ಬ್ರೇಕಿಂಗ್ ನ್ಯೂಸ್
14-10-22 01:55 pm Mangalore Correspondent ಕರಾವಳಿ
ಮಂಗಳೂರು, ಅ.14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಸಕ ಹರೀಶ್ ಪೂಂಜ ಬೆಂಗಳೂರಿನಿಂದ ವಿಮಾನದ ಮೂಲಕ ಗುರುವಾರ ಸಂಜೆ ಮಂಗಳೂರಿಗೆ ಮರಳಿದ್ದು ಸರ್ಕಿಟ್ ಹೌಸ್ ನಲ್ಲಿ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ರಾತ್ರಿ 11 ಗಂಟೆ ವೇಳೆಗೆ ಮಂಗಳೂರಿನಿಂದ ಖಾಸಗಿ ಕಾರಿನಲ್ಲಿ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಇನ್ನೊಂದು ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಶಾಸಕರನ್ನು ಉದ್ದೇಶಿಸಿ ಅವಾಚ್ಯ ಪದಗಳಿಂದ ನಿಂದಿಸಿ, ತಲವಾರು ತೋರಿಸಿ ಬೆದರಿಸಿದ್ದಾನೆ.
ಶಾಸಕ ಹರೀಶ್ ಪೂಂಜ ಅವರ ಅಧಿಕೃತ ಕಾರು ಹಿಂದಿನಿಂದ ತೆರಳುತ್ತಿತ್ತು. ಹರೀಶ್ ಪೂಂಜ ತನ್ನ ಕಾರು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ಬೆಳ್ತಂಗಡಿಗೆ ತೆರಳುತ್ತಿದ್ದರು. ಈ ವೇಳೆ, ಪಡೀಲ್ ಬಳಿಯ ಅಡ್ಯಾರ್ ಫ್ಲೈ ಓವರ್ ಬಳಿ ನಿಲ್ಲಿಸಿದ್ದ ಸ್ಕಾರ್ಪಿಯೋ ಕಾರು ಹಿಂಬಾಲಿಸಿದ್ದು ಫರಂಗಿಪೇಟೆಯಲ್ಲಿ ಅಡ್ಡಗಟ್ಟಿ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಶಾಸಕರಿದ್ದ ಕಾರನ್ನು ಫರಂಗಿಪೇಟೆಯಲ್ಲಿ ಪೊಲೀಸ್ ಔಟ್ ಪೋಸ್ಟ್ ಇರುವಲ್ಲಿ ಸೈಡಿಗೆ ಹಾಕುತ್ತಿದ್ದಂತೆ ಅವ್ಯಾಚ್ಯವಾಗಿ ಬೈದು ಬಿಸಿ ರೋಡ್ ಕಡೆಗೆ ಪರಾರಿಯಾಗಿದೆ. ಶಾಸಕರಿದ್ದ ಕಾರಿನಲ್ಲಿ ಪ್ರಶಾಂತ್ ಮತ್ತು ಕುಶಿತ್ ಎಂಬಿಬ್ಬರಿದ್ದರು. ಕುಶಿತ್ ಕಾರು ಚಲಾಯಿಸುತ್ತಿದ್ದು ಅವರನ್ನುದ್ದೇಶಿಸಿ ವ್ಯಕ್ತಿ ಬೆದರಿಕೆ ಹಾಕಿದ್ದಾನೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕರ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ.
Miscreants reportedly waylaid the car of Belthangady MLA Harish Poonja flashed swords. The incident was reported in the outskirts of the city at Farangipete on Thursday October 13.The incident took place while the MLA was returning from Bengaluru to Belthangady.The miscreants had followed the car from Padil to Farangipete.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 07:09 pm
HK News Desk
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
15-11-25 07:42 pm
Mangalore Correspondent
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm