ಬ್ರೇಕಿಂಗ್ ನ್ಯೂಸ್
11-10-20 03:13 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಅಕ್ರಮ ಗೋಸಾಗಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಶಾಸಕರ ಸೂಚನೆಯಂತೆ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಪೊಲೀಸ್ ಗಸ್ತು ಬಿಗಿಗೊಳಿಸಿದ್ದಾರೆ.
ಎರಡು ದಿನಗಳ ಹಿಂದೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಈ ಸೂಚನೆ ನೀಡಲಾಗಿದ್ದು, ಎಲ್ಲ ಆಯಕಟ್ಟಿನ ಪ್ರದೇಶಗಳಲ್ಲಿ ರಾತ್ರಿಯಿಂದ ಬೆಳಗ್ಗೆ ಏಳು ಗಂಟೆ ವರೆಗೆ ಪೋಸ್ಟಿಂಗ್ ಮಾಡುವಂತೆ ಸೂಚನೆ ನೀಡಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಕಾರು, ಟೆಂಪೋಗಳಲ್ಲಿ ತರುತ್ತಿರುವ ಬಗ್ಗೆ ಬಜರಂಗದಳ ನಾಯಕರು ಕೂಡ ಆಕ್ಷೇಪ ಎತ್ತಿದ್ದು, ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಅನಾಹುತಕ್ಕೆ ಜಿಲ್ಲಾಡಳಿವೇ ಹೊಣೆ ಎಂದು ಎಚ್ಚರಿಕೆ ನೀಡಿದ್ದರು. ಒಂದೆಡೆ ಹಿಂದು ಸಂಘಟನೆಗಳ ಆಗ್ರಹ ಮತ್ತೊಂದೆಡೆ ಆಡಳಿತ ಪಕ್ಷದ ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ನೀಡಿದ ಸೂಚನೆಯಂತೆ ಪೊಲೀಸ್ ಕಮಿಷನರ್ ಬಿಗು ಪೋಸ್ಟಿಂಗ್ ಮಾಡಿದ್ದಾರೆ.


ಅದರಂತೆ, ಆಯಾ ಪೊಲೀಸ್ ಠಾಣೆ ವ್ಯಾಪ್ತಿಯ ಆಯಕಟ್ಟಿನ ಜಾಗಗಳಲ್ಲಿ ಎಂಟು ಕಡೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಮೂಡುಬಿದ್ರೆ, ಕಾವೂರು, ಕಂಕನಾಡಿ ಗ್ರಾಮಾಂತರ, ಕಂಕನಾಡಿ ನಗರ, ಪಣಂಬೂರು, ಬಜ್ಪೆ, ಮಂಗಳೂರು ನಗರದ ಕದ್ರಿ, ಪಾಂಡೇಶ್ವರ, ಉಳ್ಳಾಲ ಹೀಗೆ ಉತ್ತರ ಮತ್ತು ದಕ್ಷಿಣ ಎಸಿಪಿ ಉಪವಿಭಾಗದಲ್ಲಿ ಪೋಸ್ಟಿಂಗ್ ಹೆಚ್ಚಿಸಿದ್ದು, ಕಟ್ಟುನಿಟ್ಟಿನ ತಪಾಸಣೆ ಬಳಿಕವೇ ವಾಹನಗಳನ್ನು ಬಿಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಠಾಣಾಧಿಕಾರಿಯವರು ಈ ಪೋಸ್ಟಿಂಗ್ ಮಾಡುವುದಕ್ಕೆ ಸಿಬಂದಿ ಕೊರತೆಯ ನೆಪ ಹೇಳಬಾರದು. ಆಯಾ ಭಾಗದಲ್ಲಿ ಸೂಕ್ತ ನಿಯೋಜನೆ ಮಾಡತಕ್ಕದ್ದು ಎಂದು ಪೊಲೀಸ್ ಕಮಿಷನರ್ ಆಯಾ ಠಾಣಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಿದ್ದಾರೆ.
In order to control cattle trafficking in Mangaluru, Police Commissioner Vikas Kumar orders to strengthen checkposts with much police personnel
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am