ಬ್ರೇಕಿಂಗ್ ನ್ಯೂಸ್
14-11-22 06:17 pm Mangalore Correspondent ಕರಾವಳಿ
ಮಂಗಳೂರು, ನ.14: ತೆಲಂಗಾಣದಲ್ಲಿ ಆಡಳಿತಾರೂಢ ಟಿಆರ್ ಎಸ್ ಶಾಸಕರನ್ನು ಬಿಜೆಪಿಗೆ ಸೆಳೆಯಲು ಮಾಡಿದ್ದ ಆಪರೇಶನ್ ಕಮಲ ಯತ್ನ ಪ್ರಕರಣದಲ್ಲಿ ತೆಲಂಗಾಣ ವಿಶೇಷ ಪೊಲೀಸ್ ತನಿಖಾ ತಂಡವು ಪುತ್ತೂರಿನಲ್ಲಿ ಮನೆಯೊಂದಕ್ಕೆ ದಾಳಿ ನಡೆಸಿದೆ. ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ರಾಮಚಂದ್ರ ಭಾರತಿ ಎಂಬಾತ ಪುತ್ತೂರಿನಲ್ಲಿ ಮನೆ ಹೊಂದಿದ್ದು, ತೆಲಂಗಾಣ ಪೊಲೀಸರು ದಾಳಿ ನಡೆಸಿದ್ದಾರೆ.
ತೆಲಂಗಾಣದಲ್ಲಿ ನಾಲ್ವರು ಶಾಸಕರನ್ನು ಸೆಳೆಯಲು 250 ಕೋಟಿ ರೂಪಾಯಿ ಆಮಿಷ ಒಡ್ಡಲಾಗಿತ್ತು ಅನ್ನುವುದು ಇತ್ತೀಚೆಗೆ ದೊಡ್ಡ ಸುದ್ದಿಯಾಗಿತ್ತು. ಪ್ರಕರಣದಲ್ಲಿ ಶಾಸಕರೊಬ್ಬರ ಮನೆಗೆ ಮೂವರ ತಂಡ ತೆರಳಿದ್ದ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿತ್ತು. ಬಿಜೆಪಿ ಏಜಂಟರು ಎನ್ನಲಾದ ಫರೀದಾಬಾದ್ ನಲ್ಲಿ ನೆಲೆಸಿದ್ದ ರಾಮಚಂದ್ರ ಭಾರತಿ, ಉದ್ಯಮಿ ನಂದಕುಮಾರ್ ಮತ್ತು ತಿರುಪತಿಯ ಸಿಂಹಯ್ಯಾಜಿ ಸ್ವಾಮಿ ಎಂಬವರು ಪೊಲೀಸರ ಬಂಧನಕ್ಕೊಳಗಾಗಿದ್ದರು. ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿತ್ತು.

ಇದೀಗ ಹರ್ಯಾಣ, ಕೇರಳ, ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ತೆಲಂಗಾಣ ಪೊಲೀಸರು ಆರೋಪಿಗಳಿಗೆ ಸೇರಿದ ಆಸ್ತಿಗಳ ಮೇಲೆ ದಾಳಿ ನಡೆಸಿದ್ದಾರೆ. ಪುತ್ತೂರಿನಲ್ಲಿ ರಾಮಚಂದ್ರ ಭಾರತಿ ಮನೆ ಹೊಂದಿದ್ದಾರೆ ಎನ್ನಲಾಗುತ್ತಿದ್ದು, ಅಲ್ಲಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಒಂದು ತಿಂಗಳ ಹಿಂದೆ ಈ ಮೂವರು ಟಿಆರ್ ಎಸ್ ಶಾಸಕ ಪೈಲಟ್ ರೋಹಿತ್ ರೆಡ್ಡಿ ಅವರ ಮನೆಗೆ ತೆರಳಿದ್ದು, ನೀವು ಬಿಜೆಪಿ ಸೇರಿದರೆ ನೂರು ಕೋಟಿ ನೀಡುವುದಾಗಿ ಆಫರ್ ನೀಡಿದ್ದರು. ಅಲ್ಲದೆ, ಇತರ ಮೂವರನ್ನು ಬಿಜೆಪಿಗೆ ಕರೆತಂದರೆ ತಲಾ 50 ಕೋಟಿ ನೀಡುವುದಾಗಿ ಹೇಳಿದ್ದರು ಎಂಬುದಾಗಿ ರೋಹಿತ್ ರೆಡ್ಡಿ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಗಳು ರೋಹಿತ್ ರೆಡ್ಡಿ ಮನೆಯಲ್ಲಿ ಇರುವಾಗಲೇ ಪೊಲೀಸರು ದಾಳಿ ನಡೆಸಿ, ಅವರನ್ನು ಬಂಧಿಸಿದ್ದರು.

ಈ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್, ವಿಡಿಯೋ ಬಿಡುಗಡೆ ಮಾಡಿ ಆಪರೇಶನ್ ಕಮಲಕ್ಕೆ ಯತ್ನಿಸಿದ್ದ ಬಿಜೆಪಿ ಏಜಂಟರು ಎಂಬುದಾಗಿ ಆರೋಪ ಮಾಡಿದ್ದರು. ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲವೆಂದು ತೆಲಂಗಾಣ ಬಿಜೆಪಿ ಘಟಕ ಹೇಳಿಕೊಂಡಿತ್ತು. ಆದರೆ ಪೊಲೀಸರು ಆರೋಪಿಗಳ ಸಂಪರ್ಕದ ಬಗ್ಗೆ ತನಿಖೆ ನಡೆಸುತ್ತಿದ್ದು, ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಮಾಹಿತಿ ಕಲೆಹಾಕುತ್ತಿದೆ.
Simultaneous searches were launched by Telangana police at seven places across four states including Puttur in Karnataka on Saturday in connection with Poachgate, which allegedly involved big money to engineer defections.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm