ಬ್ರೇಕಿಂಗ್ ನ್ಯೂಸ್
14-10-22 07:53 pm Mangalore Correspondent ಕರಾವಳಿ
ಮಂಗಳೂರು, ಅ.14 : ಸುರತ್ಕಲ್ ಟೋಲ್ ಗೇಟ್ ತೆರವು ಮಾಡಲೇಬೇಕೆಂದು ವಿರೋಧಿ ಹೋರಾಟ ಕಾವು ಪಡೆಯುತ್ತಿದ್ದಂತೆ ಜಿಲ್ಲಾಡಳಿತ ಎಚ್ಚತ್ತುಕೊಂಡಿದೆ. ಅಕ್ಟೋಬರ್ 18ರಂದು ಟೋಲ್ ಗೇಟ್ ಮುತ್ತಿಗೆ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು ವಿವಿಧ ಸಂಘಟನೆಗಳ ಪ್ರತಿನಿಧಿಗಳು ಒಕ್ಕೊರಳ ಆಗ್ರಹ ಮುಂದಿಟ್ಟಿದ್ದಾರೆ. ಈ ನಡುವೆ, ಜಿಲ್ಲಾಡಳಿತ ಸಂಘಟನೆ ನಾಯಕರ ಜೊತೆಗೆ ನಡೆಸಿದ ಮಾತುಕತೆಯೂ ವಿಫಲವಾಗಿದೆ. ಹೆದ್ದಾರಿ ಅಧಿಕಾರಿಗಳು ಶೀಘ್ರದಲ್ಲೇ ಟೋಲ್ ಗೇಟ್ ತೆರವು ಮಾಡುತ್ತೇವೆಂದು ಜಿಲ್ಲಾಧಿಕಾರಿ ಜೊತೆಗಿನ ಸಭೆಯಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ನಿಶ್ಚಿತ ದಿನಾಂಕ ಪ್ರಕಟಿಸದೆ ಮೀನ ಮೇಷದ ಹೇಳಿಕೆಯನ್ನು ನಂಬುವುದಿಲ್ಲ ಎಂದು ಹೋರಾಟಗಾರರು ಹೇಳಿದ್ದಾರೆ.
ಶುಕ್ರವಾರ ಜಿಲ್ಲಾಡಳಿತದ ಪರವಾಗಿ ಪಣಂಬೂರು ಎಸಿಪಿ ಕಚೇರಿಯಲ್ಲಿ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಎಸಿಪಿ ಮಹೇಶ್ ಕುಮಾರ್, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಸಭೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾಡಳಿತದ ಕಡೆಯಿಂದ ಅದೇ ಹಳೇ ರಾಗವನ್ನು ಮುಂದಿಡಲಾಗಿತ್ತು. ಸುರತ್ಕಲ್ ಟೋಲ್ ಗೇಟ್ ತೆರವು ಪ್ರಕ್ರಿಯೆಯ ಆಡಳಿತಾತ್ಮಕ ಕೆಲಸ ನಡೆಯುತ್ತಿದೆ. ತೆರವುಗೊಳಿಸಲು ತೀರ್ಮಾನ ಆಗಿದೆ. ಇನ್ನು ಕೆಲವು ದಿನಗಳಲ್ಲಿ ತೆರವು ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಅಲ್ಲಿಯವರೆಗೆ ಹೋರಾಟ ಕೈ ಬಿಡುವಂತೆ ಹೋರಾಟ ಸಮಿತಿಯನ್ನು ಅಧಿಕಾರಿಗಳು ವಿನಂತಿಸಿದರು. ಟೋಲ್ ತೆರವಿನ ನಿರ್ದಿಷ್ಟ ದಿನಾಂಕ ಪ್ರಕಟಿಸದೆ ಎಂದಿನಂತೆ ಕೆಲವೇ ದಿನಗಳಲ್ಲಿ ತೆರವು ಎಂಬ ಬಾಯಿ ಮಾತಿನ ಭರವಸೆ ಮಾತ್ರ ನೀಡಲಾಯಿತು.
ಕೇವಲ ಭರವಸೆ ಕಾರಣಕ್ಕೆ ಹೋರಾಟ ಕೈಬಿಡಲ್ಲ
ಕಳೆದ ಆರು ವರ್ಷಗಳಲ್ಲಿ ಟೋಲ್ ಗೇಟ್ ತೆರವಿನ ಬಗ್ಗೆ ಹಲವು ಭರವಸೆಗಳನ್ನು ನೀಡಲಾಗಿದೆ. ಜನಪ್ರತಿನಿಧಿಗಳು, ವಿಧಾನಸಭೆಯಲ್ಲಿಯೂ ತಿಂಗಳೊಳಗೆ ಟೋಲ್ ಗೇಟ್ ತೆರವು ಎಂಬ ಹೇಳಿಕೆ ನೀಡಿದ್ದಾರೆ. ಆದರೆ ಆ ಹೇಳಿಕೆಗಳು ಜಾರಿಗೆ ಬಂದಿಲ್ಲ. ಈಗಲೂ ಭರವಸೆ ಜಾರಿಗೆ ಬರುತ್ತದೆ ಎಂಬ ವಿಶ್ವಾಸ ಜನತೆಗೆ ಇಲ್ಲ. ಆದುದರಿಂದ ಟೋಲ್ ಸಂಗ್ರಹ ಸ್ಥಗಿತಗೊಳ್ಳದೆ ಹೋರಾಟ ಹಿಂಪಡೆಯಲು ಸಾಧ್ಯವಿಲ್ಲ. ಎರಡೂ ಜಿಲ್ಲೆಗಳ ನೂರಾರು ಸಂಘಟನೆಗಳು ಅಕ್ಟೋಬರ್ 18 ರ ಮುತ್ತಿಗೆ ತೀರ್ಮಾನವನ್ನು ಬೆಂಬಲಿಸಿವೆ. ಟೋಲ್ ಸಂಗ್ರಹ ಸ್ಥಗಿತಗೊಳ್ಳದೆ, ಕೇವಲ ಭರವಸೆ ಆಧಾರದಲ್ಲಿ ಹೋರಾಟ ಮುಂದೂಡಲು ಜನತೆ ಒಪ್ಪವುದಿಲ್ಲ ಎಂದು ಹೋರಾಟ ಸಮಿತಿ ಪರವಾಗಿ ಪಾಲ್ಗೊಂಡಿದ್ದವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಟೋಲ್ ಸಂಗ್ರಹ ತಕ್ಷಣ ಕೈಬಿಡಿ
ಆದುದರಿಂದ ಟೋಲ್ ಸಂಗ್ರಹವನ್ನು ತಕ್ಷಣ ಕೈಬಿಡಬೇಕು. ಸರಕಾರದ ಹೇಳಿಕೆಯ ಪ್ರಕಾರ ಇನ್ನು ಕೆಲವೇ ದಿನದಲ್ಲಿ ತೆರವಿಗೆ ಬೇಕಾದ ಪ್ರಕ್ರಿಯೆ ಪೂರ್ಣಗೊಳ್ಳುವುದಾದರೆ, ಅಲ್ಲಿಯವರೆಗೆ ಟೋಲ್ ಸಂಗ್ರಹವನ್ನು ಕೈಬಿಡಿ. ಅದರಿಂದ ದೊಡ್ಡ ನಷ್ಟವೇನೂ ಆಗುವುದಿಲ್ಲ. ಏಳು ವರ್ಷಗಳಿಂದ ನೂರಾರು ಕೋಟಿ ರೂಪಾಯಿ ಸುರತ್ಕಲ್ ಟೋಲ್ ಗೇಟ್ ಹೆಸರಲ್ಲಿ ಸಂಗ್ರಹಿಸಲಾಗಿದೆ. ಅಕ್ಟೋಬರ್ 18 ರ ಟೋಲ್ ಗೇಟ್ ಮುತ್ತಿಗೆ ಶಾಂತಿಯುತ ನಡೆಸಲಿದ್ದೇವೆ. ಟೋಲ್ ಸಂಗ್ರಹ ಸ್ಥಗಿತಗೊಂಡಿರುವುದು ಖಾತರಿಗೊಳ್ಳುವ ವರೆಗೆ ಮುತ್ತಿಗೆ ಮುಂದುವರಿಯಲಿದೆ. ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹ ಸ್ಥಗಿತಗೊಳ್ಳದೆ ಈ ಬಾರಿಯ ಹೋರಾಟ ಮುಗಿಯುವುದಿಲ್ಲ ಎಂದು ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.
Mangalore October 18th last date for vacating illegal Surathkal toll warns DYFI.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm