕ ಕೃತ್ಯಗಳನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮಗಳನ್ನು ಯಾವ ರೀತಿ ಅನುಸರಿಸಬೇಕು ಮತ್ತು ಭದ್ರತಾ ದೃಷ್ಟಿಯಿಂದ ಪ್ರಸ್ತುತ ರಕ್ಷಣಾ ಕ್ರಮಗಳು ಹಾಗೂ ಸಿದ್ಧತೆಗಳು ಯಾವ ರೀತಿ ಸಮರ್ಥವಾಗಿವೆ ಎಂಬುದನ್ನು ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆ, ಕರಾವಳಿ ಕಾವಲು ಪೊಲೀಸ್, ಭಾರತೀಯ ತಟ ರಕ್ಷಣಾ ದಳ ಹಾಗೂ ಭಾರತೀಯ ನೌಕಸೇನೆ ಜಂಟಿಯಾಗಿ ಅಕ್ಟೋಬರ್ 7 ಹಾಗೂ 8 ರಂದು ಸಾಗರ ಕವಚ ಅಣುಕು ಕಾರ್ಯಾಚರಣೆಯನ್ನು ನಡೆಸುತ್ತಿದೆ.

ಕಾರ್ಯಾಚರಣೆಯ ಭಾಗವಾಗಿ ಪೊಲೀಸರು ಕಾಳಿ ನದಿ ಸೇತುವೆಯ ಬಳಿ, ಬೈತಖೋಲ್ ಬಂದರಿಗೆ ಹೋಗುವ ದಾರಿಯಲ್ಲಿ, ರೈಲು ನಿಲ್ದಾಣ, ಕಡಲತೀರಗಳು, ಚರ್ಚ್, ಮಸೀದಿ, ದೇವಸ್ಥಾನಗಳಲ್ಲಿ ಹಾಗೂ ನಗರದ ವಿವಿಧ ಕಡೆಗಳಲ್ಲಿ ತಪಾಸಣೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿ ವಾಹನಗಳನ್ನು ಪರಿಶೀಲನೆ ಮಾಡಿದರು.
ಈ ಕಾರ್ಯಾಚರಣೆ ಗುರುವಾರವೂ ಮುಂದುವರಿಯಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು, ಜಿಲ್ಲಾಡಳಿತದ ಅಧಿಕಾರಿಗಳು ಮನವಿ ಮಾಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am