ಬ್ರೇಕಿಂಗ್ ನ್ಯೂಸ್
20-10-22 10:02 pm Mangalore Correspondent ಕರಾವಳಿ
ಮಂಗಳೂರು, ಅ.20 : ಸುರತ್ಕಲ್ ಟೋಲ್ಗೇಟ್ ವಿರುದ್ಧ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ ಹೋರಾಟ ಸಮಿತಿಯ ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ. ಟೋಲ್ಗೇಟ್ ವ್ಯವಸ್ಥಾಪಕ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ನೀಡಿದ ಪ್ರತ್ಯೇಕ ದೂರನ್ನು ಆಧರಿಸಿ, ಸುರತ್ಕಲ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿದೆ.
ಅ.18ರಂದು ಹೋರಾಟ ಸಮಿತಿಯ 25- 30ಕ್ಕು ಹೆಚ್ಚು ಸದಸ್ಯರು ಅಕ್ರಮ ಕೂಟ ಸೇರಿ ಸುರತ್ಕಲ್ ಟೋಲ್ ಪ್ಲಾಜಾ ಎದುರು ರಸ್ತೆಯಲ್ಲಿ ಕುಳಿತು ಘೋಷಣೆ ಕೂಗುತ್ತ, ವಾಹನ ಸಂಚಾರ ತಡೆದು ನಿಲ್ಲಿಸಿದ್ದಾರೆ. ಸುಗಮ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಎಂದು ದೂರಿನಲ್ಲಿ ತಿಳಿಸಿದ್ದಾರೆ.


ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿಯವರು ಎಸಿಪಿ ಕಚೇರಿಯಲ್ಲಿ ಅ.14ರಂದು ನಡೆದ ಸಭೆಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದರೂ, ಅ.18ರಂದು ನಡೆಸಿದ ಪ್ರತಿಭಟನೆಯ ವೇಳೆ ವಾಹನ ಸಂಚಾರಕ್ಕೆ ಅಡ್ಡಿ ಮಾಡಿದ್ದಾರೆ' ಎಂದು ದೂರಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಹಾಗೂ ಸುರತ್ಕಲ್ ಎನ್ಐಟಿಕೆ ಟೋಲ್ನ ಶುಲ್ಕ ವಸೂಲಿ ಏಜೆನ್ಸಿ ನೂರ್ ಮೊಹಮ್ಮದ್ ಸಂಸ್ಥೆಯ ಸುರತ್ಕಲ್ ವಿಭಾಗದ ವ್ಯವಸ್ಥಾಪಕ ಶಿಶುಪಾಲ್ ಸಿಂಗ್ ಅವರು ಅ.18ರಂದೇ ದೂರು ನೀಡಿದ್ದು, ಪೊಲೀಸರು ಅದೇ ದಿನ ಎಫ್ಐಆರ್ ದಾಖಲಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 143, 147, 341, 283, 149 (ಅಕ್ರಮ ಕೂಟ ಸೇರಿ, ಸಾರ್ವಜನಿಕರ ಸುರಕ್ಷತೆಗೆ ಅಡ್ಡಿಪಡಿಸಿದ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಫ್ಐಆರ್ನಲ್ಲಿ ಯಾವುದೇ ವ್ಯಕ್ತಿಯ ಹೆಸರನ್ನು ಉಲ್ಲೇಖಿಸಿಲ್ಲ.
Mangalore Trouble of traffic moments during protest of surathkal toll, separate FIR has been registered with activists who were involved during the protest.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 07:09 pm
HK News Desk
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
15-11-25 07:42 pm
Mangalore Correspondent
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm