ಬ್ರೇಕಿಂಗ್ ನ್ಯೂಸ್
11-10-20 10:22 pm Mangaluru Correspondent ಕರಾವಳಿ
ಮೂಡುಬಿದಿರೆ, ಅಕ್ಟೋಬರ್ ರ್ 11: ಕೊರೊನಾ ಭಯವೋ ಏನೋ.. ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಶವ ಹೊರತೆಗೆಯಲು ಸ್ಥಳೀಯರು ಯಾರೂ ಮುಂದಾಗದೇ ಇದ್ದಾಗ ಮೂಡುಬಿದ್ರೆ ಇನ್ಸ್ ಪೆಕ್ಟರ್ ಸ್ವತಃ ಬಾವಿಗಿಳಿದು ಶವ ಮೇಲಕ್ಕೆತ್ತಿ ಮಾದರಿಯಾದ ಘಟನೆ ನಡೆದಿದೆ.
ಮೂಡುಬಿದ್ರೆಯ ಕಡಂದಲೆ ಗ್ರಾಮದ ಉಮನಪಾಲು ಎಂಬಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಶವ ತೆಗೆಯಲು ಬಾವಿಗೆ ಯಾರೂ ಇಳಿಯದಿದ್ದಾಗ, ಮೂಡುಬಿದಿರೆ ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ಬಾವಿಗಿಳಿದಿದ್ದು ಬಾವಿಯಿಂದ ಶವ ಹೊರ ತೆಗೆದಿದ್ದಾರೆ.


ವಿಜಯ ಕರ್ಕೇರ (47) ಮೃತ ವ್ಯಕ್ತಿ. ಕಳೆದ 3-4 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಜಯ ಕರ್ಕೇರ ಮನೆಯಲ್ಲಿ ಕಾಣದಿದ್ದಾಗ, ಮನೆಯವರು ಹುಡುಕಾಡಿದ್ದಾರೆ. ಬಾವಿಯ ಬಳಿ ವಿಜಯ ಅವರಿಗೆ ಸೇರಿದ ಬಟ್ಟೆ ಕಂಡುಬಂದಿದ್ದು, ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.
ವಿಜಯ್ ಸಹೋದರ ಉದಯ ಪೂಜಾರಿ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ನಿರೀಕ್ಷ ಬಿ.ಎಸ್.ದಿನೇಶ್ ಕುಮಾರ್ ಬಾವಿಗಿಳಿದು ಶವವನ್ನು ಮೇಲಕ್ಕೆ ಎತ್ತಲು ಸಹಾಯ ಮಾಡಿದ್ದಾರೆ. ಸಿಬ್ಬಂದಿಗಳು ಹಾಗೂ ಸ್ಥಳೀಯರು ಸಹಕರಿಸಿದ್ದಾರೆ.
Moodbidri Police inspector Dinesh Kumar gets down into well to lift the dead body of a suicide victim. His social work has gone viral on social media and has become the talk of the town.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm