ಬ್ರೇಕಿಂಗ್ ನ್ಯೂಸ್
17-10-22 07:36 pm Mangalore Correspondent ಕರಾವಳಿ
ಮಂಗಳೂರು, ಅ.17 : ಬಿಲ್ಲವ, ಈಡಿಗ ಸೇರಿ 26 ಪಂಗಡಗಳ ಅಭಿವೃದ್ಧಿಗಾಗಿ ಹಾಗೂ ಈ ಸಮುದಾಯಗಳಿಗೆ ನ್ಯಾಯಯುತವಾಗಿ ಸಿಗಬೇಕಾದ ಸವಲತ್ತುಗಳನ್ನು ಪಡೆಯಲು ಸಮಾಜದ ಅಗ್ರಮಾನ್ಯ ನಾಯಕರಾದ ಬಿ.ಜನಾರ್ದನ ಪೂಜಾರಿಯವರ ಮುಂದಾಳತ್ವದಲ್ಲಿ 2023ರ ಫೆಬ್ರವರಿ ತಿಂಗಳಲ್ಲಿ ಮಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರಲು ಬಿಲ್ಲವ ಸಂಘಟನೆಗಳು ನಿರ್ಧರಿಸಿವೆ.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ಈ ಬಗ್ಗೆ ಪೂರ್ವಭಾವಿ ಸಭೆ ನಡೆಸಲಾಗಿದ್ದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಬಿಲ್ಲವ ಸಂಘಟನೆಗಳ ಪ್ರಮುಖರು ಪಕ್ಷ ಭೇದವಿಲ್ಲದೆ ಒಗ್ಗಟ್ಟಿನ ಮೂಲಕ ಸಮಾಜದ ಶಕ್ತಿಪ್ರದರ್ಶನ ನಡೆಸುವ ಬಗ್ಗೆ ಒಕ್ಕೊರಲ ನಿರ್ಣಯ ಕೈಗೊಂಡಿದ್ದಾರೆ.
ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ನಿಗಮ ಸ್ಥಾಪಿಸಿ ಅದರಡಿ ಬಿಲ್ಲವರಿಗೆ ವಿಶೇಷ ಸವಲತ್ತು ಕಲ್ಪಿಸಬೇಕು ಹಾಗೂ ಬಿಲ್ಲವರನ್ನು ಪ್ರವರ್ಗ 1ಕ್ಕೆ ಸೇರಿಸಬೇಕು ಎಂಬ ನಿರ್ಣಯಗಳನ್ನು ಈ ಹಿಂದೆ ಬ್ರಹ್ಮಾವರದಲ್ಲಿ ನಡೆದಿದ್ದ ಬಿಲ್ಲವರ ಸಮಾವೇಶದಲ್ಲಿ ಕೈಗೊಳ್ಳಲಾಗಿತ್ತು. ಈ ಬೇಡಿಕೆಗಳನ್ನು ಸರ್ಕಾರ ಇನ್ನೂ ಈಡೇರಿಸದ ಬಗ್ಗೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಖಜಾಂಚಿ ಪದ್ಮರಾಜ್ ಮಾತನಾಡಿ, ಬಿಲ್ಲವ ಸಮಾಜವನ್ನು ರಾಜಕೀಯ ಪಕ್ಷಗಳು ಬಳಸಿಕೊಳ್ಳುತ್ತಿವೆ. ಆದರೆ ಸಮುದಾಯದವರಿಗೆ ಸವಲತ್ತು ಸಿಗುತ್ತಿದೆಯೇ ಎಂದು ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ. ಬಿಲ್ಲವರನ್ನು ಪ್ರವರ್ಗ 2ಎ ಅಡಿ ಸೇರಿಸಲಾಗಿದೆ. 100ಕ್ಕೂ ಅಧಿಕ ಜಾತಿಗಳು ಈ ಪ್ರವರ್ಗದಲ್ಲಿವೆ. ಈಗ ರಾಜ್ಯದ ಕೆಲವು ಪ್ರಬಲ ಜಾತಿಯವರು ತಮ್ಮನ್ನೂ ಪ್ರವರ್ಗ 2ಎ ಗೆ ಸೇರಿಸಲು ಸರ್ಕಾರದ ಮೇಲೆ ಒತ್ತಡ ಹೇರುತ್ತಿವೆ. ಇದರಿಂದ ಬಿಲ್ಲವರು ಮತ್ತಷ್ಟು ಸವಲತ್ತು ವಂಚಿತರಾಗಬೇಕಾದ ಸ್ಥಿತಿ ನಿರ್ಮಾಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.
ಶ್ರೀ ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಮಾತನಾಡಿ, ಉಭಯ ಜಿಲ್ಲೆಗಳಲ್ಲಿ ಬಿಲ್ಲವ ಸಮಾಜ ಬಹುಸಂಖ್ಯಾತರಾಗಿದ್ದರೂ ರಾಜಕೀಯ ಪಕ್ಷಗಳು ಸ್ಪರ್ಧಿಸುವ ಅವಕಾಶವನ್ನೇ ನೀಡುತ್ತಿಲ್ಲ. 8 ವಿಧಾನಸಭಾ ಸ್ಥಾನ ಇರುವ ಜಿಲ್ಲೆಗಳಲ್ಲಿ ಕೇವಲ 1 ಸ್ಥಾನ ಮಾತ್ರ ಬಹುಸಂಖ್ಯಾತ ಬಿಲ್ಲವರಿಗೆ ನೀಡಿ ವಂಚಿಸಲಾಗುತ್ತಿದೆ. ನಾವು ಸಂಘಟಿತರಾಗಿ ನಮ್ಮ ಹಕ್ಕನ್ನು ಪಡೆದುಕೊಳ್ಳಬೇಕು ಎಂದರು.
ಸರ್ಕಾರಗಳು ನಮ್ಮ ಸಮಾಜದ ಅಭಿವೃದ್ಧಿಯ ಕುರಿತ ಮನವಿಗೆ ಸ್ಪಂದಿಸುತ್ತಿಲ್ಲ. ನಮ್ಮ ಹಕ್ಕುಗಳನ್ನು ನಾವೆಲ್ಲರೂ ಸೇರಿ ಒಗ್ಗಟ್ಟಿನಿಂದ ಸಮಾಜದಲ್ಲಿ ಜಾಗೃತಿ ಮೂಡಿಸಿ ಪಡೆಯಬೇಕಾಗಿದೆ ಎಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್ ಮನವಿ ಮಾಡಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಶ್ರೀಕ್ಷೇತ್ರ ಗೆಜ್ಜೆಗಿರಿ ಅಧ್ಯಕ್ಷ ಪೀತಾಂಬರ ಹೆರಾಜೆ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ, ಉಡುಪಿ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಪೂಜಾರಿ, ಬಿಲ್ಲವ ಪರಿಷತ್ ಅಧ್ಯಕ್ಷ ನವೀನ್ ಅಮೀನ್, ಪ್ರಮುಖರಾದ ಜಯಂತ ನಡುಬೈಲ್, ಅಚ್ಚುತ್ತ ಕಲ್ಮಾಡಿ, ಲೀಲಾಕ್ಷ ಕರ್ಕೇರ, ಜಗನ್ನಾಥ ಕೋಟೆ, ಅನಿಲ್ ಕುಮಾರ್, ಬೇಬಿ ಕುಂದರ್, ಪಿ.ಎ.ಪೂಜಾರಿ, ಸದಾನಂದ ಪೂಜಾರಿ, ಎಂ.ಎಸ್. ಕೋಟ್ಯಾನ್, ಚಿದಾನಂದ ಎಲ್ದಕ್ಕ, ಜಯವಿಕ್ರಮ್, ಡಾ.ಪದ್ಮನಾಭ ಮಾಣಿಂಜ, ಡಾ.ಅನುಸೂಯ, ಸುಖಲಾಕ್ಷಿ ಸುವರ್ಣ, ಮಾಜಿ ಮೇಯರ್ ವಿಜಯ ಅರುಣ್, ಶ್ರೀಲತಾ, ಕೃತಿನ್ ಧೀರಜ್ ಅಮೀನ್ ಹಾಗೂ ಉಭಯ ಜಿಲ್ಲೆಗಳ ಬಿಲ್ಲವ ಸಂಘಗಳು ಮತ್ತು ಯುವ ಸಂಘಟನೆಗಳ 500ಕ್ಕೂ ಮಿಕ್ಕಿ ಬಿಲ್ಲವ ಪ್ರತಿನಿಧಿಗಳು ಭಾಗವಹಿಸಿದ್ದರು.
Mangalore Billava organisations to host mass rally for the development of district under the leadership of Janardhana Poojary in 2023.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 07:09 pm
HK News Desk
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
15-11-25 07:42 pm
Mangalore Correspondent
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm