ಬ್ರೇಕಿಂಗ್ ನ್ಯೂಸ್
11-11-22 09:38 pm Mangalore Correspondent ಕರಾವಳಿ
ಮಂಗಳೂರು, ನ.11: ಕ್ರಿಸ್ತಶಕ 1837ರಲ್ಲಿ ಬ್ರಿಟಿಷರ ವಿರುದ್ಧ ರೈತ ಸೇನೆ ಕಟ್ಟಿ, ಬ್ರಿಟಿಷರನ್ನು ಮೊಟ್ಟಮೊದಲು ಬಾರಿಗೆ ಸೋಲಿಸಿ ಹಿಮ್ಮೆಟ್ಟಿಸಿದ್ದ ಅಪ್ರತಿಮ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ಮೊದಲ ಬಾರಿಗೆ ಸ್ವಾತಂತ್ರ್ಯದ ಕಹಳೆ ಊದಿದ್ದ ಮಂಗಳೂರಿನ ಬಾವುಟಗುಡ್ಡೆಯಲ್ಲಿ ಸ್ಥಾಪಿಸಲಾಗಿದ್ದು ಅದನ್ನು ನ.19ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಿದ್ಧತೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾಮಾನ್ಯ ಜನರು ಮತ್ತು ರೈತರ ಮೇಲೆ ಬ್ರಿಟಿಷರ ಕ್ರೌರ್ಯ ಹಾಗೂ ದಬ್ಬಾಳಿಕೆಯನ್ನು ಸಹಿಸದೆ ಕೆದಂಬಾಡಿ ರಾಮಯ್ಯ ಗೌಡರು ಬ್ರಿಟಿಷರ ವಿರುದ್ಧ ರೈತ ಸೇನೆ ಕಟ್ಟಿ ರಣ ಕಹಳೆ ಮೊಳಗಿಸಿದ್ದರು. ಸುಳ್ಯ, ಬೆಳ್ಳಾರೆ, ಪುತ್ತೂರು, ಬಂಟ್ವಾಳ, ಮಂಗಳೂರು ಸೇರಿ ವಿವಿಧ ಕಡೆಯ ಜನರು ಕೆದಂಬಾಡಿ ರಾಮಯ್ಯ ಗೌಡರ ನೇತೃತ್ವದಲ್ಲಿ ಹೊರಟು ಮಂಗಳೂರಿಗೆ ಆಗಮಿಸಿದ್ದರು. ಸುಮಾರು 90 ಕಿ.ಮೀ. ದೂರ ನಡೆದುಕೊಂಡೇ ಬಂದಿದ್ದ ರಾಮಯ್ಯ ಗೌಡರು ಮತ್ತು ಕಲ್ಯಾಣಪ್ಪನ ಸೈನ್ಯ ಮಂಗಳೂರಿನಲ್ಲಿ ಮಂಗಳೂರಿನಲ್ಲಿ ಬ್ರಿಟಿಷರನ್ನು ಸೋಲಿಸಿ 13 ದಿನಗಳ ಕಾಲ ಸ್ವಾತಂತ್ರ್ಯದ ಬಾವುಟ ಹಾರಿಸಿದ್ದರು. ಬಾವುಟಗುಡ್ಡೆಯಲ್ಲಿ 13 ದಿನಗಳ ಕಾಲ ಸ್ವಾತಂತ್ರ್ಯದ ಬಾವುಟ ಹಾರಾಡಿತ್ತು. ಇದು ಭಾರತದ ನೆಲದಲ್ಲಿ ಬ್ರಿಟಿಷರಿಗೆ ಒದಗಿದ ಪ್ರಥಮ ಸೋಲಾಗಿತ್ತು. ಸಾಮಾನ್ಯ ಜನರಿಗೆ ಬ್ರಿಟಿಷರ ವಿರುದ್ಧ ದೊರಕಿದ ಪ್ರಪ್ರಥಮ ಜಯವಾಗಿತ್ತು. ಹೋರಾಟದಲ್ಲಿ ಹುತಾತ್ಮರಾದ ಕೆದಂಬಾಡಿ ರಾಮಯ್ಯ ಗೌಡರ ಕೆಚ್ಚೆದೆಯನ್ನು ಭಾರತದ ಇತಿಹಾಸ ಪುಟಗಳಲ್ಲಿ ದಾಖಲಿಸಿ, ಸ್ಮಾರಕ ನಿರ್ಮಾಣದ ಮೂಲಕ ಅವರ ಹೆಸರನ್ನು ಶಾಶ್ವತವಾಗಿ ಉಳಿಸಲು ಪ್ರತಿಮೆ ನಿರ್ಮಿಸಲಾಗಿದೆ.
ಐತಿಹಾಸಿಕ ಸ್ಥಳವಾದ ಬಾವುಟಗುಡ್ಡೆಯಲ್ಲಿ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ನ.19ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದ ಸ್ವಾಮೀಜಿ ಅದ್ದೂರಿಯಾಗಿ ಲೋಕಾರ್ಪಣೆ ಮಾಡಲಿದ್ದಾರೆ. ಆನಂತರ ನೆಹರೂ ಮೈದಾನದ ಫುಟ್ಬಾಲ್ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಂದಾಜು 25,000ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಅಲ್ಲಿ ವಿವಿಧ ಇಲಾಖೆಗಳ ವತಿಯಿಂದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ಸಹ ನೆರವೇರಿಸಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದರು.
ಇದಕ್ಕೆ ಸಂಬಂಧಿಸಿದಂತೆ ಸುಸಜ್ಜಿತ ವೇದಿಕೆ ನಿರ್ಮಾಣ, ಎಲ್ ಇ ಡಿ ಅಳವಡಿಕೆ, ಕುರ್ಚಿಗಳು, ಅತಿಥಿಗಳಿಗೆ ಉಟೋಪಚಾರ, ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆ, ಪುತ್ತೂರು, ಸುಳ್ಯ, ಬೆಳ್ತಂಗಡಿ, ಕೊಡಗು ಸೇರಿದಂತೆ ವಿವಿಧೆಡೆಯಿಂದ ಬರುವ ಕೆದಂಬಾಡಿ ರಾಮಯ್ಯ ಗೌಡರ ಅಭಿಮಾನಿಗಳನ್ನು ಕರೆತರಲು ಅಗತ್ಯ ಬಸ್ ಗಳ ವ್ಯವಸ್ಥೆ ಮಾಡಿಕೊಳ್ಳಬೇಕಿದೆ. ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳು ಪ್ರಮುಖ ಪಾತ್ರ ವಹಿಸಬೇಕಾಗಿದ್ದು, ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಸಲಾಗುವುದು. ಕಾರ್ಯಕ್ರಮಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರುಗಳು ದಕ್ಷಿಣ ಕನ್ನಡ ಹಾಗೂ ಕೊಡಗಿನ ಶಾಸಕರು ಆಗಮಿಸಲಿದ್ದಾರೆ ಎಂದು ಹೇಳಿದರು.
ಮಂಗಳೂರು ಮೇಯರ್ ಜಯಾನಂದ ಅಂಜನ್, ಉಪಮೇಯರ್ ಪೂರ್ಣಿಮಾ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ರಮೇಶ್ ವೇದಿಕೆಯಲ್ಲಿದ್ದರು.
Bavutagudde Kedambady ramaya gowda bronze statue to be established in Mangalore by Cm Bommai on Nov 19 said MLA Vedavyas Kamath in Mangaluru.
02-07-25 02:21 pm
HK News Desk
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ; ಸಿಬಿಐ ತನಿಖೆಗೆ...
01-07-25 10:52 pm
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
02-07-25 05:31 pm
HK News Desk
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
02-07-25 11:39 am
Mangalore Correspondent
ಹಾಸನದಲ್ಲಿ ಹೃದಯಾಘಾತ ಹೆಚ್ಚಳ ಬಗ್ಗೆ ವರದಿ ಕೇಳಿದ್ದೇ...
30-06-25 10:59 pm
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
02-07-25 12:24 pm
Mangalore Correspondent
Mulki Abdul Latif Murder Case, Accused Arrest...
01-07-25 04:36 pm
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm