ಬ್ರೇಕಿಂಗ್ ನ್ಯೂಸ್
19-09-22 02:01 pm Mangalore Correspondent ಕರಾವಳಿ
ಮಂಗಳೂರು, ಸೆ.19: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಈ ಬಾರಿ ಮಂಗಳೂರು ದಸರಾ ಮಹೋತ್ಸವ ಸೆ.26ರಿಂದ ಅ.6ರ ವರೆಗೆ ಅತ್ಯಂತ ವೈಭವದಿಂದ ನಡೆಯಲಿದೆ ಎಂದು ಕ್ಷೇತ್ರದ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ.
ದಸರಾ ಮಹೋತ್ಸವ ಕುರಿತು ಭಾನುವಾರ ವಿವಿಧ ಸಮಿತಿಗಳ ಪೂರ್ವಭಾವಿ ಸಭೆ ನಡೆಸಲಾಗಿದ್ದು ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದರು. ದಸರಾ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಲಾಗುವುದು. ಆಮಂತ್ರಣ ಪತ್ರಿಕೆಯನ್ನು ಅವರಿಗೆ ಕಳುಹಿಸಿ ಕೊಟ್ಟು ಸ್ವತಃ ನಾನೇ ಆಹ್ವಾನಿಸುತ್ತೇನೆ. ಅವರ ಸಮಯ ಗೊತ್ತುಪಡಿಸಿ ಉದ್ಘಾಟನೆ ನಿಗದಿ ಪಡಿಸಲಾಗುವುದು ಎಂದು ಪೂಜಾರಿ ತಿಳಿಸಿದ್ದಾರೆ.
ಮಂಗಳೂರು ದಸರಾಕ್ಕೆ ದೂರದ ಊರುಗಳಿಂದ 10 ಲಕ್ಷಕ್ಕೂ ಅಧಿಕ ಮಂದಿ ಬರಲಿದ್ದಾರೆ. ಅದಕ್ಕೆ ತಕ್ಕಂತೆ ಭಾರೀ ಸಿದ್ಧತೆಯನ್ನೂ ಮಾಡಲಾಗುತ್ತಿದೆ. ಪ್ರತೀ ದಿನ ಧಾರ್ಮಿಕ ಸೇವೆಗಳ ಜತೆಗೆ ಅನ್ನದಾನ ಇರಲಿದೆ. ಭಕ್ತರ ಅನುಕೂಲಕ್ಕಾಗಿ ಈ ಬಾರಿ ಚಂಡಿಕಾ ಯಾಗವನ್ನು ದೇವಸ್ಥಾನದ ಹಿಂಬದಿಯ ಗಾಜಿನ ಮನೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದರು.
ಶಾರದೆಗೆ 12 ಕೆಜಿ ತೂಕದ ರಜತಪೀಠ
ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಮಾತನಾಡಿ, ಮಂಗಳೂರು ದಸರಾದ ಶಾರದೆಗೆ ಈ ಬಾರಿ 12 ಲಕ್ಷ ರೂ. ವೆಚ್ಚದಲ್ಲಿ 12 ಕೆ.ಜಿ. ತೂಕದ ರಜತ ಪೀಠವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಸೇವಾದಳ ಮತ್ತು ಭಕ್ತರ ಸೇವೆಯಾಗಿ ಪುತ್ತೂರಿನಲ್ಲಿ ನಿರ್ಮಿಸಲಾಗುತ್ತಿದೆ. ಸೆ. 24ರಂದು ಇದನ್ನು ಕ್ಷೇತ್ರದಲ್ಲಿ ಸಮರ್ಪಣೆ ಮಾಡಲಾಗುವುದು. ಭಕ್ತರೊಬ್ಬರು ಬೆಳ್ಳಿ ವೀಣೆಯನ್ನು ಕಾಣಿಕೆಯಾಗಿ ನೀಡಲಿದ್ದಾರೆ ಎಂದರು.
ಮೇಯರ್ ಜಯಾನಂದ ಅಂಚನ್, ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್. ಸಾಯಿರಾಮ್, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿಗಳಾದ ರವಿಶಂಕರ ಮಿಜಾರು, ಕೆ. ಮಹೇಶ್ಚಂದ್ರ, ಎಂ. ಶೇಖರ್ ಪೂಜಾರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಬಿ.ಜಿ. ಸುವರ್ಣ, ಸದಸ್ಯರಾದ ಹರಿಕೃಷ್ಣ ಬಂಟ್ವಾಳ, ರಮಾನಾಥ್ ಕಾರಂದೂರು, ಶೈಲೇಂದ್ರ ವೈ. ಸುವರ್ಣ, ಎಚ್.ಎಸ್. ಜಯರಾಜ್, ಕೃತಿನ್ ಡಿ. ಅಮೀನ್, ಚಂದನ್ದಾಸ್ ಮೊದಲಾದವರು ಸಭೆಯಲ್ಲಿದ್ದರು.
Mangalore Kudroli dasara to be held from September 6th to October 6th, CM Bommai invited for inauguration said B. Janardhana Poojary.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm