ಬ್ರೇಕಿಂಗ್ ನ್ಯೂಸ್
28-10-22 07:50 pm Mangalore Correspondent ಕರಾವಳಿ
ಮಂಗಳೂರು, ಅ.28 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ನೇತೃತ್ವದಲ್ಲಿ ವಿಭಿನ್ನವಾಗಿ ನಡೆಯಿತು. ನಗರದ ಬೋಳೂರಿನ ಸುಲ್ತಾನ್ ಬತ್ತೇರಿಯಲ್ಲಿ ನೇತ್ರಾವತಿ ಮತ್ತು ಫಲ್ಗುಣಿ ನದಿ ಸೇರುವಲ್ಲಿ 50ರಷ್ಟು ಬೋಟ್ ಗಳ ಒಂದೂವರೆ ತಾಸಿನ ಯಾನದಲ್ಲಿ ಕೋಟಿ ಕಂಠ ಗಾಯನ ಸೊಗಸಾಗಿ ಮೂಡಿಬಂತು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮುಂದಾಳತ್ವದಲ್ಲಿ ಮೀನುಗಾರಿಕಾ ಇಲಾಖೆ, ಮೊಗವೀರ ಸಮಾಜದ ಸಹಯೋಗದಲ್ಲಿ ಕೋಟಿ ಕಂಠ ಗಾಯನ ಮೂಡಿಬಂತು. ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಹೊರಟ ಬೋಟ್ ಗಳು ತೋಟ ಬೆಂಗ್ರೆ ಅಳಿವೆ ಬಾಗಿಲು ವರೆಗೆ 8 ಕಿ.ಮೀ. ಸಾಗುವ ಮೂಲಕ ಕನ್ನಡದ ಆರು ಹಾಡುಗಳನ್ನು ಹಾಡಲಾಯಿತು. 5 ಪರ್ಸಿನ್ ಬೋಟ್ ಗಳು, 10 ಆಳ ಸಮುದ್ರ ಮೀನುಗಾರಿಕಾ ಬೋಟ್ ಗಳು, 25 ನಾಡದೋಣಿಗಳು, 10 ಕರೆ ಫಿಶ್ಶಿಂಗ್ ಬೋಟ್ ಗಳು ಹಾಗೂ 4 ಫೆರಿ ಬೋಟ್ ಗಳಲ್ಲಿ ಕೋಟಿ ಕಂಠಗಾಯನ ಮೂಡಿತು. ಎಲ್ಲಾ ಬೋಟ್ ಗಳು ಸಂಪೂರ್ಣ ಶೃಂಗಾರಗೊಂಡು ಕನ್ನಡದ ಬಾವುಟಗಳಿಂದ ರಾರಾಜಿಸಿತ್ತು. ನದಿ ನಡುವಿನ ಸೊಗಸನ್ನು ವೀಕ್ಷಿಸುತ್ತ ಬೋಟ್ ಗಳಲ್ಲಿ ಭರ್ತಿ ಜನರೊಂದಿಗೆ ಕೋಟಿ ಕಂಠಗಾಯನ ಮೂಡಿಬಂತು. ತುಳು ಬಾವುಟವೂ ರಾರಾಜಿಸಿದ್ದು ವಿಶೇಷವೆನಿಸಿತು.






ಈ ಸಂದರ್ಭ ಮಾತನಾಡಿದ ಶಾಸಕ ಕಾಮತ್, ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ಮಾರ್ಗದರ್ಶನದಂತೆ ಕೋಟಿ ಕಂಠ ಗಾಯನವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಇದೊಂದು ಮಹತ್ವದ ದಿನವಾಗಿ ನಾಡಿನ ಜನತೆಯ ಮನದಾಳದಲ್ಲಿ ಸದಾ ಉಳಿಯಲಿದೆ ಎಂದರು.






11 ಗಂಟೆಗೆ ಬೋಟ್ ಗಳಲ್ಲಿ ಕೋಟಿ ಕಂಠ ಗಾಯನದ ಮೊದಲ ಹಾಡು ಆರಂಭವಾಗಿ ಆರು ಹಾಡುಗಳು ಸೊಗಸಾಗಿ ಮೂಡಿ ಬಂತು. ಕೊನೆಗೆ ತುಳು ಭಾಷೆಯ ಹಾಡನ್ನು ಹಾಡಲಾಯಿತು. ಮಂಗಳೂರು ಮನಪಾ ಉಪ ಮೇಯರ್ ಪೂರ್ಣಿಮಾ, ಮಂಗಳೂರು ಮನಪಾ ಸದಸ್ಯರು, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು, ಆಸಕ್ತರು ಸೇರಿದಂತೆ 500ಕ್ಕೂ ಅಧಿಕ ಮಂದಿ ಈ ಕೋಟಿ ಕಂಠ ಗಾಯನದಲ್ಲಿ ಭಾಗವಹಿಸಿದ್ದರು. ಕೋಟಿ ಕಂಠ ಗಾಯನಕ್ಕೂ ಮುನ್ನ ಸುಲ್ತಾನ್ ಬತ್ತೇರಿಯ ಕಡಲ ಕಿನಾರೆಯಲ್ಲಿ ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ಸದಸ್ಯರಿಂದ ಸಮೂಹಗಾನ, ದೇಶಭಕ್ತಿಗೀತೆ, ನಾಡಗೀತೆಗಳ ಗಾಯನ ನೆರವೇರಿತು.
Koti Kanta Gayana onboard 50 boats at Sultan Bathery in Mangalore by MLA Vedavyas Kamath.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm