ಬ್ರೇಕಿಂಗ್ ನ್ಯೂಸ್
24-10-22 04:17 pm Mangalore Correspondent ಕರಾವಳಿ
ಮಂಗಳೂರು, ಅ.24: ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಶ್ಯಾಮಸುದರ್ಶನ ಭಟ್ ವಿರುದ್ಧ ಮಂಗಳೂರಿನ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ಪ್ರತಿಭಾ ಕುಳಾಯಿ ನೀಡಿದ ದೂರು ಆಧರಿಸಿ ಪೊಲೀಸರು ಐಪಿಸಿ ಸೆಕ್ಷನ್ 354, 509, ಐಟಿ ಕಾಯ್ದೆ 67 ಮತ್ತು ಮಹಿಳಾ ದೌರ್ಜನ್ಯ ತಡೆ ಕಾಯ್ದೆಯಡಿ ಶ್ಯಾಮಸುದರ್ಶನ ಭಟ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅ.18ರಂದು ಸುರತ್ಕಲ್ ಟೋಲ್ ಗೇಟ್ ವಿರುದ್ಧ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ಪ್ರತಿಭಾ ಕುಳಾಯಿ ರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸಿದ್ದರು. ಅದರ ವಿಡಿಯೋ ವೈರಲ್ ಆಗಿದ್ದು, ಅದನ್ನು ಫೇಸ್ಬುಕ್ ಇನ್ನಿತರ ಜಾಲತಾಣದಲ್ಲಿ ಅಶ್ಲೀಲವಾಗಿ ನಿಂದಿಸಿ ಕೆಲವರು ಕಮೆಂಟ್ ಹಾಕಿದ್ದರು. ಕೆ.ಆರ್ ಶೆಟ್ಟಿ ಅಡ್ಯಾರ್ ಪದವು ಮತ್ತು ಶ್ಯಾಮಸುದರ್ಶನ ಭಟ್ ಅವಹೇಳಕಾರಿಯಾಗಿ ಬರೆದಿದ್ದರು.
ತನ್ನನ್ನು ಟ್ರೋಲ್ ಮಾಡಿದ ಬಗ್ಗೆ ಟೀಕಿಸಿದ್ದ ಪ್ರತಿಭಾ ಅವರು, ಇಂಥ ಟ್ರೋಲ್ ಗಳಿಗೆಲ್ಲ ಹೆದರಲ್ಲ. ಆದರೆ, ಅವಹೇಳನ ಮಾಡಿದವರನ್ನು ಬಿಡುವುದಿಲ್ಲ. ಕೇಸು ದಾಖಲಿಸುತ್ತೇನೆ. ಅವರ ಮನೆಗೇ ಹೋಗಿ ಅವರಿಗೆ ಅಕ್ಕ, ತಂಗಿ, ತಾಯಂದಿರು ಇದ್ದಾರೆಯೇ ನೋಡುತ್ತೇನೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಇಬ್ಬರು ಆರೋಪಿಗಳು ಕೂಡ ತಲೆಮರೆಸಿಕೊಂಡಿದ್ದಾರೆ. ಶ್ಯಾಮಸುದರ್ಶನ್ ಬಂಧನಕ್ಕೆ ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳು ಆಗ್ರಹ ಮಾಡಿದ್ದು, ಒಬ್ಬ ಬಿಲ್ಲವ ಮಹಿಳೆಗಾದ ಅವಮಾನವನ್ನು ಸಹಿಸುವುದಿಲ್ಲ ಎಂದು ಹೇಳಿದ್ದವು.
ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಸೇರಿದಂತೆ ಹಲವು ನಾಯಕರು ಪ್ರತಿಭಟನೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಹೀಗಾಗಿ ಆರೋಪಿಗಳ ಪತ್ತೆಗಾಗಿ ಕಮಿಷನರ್ ಶಶಿಕುಮಾರ್ ಮೂರು ಪ್ರತ್ಯೇಕ ಪೊಲೀಸ್ ತಂಡಗಳನ್ನು ರಚಿಸಿದ್ದಾರೆ. ಉಪ್ಪಿನಂಗಡಿಯ ಇಳಂತಿಲದಲ್ಲಿರುವ ಶ್ಯಾಮಸುದರ್ಶನ್ ಮನೆ, ಪುತ್ತೂರಿನ ಪ್ರೆಸ್ ಕ್ಲಬ್ ಸೇರಿ ಕೆಲವು ಪ್ರದೇಶಗಳಲ್ಲಿ ಪೊಲೀಸರು ಹುಡುಕಾಡಿದ್ದು ಮಾಹಿತಿ ಸಂಗ್ರಹಿಸಿದ್ದಾರೆ. ಆತ ಕೇರಳಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗುತ್ತಿದ್ದು, ಇದೇ ವೇಳೆ ನಿರೀಕ್ಷಣಾ ಜಾಮೀನಿಗಾಗಿ ವಕೀಲರ ಮೂಲಕ ಪ್ರಯತ್ನ ಪಟ್ಟಿದ್ದಾನೆ.
ಶ್ಯಾಮಸುದರ್ಶನ ಭಟ್ ಪುತ್ತೂರನ್ನು ಕೇಂದ್ರವಾಗಿಟ್ಟುಕೊಂಡು ಕಹಳೆ ನ್ಯೂಸ್ ಎನ್ನುವ ಯೂಟ್ಯೂಬ್ ಚಾನೆಲ್ ಮಾಡುತ್ತಿದ್ದು, ಬಿಜೆಪಿ ಶಾಸಕರು, ಸಂಸದರ ಜೊತೆಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದ. ಮುಸ್ಲಿಮರ ವಿರುದ್ಧ ಕೆಂಡ ಕಾರುವ ರೀತಿ, ಒಂದು ಕೋಮನ್ನು ಉದ್ರೇಕಿಸುವ ರೀತಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿದ್ದ. ಇದೀಗ ತನ್ನ ಅತಿರೇಕದ ವರ್ತನೆಯಿಂದಲೇ ಪೊಲೀಸ್ ಕೇಸಿಗೆ ತುತ್ತಾಗಿದ್ದು, ತಲೆತಪ್ಪಿಸಿಕೊಂಡು ಓಡಾಡುವ ಸ್ಥಿತಿ ಬಂದಿದೆ. ಇದೀಗ, ತನ್ನ ಬಂಧನ ಆಗದಂತೆ ನೋಡಿಕೊಳ್ಳಲು ಬಿಜೆಪಿ ಶಾಸಕರಿಗೆ ದುಂಬಾಲು ಬಿದ್ದಿದ್ದಾನೆ. ಇದಲ್ಲದೆ, ನಿಗೂಢ ಜಾಗದಲ್ಲಿದ್ದುಕೊಂಡು ವಿಡಿಯೋ ಬಿಡುಗಡೆ ಮಾಡಿದ್ದು, ತಾನು ಆ ಉದ್ದೇಶದಿಂದ ಬರೆದಿರಲಿಲ್ಲ. ಅಂತಹ ದುರುದ್ದೇಶವೂ ಇರಲಿಲ್ಲ. ಅಸಹ್ಯ ಅರ್ಥ ಬರುವ ಹಾಗೆ ಭ್ರಮಿಸ್ಕೊಂಡು ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಹೇಳಿದ್ದಾನೆ.
Mangalore Kahale News Shyam Sudarshan Bhat Booked for posting obscene post over Pratibha Kulai. Following a complaint lodged by Congress leader Ms Prathibha Kulai of Surathkal, the Mangaluru Women Police on Saturday registered cases of attempt to outrage the modesty of a woman, circulating obscene material in electronic form, and publishing indecent representation of a woman against one Shyam Sudarshan Bhat of Mangaluru, who is the Editor of a web portal.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm