ತೊಕ್ಕೊಟ್ಟಿನಲ್ಲಿ ನವಜಾತ ಶಿಶು ಪತ್ತೆ ; ಮನೆ ಮುಂದೆ ನಿಲ್ಲಿಸಿದ್ದ ಕಾರಿನಡಿ ಮಗು ಬಿಟ್ಟೋದ ಪಾಪಿಗಳು!  

07-10-22 03:39 pm       Mangalore Correspondent   ಕರಾವಳಿ

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಕೆಳಗಡೆ ನವಜಾತ ಗಂಡು ಶಿಶು ಪತ್ತೆಯಾಗಿದ್ದು ಅಸ್ವಸ್ಥಗೊಂಡಿದ್ದ ಮಗುವಿಗೆ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. 

ಉಳ್ಳಾಲ, ಅ.7 : ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಕೆಳಗಡೆ ನವಜಾತ ಗಂಡು ಶಿಶು ಪತ್ತೆಯಾಗಿದ್ದು ಅಸ್ವಸ್ಥಗೊಂಡಿದ್ದ ಮಗುವಿಗೆ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. 

ತೊಕ್ಕೊಟ್ಟು ಬಳಿಯ ಕಾಪಿಕಾಡಿನಲ್ಲಿರುವ ಗೇರು ಕೃಷಿ ಸಂಶೋಧನಾ ಕೇಂದ್ರ ಬಳಿಯ ಅಂಬಿಕಾರೋಡ್ ನಿವಾಸಿ ಅಮರ್ ಎಂಬವರ ಮನೆ ಮುಂದಿನ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಕೆಳಗಡೆ ನವಜಾತ ಶಿಶು ಪತ್ತೆಯಾಗಿದೆ. ಗುರುವಾರ ಬೆಳಗ್ಗೆ ಅಮರ್ ಅವರು ಉಳ್ಳಾಲ ಶಾರದಾ ವಿಸರ್ಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. 

ಅಮರ್ ಅವರು ತೀವ್ರ ಅಸ್ವಸ್ಥಗೊಂಡಿದ್ದ ಮಗುವನ್ನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.ಉಳ್ಳಾಲ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿದ್ದು ಮಗುವನ್ನ ಬಿಟ್ಟು ಹೋದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

New born baby found inside car in Ullal, admitted to wenlock hosptial in Mangalore.