ಬ್ರೇಕಿಂಗ್ ನ್ಯೂಸ್
29-10-22 01:45 pm Mangalore Correspondent ಕರಾವಳಿ
ಮಂಗಳೂರು, ಅ.29: ಎಲ್ಲಿಯೂ ಕೂಡ ಚುನಾವಣೆಗೆ ನಿಂತು ಗೆಲ್ಲುವ ವಿಶ್ವಾಸ ಸಿದ್ದರಾಮಯ್ಯಗಿಲ್ಲ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ಕ್ಷೇತ್ರ ಹುಡುಕುತ್ತಿದ್ದಾರೆ, ಯಾವುದೂ ಸಿಕ್ಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಕಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ಯಡಿಯೂರಪ್ಪ ಬಳಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಲು ಚಿಂತನೆ ನಡೆಸುತ್ತಿದ್ದಾರೆ ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ, ಸಿದ್ದರಾಮಯ್ಯ ಒಮ್ಮೆ ಕೋಲಾರ ಅಂತ ಹೇಳುತ್ತಿದ್ದಾರೆ. ಮಗದೊಮ್ಮೆ ಮೈಸೂರು ಅಂತಾರೆ. ಕೋಲಾರದಿಂದ ನಿಲ್ತಾರೆ ಅಂತಾದ್ರೆ ಅಲ್ಲಿದ್ದವರು ಇನ್ನೊಂದು ಕ್ಷೇತ್ರ ಹುಡುಕಬೇಕಾಗುತ್ತೆ. ಇವರು ಮೈಸೂರು, ಬಾದಾಮಿ ಬಿಟ್ಟು ಮತ್ತೊಂದು ಕ್ಷೇತ್ರ ಹುಡುಕುತ್ತಿದ್ದಾರೆ ಯಾಕೆ ?

ಬಾದಾಮಿ ಕ್ಷೇತ್ರದಿಂದ ಈಗ ಯಾಕೆ ನಿಲ್ತಿಲ್ಲ? ಬಾದಾಮಿ ಜನ ತಿರಸ್ಕಾರ ಮಾಡಿದ್ದಾರೆ ಎಂಬುದು ಈಗ ಸಿದ್ದರಾಮಯ್ಯ ಅವರಿಗೆ ಅರ್ಥವಾಗಿದೆ. ಅವರ ಬಗ್ಗೆ ಇದ್ದ ವಿಶ್ವಾಸ, ನಂಬಿಕೆಯನ್ನು ಅಲ್ಲಿಯ ಜನರು ಕಳೆದುಕೊಂಡಿದ್ದಾರೆ. ಇದರಿಂದಲೇ ಗೊತ್ತಾಗುತ್ತೆ ಅವರ ಪಾಪ್ಯುಲಾರಿಟಿ ಎಷ್ಟಿದೆ ಅಂತ. ನೀವು ಪ್ರಾಮಾಣಿಕರಾಗಿದ್ದರೆ, ನೀವು ಎಲ್ಲಿಂದ ಗೆದ್ದಿದ್ರಿ ಅಲ್ಲಿಂದಲೇ ಚುನಾವಣೆ ಎದುರಿಸಿ. ಇಲ್ಲ ಅಂದ್ರೆ ನೀವು ಹೆದರಿ ಬೆದರಿ ಪಲಾಯನ ಮಾಡುತ್ತಿದ್ದೀರಿ ಎಂಬುದು ಸಾಬೀತಾಗುತ್ತೆ ಎಂದು ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಯಾತ್ರೆಗಳು ಪ್ರಭಾವ ಬೀರುತ್ತಾ ಎಂಬ ಪ್ರಶ್ನೆಗೆ, ಅವರ ಬಗ್ಗೆ ನಾನು ಮಾತಾನಾಡೋದಿಲ್ಲ. ಅದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಕಲ್ಬುರ್ಗಿಯಿಂದ ನಾಡಿದ್ದು ನಮ್ಮ ಕಾರ್ಯಕ್ರಮಗಳು ಆರಂಭವಾಗುತ್ತವೆ. ಅವರ ಯಾವುದೇ ಯಾತ್ರೆಗಳು, ಬಸ್ ಸಂಚಾರ ನಮ್ಮ ಮೇಲೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲ್ಲ. ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ರಾಜ್ಯದ ಜನರು ಈಗಾಗಲೇ ತೀರ್ಮಾನ ಮಾಡಿದ್ದಾರೆ. ಕಾಂಗ್ರೆಸ್ ನ ಯಾವುದೇ ಕಾರ್ಯಕ್ರಮಗಳು ನಮ್ಮನ್ನು ಅಧಿಕಾರಕ್ಕೆ ಬರದಂತೆ ತಡೆಯಲು ಶಕ್ತಿಯಿಲ್ಲ. ನಾಡಿದ್ದು ನಾನು ರಾಜ್ಯ ಪ್ರವಾಸ ಅರಂಭಿಸಲಿದ್ದೇನೆ ಎಂದು ಹೇಳಿದರು.
People have lost faith in Siddaramaiah slams B. S. Yediyurappa in Mangalore during an inaugural program or a private function here in the city.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm