ಬ್ರೇಕಿಂಗ್ ನ್ಯೂಸ್
14-10-22 10:38 pm Mangalore Correspondent ಕರಾವಳಿ
ಮಂಗಳೂರು, ಅ.14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿದ ಘಟನೆ ಕೊಲೆ ಯತ್ನ ಅಥವಾ ದಾಳಿ ನಡೆಸಿದ್ದಲ್ಲ. ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆಯಾಗಿದೆ ಎಂದು ದ.ಕ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಸ್ಪಷ್ಟನೆ ನೀಡಿದ್ದಾರೆ.
ಪ್ರಕರಣದ ಹಿನ್ನೆಲೆಯಲ್ಲಿ ಸ್ಕಾರ್ಪಿಯೋ ಕಾರು ಮತ್ತು ಅದರ ಚಾಲಕನಾಗಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು. ಈ ಬಗ್ಗೆ ಮಾಹಿತಿ ನೀಡಿದ್ದ ಎಸ್ಪಿ ಸೋನವಾಣೆ, ಆರೋಪಿ ಬಳಿ ಯಾವುದೇ ಆಯುಧಗಳು ಪತ್ತೆಯಾಗಿಲ್ಲ. ಅಲ್ಲದೆ, ಆತನ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಘಟನೆ ಬಗ್ಗೆ ತನಿಖೆ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
ಆರೋಪಿ ತನ್ನ ಕಾರಿನ ಮೇಲೆ ತಲವಾರು ಝಳಪಿಸಿದ್ದ ಎಂದು ಹರೀಶ್ ಪೂಂಜಾ ದೂರಿದ್ದರು. ಅಲ್ಲದೆ, ಶಾಸಕರ ಕಾರು ಚಾಲಕ ನವೀನ್ ನೀಡಿದ್ದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೆ, ಘಟನೆ ಹಿನ್ನೆಲೆಯಲ್ಲಿ ಗೃಹ ಸಚಿವರು ಶಾಸಕ ಪೂಂಜಾಗೆ ಗನ್ ಮ್ಯಾನ್ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು.
ಇದೀಗ ಘಟನೆ ಬಗ್ಗೆ ದ.ಕ. ಎಸ್ಪಿ ಋಷಿಕೇಶ್ ಸೋನಾವಣೆ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಸರ್ಕಾರದಿಂದ ಕಳುಹಿಸಿದ್ದ ಗನ್ ಮ್ಯಾನ್ ಅನ್ನು ಶಾಸಕ ಹರೀಶ್ ಪೂಂಜಾ ವಾಪಸ್ ಕಳುಹಿಸಿದ್ದಾರೆ. ಗೃಹ ಸಚಿವರ ಸೂಚನೆಯಂತೆ ಗನ್ ಮ್ಯಾನ್ ನೀಡಲಾಗಿತ್ತು. ಇದು ಕೊಲೆಯತ್ನ ಅಲ್ಲ, ಕೇವಲ ರೋಡ್ ರೇಜ್ ಎಂದು ಎಸ್ಪಿ ಸ್ಪಷ್ಟನೆ ನೀಡಿದ್ದರಿಂದ ಮುಜುಗರಗೊಂಡ ಹರೀಶ್ ಪೂಂಜಾ ಸರ್ಕಾರದಿಂದ ಒದಗಿಸಿದ್ದ ಗನ್ ಮ್ಯಾನನ್ನು ವಾಪಸ್ ಕಳುಹಿಸಿದ್ದಾರೆ.
MLA chased by Suspicious Scorpio car was just a road rage, no weapons were found clarifies SP of Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 07:09 pm
HK News Desk
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
15-11-25 07:42 pm
Mangalore Correspondent
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm