ಬ್ರೇಕಿಂಗ್ ನ್ಯೂಸ್
22-10-22 06:13 pm Udupi Correspondent ಕರಾವಳಿ
ಉಡುಪಿ, ಅ.22: ಸುರತ್ಕಲ್ ಟೋಲ್ ಗೇಟ್ ಜಟಾಪಟಿ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಕಡೆಗೂ ಮೌನ ಮುರಿದಿದ್ದಾರೆ. ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ ವೇಳೆ ಕೇಳಿದ ಪ್ರಶ್ನೆಗೆ, ಈಗಾಗಲೇ ಟೋಲ್ ಗೇಟ್ ತೆರವಿನ ಬಗ್ಗೆ ಚರ್ಚೆ ನಡೆದಿದೆ. ತೆರವು ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಮಾಹಿತಿ ಪ್ರಕಾರ, ನವೆಂಬರ್ ಅಂತ್ಯದ ವೇಳೆಗೆ ತೆರವು ಆಗಲಿದೆ ಎಂದು ಸಚಿವ ಸುನಿಲ್ ಕುಮಾರ್ ಉತ್ತರಿಸಿದ್ದಾರೆ.
ಇದೇ ವೇಳೆ, ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರನ್ನು ಟ್ರೋಲ್ ಮಾಡಿದ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ ಸುನಿಲ್ ಕುಮಾರ್ ಉತ್ತರಿಸಲು ನಿರಾಕರಿಸಿದ್ದಾರೆ. ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಈಗಾಗಲೇ ಕೇಂದ್ರ ಸರಕಾರದ ಗಮನಕ್ಕೆ ತರಲಾಗಿದೆ. ನಾವು ಸಂಸದರ ಮೂಲಕ ಕೇಂದ್ರಕ್ಕೆ ಒತ್ತಡ ಹಾಕಿದ್ದೇವೆ. ಸಂವಿಧಾನ ಸೇರ್ಪಡೆಯ ಪ್ರಕ್ರಿಯೆ ಬಗ್ಗೆ ನಮಗೆ ಸ್ಪಷ್ಟವಾದ ಮಾಹಿತಿ ಇಲ್ಲ. ತುಳು ಭಾಷೆಯನ್ನು ರಾಜ್ಯಭಾಷೆಯಾಗಿ ಮಾಡುವ ಪ್ರಕ್ರಿಯೆ ಇಲಾಖಾ ಹಂತದಲ್ಲಿದೆ. ನಮ್ಮ ಇಲಾಖೆಯಿಂದ ಕಾನೂನು ಇಲಾಖೆಗೆ ಫೈಲ್ ಹೋಗಿದ್ದು, ಶೀಘ್ರದಲ್ಲೇ ಅದು ಕಾರ್ಯಗತ ಆಗಲಿದೆ ಎಂದು ಹೇಳಿದರು.
ಶಾಲೆಗಳಲ್ಲಿ ತುಳು ಶಿಕ್ಷಕರಿಗೆ ವೇತನ ಪಾವತಿಯಾಗದ ವಿಚಾರದ ಬಗ್ಗೆ ಕೇಳಿದ್ದಕ್ಕೆ, ತುಳು ಭಾಷೆಯ ಶಿಕ್ಷಕಿಯರನ್ನು ತುಳು ಅಕಾಡೆಮಿಯಿಂದ ನೇಮಕ ಮಾಡಲಾಗಿತ್ತು. ಅವರಿಗೆ ಸಂಭಾವನೆ ನೀಡಲಾಗುತ್ತದೆ ವಿನಾ ವೇತನ ಅಲ್ಲ. ಕೋವಿಡ್ ಬಳಿಕ ಆ ಬಗ್ಗೆ ತೊಂದರೆಯಾಗಿದೆ. ವಿಷಯ ನನ್ನ ಗಮನಕ್ಕೆ ಬಂದಿದ್ದು, ಶಿಕ್ಷಣ ಇಲಾಖೆ ಜೊತೆ ಚರ್ಚಿಸಿ ಪರಿಹರಿಸುತ್ತೇನೆ ಎಂದು ಹೇಳಿದರು.
ವಿದ್ಯುತ್ ದರ ಹೆಚ್ಚಿಸುವ ಪದ್ಧತಿ ಬದಲಾವಣೆ ಕುರಿತು ಮಾಹಿತಿ ನೀಡಿದ ಸಚಿವ ಸುನಿಲ್, ಇಂಧನ ಉತ್ಪಾದನೆಗೆ ಬಳಸುವ ಕಲ್ಲಿದ್ದಲು ಮತ್ತು ಇನ್ನಿತರ ಕಚ್ಛಾ ವಸ್ತುಗಳನ್ನು ಆಧರಿಸಿ ವಿದ್ಯುತ್ ದರ ಏರಿಕೆ ಮಾಡಲಾಗುವುದು. 2014ರಿಂದ ಇದೇ ಪದ್ಧತಿ ಅನುಸರಿಸಲಾಗುತ್ತಿದೆ. ಈ ನೀತಿಯನ್ನು ಬದಲಿಸುವ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಿದ್ದೇನೆ. ವರ್ಷದಲ್ಲಿ ಒಮ್ಮೆ ವಿದ್ಯುತ್ ದರ ಬದಲಿಸುವ ಹೊಸ ಪದ್ಧತಿ ಜಾರಿಗೆ ತರಬೇಕಾಗಿದೆ. ಪ್ರೀ ಪೈಡ್ ವಿದ್ಯುತ್ ಮೀಟರ್ ಗಳನ್ನು ಸರಕಾರಿ ಇಲಾಖೆಗಳಲ್ಲಿ ಮೊದಲಿಗೆ ಜಾರಿಗೆ ತರಲಾಗುವುದು. ಸರಕಾರದ ವಿವಿಧ ಇಲಾಖೆಗಳಿಂದ ಇಂಧನ ಇಲಾಖೆಗೆ ಆರು ಸಾವಿರ ಕೋಟಿ ರೂಪಾಯಿ ಬರಲು ಬಾಕಿಯಿದೆ ಎಂದು ಹೇಳಿದರು.
"A detailed discussion has already taken place in view of removing the Surathkal toll gate. The toll gate is in the final stage of removal. As per my information, the toll gate will be removed by November end this year," said Dakshina Kannada in-charge minister Sunil Kumar.He was speaking at the Udupi press club. Sunil denied to answer the question on trolls against Karnataka Pradesh Congress Committee co-coordinator and former corporator Prathiba Kulai Prathiba Kulai by saying ‘No comments’.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am