ಬ್ರೇಕಿಂಗ್ ನ್ಯೂಸ್
06-10-22 10:44 pm Mangalore Correspondent ಕರಾವಳಿ
ಮಂಗಳೂರು, ಅ.6 : ನಗರದ ರಥಬೀಬಿಯ ವೆಂಕಟರಮಣ ದೇವಸ್ಥಾನದಲ್ಲಿ 100ನೇ ವರ್ಷದ ಸಾರ್ವಜನಿಕ ಶಾರದಾ ಮಹೋತ್ಸವ ನಡೆದಿದ್ದು ಹತ್ತು ದಿನಗಳ ಪೂಜೆಯ ಬಳಿಕ ಗುರುವಾರ ವಿಸರ್ಜನಾ ಮೆರವಣಿಗೆ ನಡೆಸಲಾಯಿತು.
ವೆಂಕಟರಮಣ ದೇವಸ್ಥಾನದ ಆವರಣದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ನೂರು ವರ್ಷಗಳಿಂದ ನಡೆಸಿಕೊಂಡು ಬಂದ ಶಾರದಾ ಮಹೋತ್ಸವಕ್ಕೆ ಈ ಬಾರಿ ಶತಮಾನೋತ್ಸವದ ಸಂಭ್ರಮವಾಗಿತ್ತು. ಸ್ವಾತಂತ್ರ್ಯಕ್ಕೂ ಮೊದಲೇ ದೇಶದ ಜನರನ್ನು ಏಕೀಕರಿಸುವ ಉದ್ದೇಶದಿಂದ ಜಿ.ಎಸ್.ಬಿ. ಸಮಾಜದ ಹಿರಿಯರ ದೂರದರ್ಶಿತ್ವ ಮತ್ತು ಕಲ್ಪನೆಯ ಕೂಸು ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವ ಆಗಿತ್ತು. ಅಂದಿನಿ೦ದ ಶ್ರೀ ಶಾರದಾ ಮಾತೆಯ ಮೂರ್ತಿಯನ್ನು ಮಣ್ಣಿನಲ್ಲಿ ರಚಿಸಿ, ದೇವರ ಸ್ವರೂಪದಲ್ಲಿ ಪೂಜಿಸಲು ಆರಂಭಿಸಲಾಗಿತ್ತು.
ಹತ್ತು ದಿನಗಳ ಪರ್ಯಂತ ಶ್ರೀ ಮಾತೆಯ ವಿಗ್ರಹಕ್ಕೆ ದೇವಿಯ ವಿವಿಧ ಅವತಾರಗಳ ಅಲಂಕಾರಗಳ ಮಾಡಲಾಗಿತ್ತು. ವಿಜಯದಶಮಿ ಪ್ರಯುಕ್ತ ಗುರುವಾರ ರಾತ್ರಿ ಕೊನೆಯ ಪೂಜೆ ನಡೆದು ಶ್ರೀ ವೆಂಕಟರಮಣ ದೇವರ ಪ್ರದಕ್ಷಿಣೆ ಬಳಿಕ ರಾತ್ರಿ 10 ಗಂಟೆಗೆ ಶ್ರೀ ಶಾರದಾ ಮಾತೆಯ ಬೃಹತ್ ವಿಸರ್ಜನಾ ಶೋಭಾಯಾತ್ರೆ ಹೊರಟಿತ್ತು. ಮೆರವಣಿಗೆ ಹೊರಟು ಶ್ರೀ ಮಹಾಮಾಯಿ ದೇವಸ್ಥಾನ, ಗದ್ದೆಕೇರಿ, ಕೆನರಾ ಹೈಸ್ಕೂಲ್ ಹಿಂಬದಿ ರಸ್ತೆಯಿಂದ ನವಭಾರತ ವೃತ್ತ, ಅಮ್ಮೆಂಬಳ ಸುಬ್ಬರಾವ್ ಪೈ ರಸ್ತೆ, ಡೊಂಗರಕೇರಿ, ನ್ಯೂಚಿತ್ರಾ ಟಾಕೀಸ್, ಬಸವನ ಗುಡಿ, ಚಾಮರಗಲ್ಲಿ ರಥಬೀದಿಯಾಗಿ ಬಂದು ಶ್ರೀ ಮಹಾಮಾಯಾ ತೀರ್ಥದಲ್ಲಿ ವಿಸರ್ಜಿಸುವುದು ಸಂಪ್ರದಾಯ.
ಸ್ವಯಂಸೇವಕರು ಭಜನಾ ಸೇವೆಯ ಮೂಲಕ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ವೇಷಧಾರಿಗಳಿಂದ ವಿಶೇಷ ಟ್ಯಾಬ್ಲೋಗಳು, ಹರಕೆಯ ಶಾರದಾ ಹುಲಿವೇಷದ ಟ್ಯಾಬ್ಲೋಗಳು ಜನಾಕರ್ಷಣೆ ಗಿಟ್ಟಿಸಿದವು.
100th year Sharada Mahotsava at Rathabidi begins in Mangalore.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm