ಬ್ರೇಕಿಂಗ್ ನ್ಯೂಸ್
19-11-22 12:32 pm Mangalore Correspondent ಕರಾವಳಿ
ಮಂಗಳೂರು, ನ.19 : ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಲೋಕಾರ್ಪಣೆ ಮಾಡಿದರು.
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿದ್ಯ ವಹಿಸಿದ್ದರು. ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ಥ್ ನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ. ಸದಾನಂದ ಗೌಡ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಸಂಜೀವ ಮಠಂದೂರು, ಹರೀಶ ಪೂಂಜ, ಯು.ಟಿ. ಖಾದರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಇತರೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.
ರಾಮಯ್ಯ ಗೌಡರು ಕ್ರಾಂತಿಕಾರಿ ಪುರುಷ ; ಮುಖ್ಯಮಂತ್ರಿ
ಪ್ರತಿಮೆ ಲೋಕಾರ್ಪಣೆ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಮಂಗಳೂರಿಗೆ ಇವತ್ತು ಮಹತ್ವದ ದಿನ, ಇತಿಹಾಸಕ್ಕೆ ಮಹತ್ವ ಕೊಡುವ ದಿನ. ಬೆಳಕಿಗೆ ಬಾರದ ರಾಮಯ್ಯ ಗೌಡರ ಕಥೆ ಈಗ ಸುದ್ದಿಗೆ ಬಂದಿದೆ. ರಾಮಯ್ಯ ಗೌಡರಂಥವರ ನಿರಂತರ ಹೋರಾಟದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಇತಿಹಾಸದಲ್ಲಿ ಇಂಥಹ ಮತ್ತಷ್ಟು ಸತ್ಯಗಳು ಹೊರಗೆ ಬರಬೇಕಿದೆ.
ರಾಮಯ್ಯ ಗೌಡ ಒಬ್ಬ ಶ್ರೇಷ್ಠ ಕ್ರಾಂತಿಕಾರಿ ಪುರುಷ. ಮೊದಲ ಬಾರಿಗೆ ಬ್ರಿಟಿಷರನ್ನು ಸೋಲಿನ ರುಚಿ ತೋರಿಸಿದ್ದರು. ಅವರನ್ನು ಸೋಲಿಸಲು ಬ್ರಿಟಿಷ್ ಸೈನ್ಯ ಒಟ್ಟಾಗಿ ಬಂದು ಕೊನೆಗೆ ಗಲ್ಲಿಗೇರಿಸಿತು. ಇಂಥಹ ಹೋರಾಟದ ಕಥೆ ಇಡೀ ದೇಶಕ್ಕೆ ಪರಿಚಯ ಆಗಬೇಕು. ಇದೀಗ ಅವರ ಮೂರ್ತಿ ಸ್ಥಾಪನೆ ಮೂಲಕ ಅವರ ಇತಿಹಾಸ ಜಗತ್ತಿಗೆ ಗೊತ್ತಾಗಿದೆ. ಇಂತಹ ಅನಾಮಧೇಯ ಹೋರಾಟಗಾರರು ನಮ್ಮಲ್ಲಿ ಬಹಳಷ್ಟು ಜನ ಇದ್ದಾರೆ. ಇಂಥ ಅನಾಮಧೇಯ ಹೋರಾಟಗಾರರ ಸ್ಮಾರಕ ಮಾಡಲು ನಮಗೆ ಸ್ಪೂರ್ತಿ ಬಂದಿದೆ. ಬೆಂಗಳೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇವತ್ತಿನ ಪೀಳಿಗೆಗೆ ಇದನ್ನ ತಿಳಿ ಹೇಳಿ ಸ್ಫೂರ್ತಿ ತುಂಬುವ ಕೆಲಸ ಆಗಬೇಕಿದೆ ಎಂದು ಹೇಳಿದರು.
Rs 40 Lakhs Statue of Freedom Fighter Kedambadi Ramaiah Gowda Unveiled at Tagore Park by Karnataka CM Bommai. Late Gowda had launched the freedom struggle way back in 1837 against the British. The Dakshina Kannada district administration, the Mangaluru City Corporation, and the Swatantrya Horatagara Sri Kedambadi Ramaiah Gowda Smaraka Ustuvari Samithi jointly conducted the programme.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm