ಬ್ರೇಕಿಂಗ್ ನ್ಯೂಸ್
12-10-20 06:38 pm Mangalore Correspondent ಕರಾವಳಿ
ಮಂಗಳೂರು, ಅ.12: ಖಾಸಗಿಯಾಗಿ ಎಂಟು ಮೆಡಿಕಲ್ ಕಾಲೇಜುಗಳನ್ನು ಹೊಂದಿರುವ ಮಂಗಳೂರಿನಲ್ಲಿ ಸರಕಾರಿ ಕಾಲೇಜು ಸ್ಥಾಪನೆ ಮಾಡಲು ಆಗದಿರುವುದು ರಾಜಕಾರಣದ ಸೋಲು ಮಾತ್ರವಲ್ಲ, ಜನಸಾಮಾನ್ಯರ ಪ್ರಜ್ಞಾವಂತಿಕೆಯ ಸೋಲು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
ಜನಪರ ಹಾಗೂ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ ವತಿಯಿಂದ ಆಯೋಜಿಸಿದ್ದ 'ಖಾಸಗಿ ಆಸ್ಪತ್ರೆ ನಿಯಂತ್ರಿಸಿ, ಸರಕಾರಿ ಆಸ್ಪತ್ರೆ ಉಳಿಸಿ' ಎಂಬ ಧರಣಿಯನ್ನು ಮಹಾನಗರ ಪಾಲಿಕೆಯ ಕಚೇರಿ ಎದುರು ಉದ್ಘಾಟಿಸಿ ಮಾತನಾಡಿದರು.
ಸರಕಾರ ಜನರಿಗೆ ಉಚಿತ ಆರೋಗ್ಯ ಸೇವೆ ನೀಡಬೇಕಾದ ಸಮಯದಲ್ಲಿ ಕೋವಿಡ್ ನೆಪದಲ್ಲಿ ಜನವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿದೆ. ಖಾಸಗಿ ಆಸ್ಪತ್ರೆಗಳ ವ್ಯಾಪಾರದಿಂದಾಗಿ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಇಂತಹ ಸಮಯದಲ್ಲಿ ಆರಂಭಗೊಂಡ ಈ ಹೋರಾಟ ಶಾಸಕರ ಕಚೇರಿ ಮುಂದೆ ಮಾತ್ರವಲ್ಲ ಹೋಬಳಿ, ಗ್ರಾಮ ಮಟ್ಟದಲ್ಲಿಯೂ ಆಂದೋಲನ ರೀತಿಯಲ್ಲಿ ನಡೆಸಲಾಗುವುದು. ರಾಜಕೀಯ ರಹಿತವಾಗಿ ಈ ಹೋರಾಟ ನಡೆಯಲಿದೆ ಎಂದು ಮುನೀರ್ ಕಾಟಿಪಳ್ಳ ಹೇಳಿದರು.
ಬುದ್ಧಿವಂತರ ಜಿಲ್ಲೆಯೆಂದು ಕರೆಸಿಕೊಳ್ಳುವ ದ.ಕ. ಜಿಲ್ಲೆಯಲ್ಲಿ ಸುಸಜ್ಜಿತ ಸರಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆ ಇಲ್ಲದಿರುವುದು ದುರಂತ. ಶ್ರೀನಿವಾಸ ಮಲ್ಯರಂತಹ ರಾಜಕೀಯ ಇಚ್ಛಾಶಕ್ತಿಯ ನಾಯಕರು ನಮ್ಮ ಜತೆಗಿಲ್ಲದಿರುವುದು ನಮ್ಮ ದೌರ್ಬಲ್ಯ. ನಮ್ಮ ಸಂಸದರು ಮನಸ್ಸು ಮಾಡಿದ್ದರೆ ನಂ. 1 ಮೆಡಿಕಲ್ ಕಾಲೇಜು ಜಿಲ್ಲೆಯಲ್ಲಿ ಸ್ಥಾಪಿಸಬಹುದಿತ್ತು. ವೆನ್ಲಾಕ್ ಆಸ್ಪತ್ರೆಯನ್ನು ಪ್ರಾದೇಶಿಕ ಕೇಂದ್ರವಾಗಿಸಲು ವಿಫಲವಾಗಿರುವುದಕ್ಕೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯೇ ಕಾರಣ. ವೆನ್ಲಾಕ್ ಸರಕಾರಿ ಮೆಡಿಕಲ್ ಕಾಲೇಜು ಆಗಿ ಪರಿವರ್ತನೆಯಾದಲ್ಲಿ ನಾನು ನನ್ನ ವೈಯಕ್ತಿಕವಾಗಿ 10 ಡಯಾಲಿಸಿಸ್ ಯಂತ್ರ ಮಾತ್ರವಲ್ಲದೆ, ಹೊರ ದೇಶಗಳ ದಾನಿಗಳ ಮೂಲಕ 500 ಡಯಾಲಿಸಿಸ್ ಯಂತ್ರಗಳನ್ನು ಒದಗಿಸಲು ಸಿದ್ಧನಿದ್ದೇನೆ ಎಂದು ಪ್ರತಿಭಟನೆಯಲ್ಲಿ ಮಾತನಾಡಿದ ಡಾ. ದೇವಿದಾಸ್ ಶೆಟ್ಟಿ ಹೇಳಿದರು.
ಹಿರಿಯ ನ್ಯಾಯವಾದಿ, ಸಾಮಾಜಿಕ ದಿನೇಶ್ ಹೆಗ್ಡೆ ಉಳೇಪಾಡಿ ಮಾತನಾಡಿ, ಜನಪ್ರತಿನಿಧಿಗಳಿಗೆ ಆಸ್ಪತ್ರೆ ದಾಖಲಾದರೆ ಅದನ್ನು ಸರಕಾರ ಭರಿಸುತ್ತದೆ. ಆದರೆ, ಜನಸಾಮಾನ್ಯರಿಗೆ ಈ ವ್ಯವಸ್ಥೆ ಯಾಕಿಲ್ಲ ಎಂದು ಪ್ರಶ್ನಿಸಿದರು.
ದಲಿತ ಸಂಘರ್ಷ ಸಮಿತಿ ಮುಖಂಡರಾದ ದೇವದಾಸ್, ವಿ. ಕುಕ್ಯಾನ್, ಜೆ. ಬಾಲಕೃಷ್ಣ ಶೆಟ್ಟಿ, ಶೋಭಾ ಕೇಶವ, ತಿಮ್ಮಪ್ಪ ಕೊಂಚಾಡಿ, ವಸಂತ ಆಚಾರಿ, ಸುನಿಲ್ ಕುಮಾರ್ ಬಜಾಲ್, ಶಶಿಕಲಾ ಯೆಯ್ಯಿಡಿ, ಯಶವಂತ ಮರೋಳಿ, ಮೈಕಲ್ ಡಿಸೋಜಾ, ದಿನೇಶ್ ಕುಂಪಲ, ವೆಂಕಟೇಶ್, ಯೋಗಿತಾ, ಸುರೇಶ್ ಶೆಟ್ಟಿ, ಫಾರೂಕ್ ಉಳ್ಳಾಲ್, ಮುಹಮ್ಮದ್, ಸೀತಾರಾಮ ಬೇರಿಂಜ, ಕರುಣಾಕರ, ವಾಸುದೇವ ಉಚ್ಚಿಲ್, ದಯಾನಂದ ಶೆಟ್ಟಿ, ಅಲಿಹಸನ್, ಪ್ರಭಾಕರ ರಾವ್, ಪ್ರಮೀಳಾ ದೇವಾಡಿಗ ಸೇರಿದಂತೆ ವಿವಿಧ ಸಂಘಟನೆ, ಪಕ್ಷಳು ಪ್ರತಿನಿಧಿಗಳು ಭಾಗವಹಿಸಿದ್ದಾರೆ.
ಸಂತೋಷ್ ಕುಮಾರ್ ಬಜಾಲ್ ಸ್ವಾಗತಿಸಿ, ನಿರೂಪಿಸಿದರು.
DYFI protests stressing for establishment of government medical colleges in Mangalore here on 12 Monday, 2020.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm