ಬ್ರೇಕಿಂಗ್ ನ್ಯೂಸ್
12-09-22 10:25 pm Mangalore Correspondent ಕರಾವಳಿ
ಮಂಗಳೂರು, ಸೆ.12: ಈ ಬಾರಿ ದಸರಾ ರಜೆಯನ್ನು ನವರಾತ್ರಿ ಕಳೆದ ಬಳಿಕ ಅ.3ರಿಂದ 16ರ ವರೆಗೆ ನೀಡಲಾಗಿತ್ತು. ಈ ಬಗ್ಗೆ ಸಾರ್ವಜನಿಕ ನೆಲೆಯಲ್ಲಿ ಆಕ್ಷೇಪ ಕೇಳಿಬರುತ್ತಿದ್ದಂತೆ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಶಿಕ್ಷಣ ಸಚಿವ ಬಿಸಿ ನಾಗೇಶ್ ಗಮನಕ್ಕೆ ತಂದಿದ್ದು, ದಸರಾ ರಜೆಯ ಅವಧಿಯನ್ನು ಮರು ನಿಗದಿಗೊಳಿಸುವಂಜೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ.
ಶೈಕ್ಷಣಿಕ ಮಾರ್ಗಸೂಚಿ ಪ್ರಕಾರ ದಸರಾ ರಜೆಯನ್ನು ನೀಡಲಾಗಿದ್ದರೂ, ಆಯಾ ಸ್ಥಳೀಯ ಸನ್ನಿವೇಶಗಳಿಗೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ಬದಲಾವಣೆ ಮಾಡಲು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಓ ಅವರಿಗೆ ಅನುಮತಿ ಈಗಾಗಲೇ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ರಜೆಯನ್ನು ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ಸೆ.26ರಿಂದ 10ರ ವರೆಗೆ ನೀಡುವಂತೆ ಕೋರಿಕೆ ಬಂದಿದ್ದು, ಅದರಂತೆ ಪರಿಶೀಲಿಸಿ ಶೈಕ್ಷಣಿಕ ಚಟುವಟಿಕೆಗಳನ್ನು ಸರಿದೂಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಅಲ್ಲದೆ, ಅ.2ರ ಗಾಂಧಿ ಜಯಂತಿ ಆಚರಣೆಯನ್ನು ನಡೆಸುವ ಷರತ್ತಿನೊಂದಿಗೆ ರಜೆ ಆದೇಶ ನೀಡುವಂತೆ ಜಿಲ್ಲಾಧಿಕಾರಿಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಸೂಚನೆ ನೀಡಿದ್ದಾರೆ.
ನವರಾತ್ರಿ ಕಳೆದ ಬಳಿಕ ದಸರಾ ರಜೆಯನ್ನು ನೀಡಿದರೆ ಹಬ್ಬದ ಮಜಾ ಅನುಭವಿಸಲು ಸಾಧ್ಯವಾಗುವುದಿಲ್ಲ ಎಂದು ಜನರು ಆಕ್ಷೇಪ ತೆಗೆದಿದ್ದರು. ಮಂಗಳೂರು ದಸರಾ ಎಂದೇ ಹೆಸರಾಗಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ದಸರಾ ಉತ್ಸವ ಸೆ.25ರಿಂದ .5ರ ವರೆಗೆ ನಡೆಯುವುದರಿಂದ ಇದೇ ಅವಧಿಯಲ್ಲಿ ರಜೆ ನೀಡುವಂತೆ ಕೆಲವರು ಕೇಳಿಕೊಂಡಿದ್ದರು. ಇದರಂತೆ, ಶಾಸಕ ವೇದವ್ಯಾಸ ಕಾಮತ್, ಶಿಕ್ಷಣ ಸಚಿವರ ಗಮನಕ್ಕೆ ತಂದಿದ್ದರು.
Dasara holidays from September 26th to October 10th in Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 12:06 pm
HK News Desk
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
15-11-25 12:12 pm
Mangalore Correspondent
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm