ಬ್ರೇಕಿಂಗ್ ನ್ಯೂಸ್
17-10-22 10:57 pm Mangalore Correspondent ಕರಾವಳಿ
ಮಂಗಳೂರು, ಅ.17 : ಸುರತ್ಕಲ್ ಟೋಲ್ ಗೇಟ್ ವಿರುದ್ಧ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಟೋಲ್ ಗೇಟ್ ಸುತ್ತಮುತ್ತ ನೂರಾರು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಟೋಲ್ ಗೇಟ್ ವಿರೋಧಿ ಸಮಿತಿಯ ಸವಾಲನ್ನು ಎದುರಿಸಲು ಜಿಲ್ಲಾಡಳಿತ ಪೊಲೀಸ್ ಸರ್ಪಗಾವಲನ್ನು ಹಾಕಿದೆ. ಸೋಮವಾರ ಸಂಜೆಯಿಂದಲೇ ಟೋಲ್ ಗೇಟ್ ಎರಡೂ ಬದಿಯಲ್ಲಿ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಆಮೂಲಕ ವಿರೋಧಿ ಹೋರಾಟಕ್ಕಾಗಿ ಜನರು ಸೇರದಂತೆ ಬೆದರಿಸುವ ತಂತ್ರ ಹೆಣೆಯಲಾಗಿದೆ.

ಈಗಾಗಲೇ ನೇರ ಕಾರ್ಯಾಚರಣೆ ಹೆಸರಲ್ಲಿ ಜನರನ್ನು ಸೇರಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಪ್ರಚಾರ ಅಭಿಯಾನ ನಡೆಸಿದೆ. ಇದರ ನಡುವೆ, ಪ್ರಮುಖರಿಗೆ ನೋಟೀಸ್ ಕೊಟ್ಟು ಬಾಂಡ್ ನೀಡುವ ಬಗ್ಗೆ ಎಚ್ಚರಿಕೆ ನೀಡಿದೆ. ಪೊಲೀಸರು ರಾತ್ರೋರಾತ್ರಿ ಮನೆಗೆ ನುಗ್ಗಿ ನೋಟಿಸ್ ಕೊಟ್ಟಿರುವ ವಿಚಾರ ವಿರೋಧಕ್ಕೆ ಕಾರಣ ಆಗಿರುವಾಗಲೇ ವಿವಿಧ ಪಕ್ಷಗಳ ನಾಯಕರು ಪೊಲೀಸರ ಕ್ರಮವನ್ನು ಖಂಡಿಸಿದ್ದಾರೆ. ಜೊತೆಗೆ ಬಿಜೆಪಿ ಸರಕಾರದ ನಿಲುವನ್ನೂ ಖಂಡಿಸಿದ್ದಾರೆ. ಕಾಂಗ್ರೆಸ್ ನಾಯಕರು ಕೂಡ ಮುತ್ತಿಗೆ ಹೋರಾಟ ಬೆಂಬಲಿಸಿ ತಮ್ಮ ಕಾರ್ಯಕರ್ತರಿಗೆ ನೇರ ಕಾರ್ಯಾಚರಣೆಗೆ ಕರೆ ನೀಡಿದ್ದಾರೆ.

ಇದರಿಂದಾಗಿ ಜಿಲ್ಲಾಡಳಿತ ಪೊಲೀಸರನ್ನು ನಿಯೋಜಿಸಿ ಜನರು ಟೋಲ್ ಗೇಟ್ ಬಳಿ ಸೇರದಂತೆ ಮಾಡಲು ತಂತ್ರ ಹೆಣೆದಿದೆ. ಇದಕ್ಕಾಗಿ ಪೊಲೀಸ್ ಕಮಿಷನರ್ ಶಶಿಕುಮಾರ್, ಟೋಲ್ ಗೇಟ್ ಪರವಾಗಿ ಸ್ಥಳದಲ್ಲಿ ಬಿಗಿ ಭದ್ರತೆ ಏರ್ಪಡಿಸಿದ್ದಾರೆ. ಈ ನಿಲುವನ್ನು ಖಂಡಿಸಿರುವ ಟೋಲ್ ಗೇಟ್ ಹೋರಾಟಗಾರರು, ಧನದಾಹಿ ನವಯುಗ್ ಕಂಪನಿಗೆ ಪೊಲೀಸರು ಸೆಕ್ಯುರಿಟಿ ಕೊಟ್ಟಿದ್ದಾರೆ. ಜನರನ್ನು ಎತ್ತಿ ಕಟ್ಟುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
Protest over illegal toll, Hundreds of police deployed at Surathkal toll in Mangalore. The police have ordered the protesters to furnish a bond for Rs 2 lacs along with a government bail and also to report themselves at the Police Commissioner's office on Monday.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm