ಬ್ರೇಕಿಂಗ್ ನ್ಯೂಸ್
13-10-20 07:13 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 13: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರ ಹಿಂದುತ್ವದ ಬಗ್ಗೆ ಬಿಜೆಪಿಗೇನು ಗೊತ್ತು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್ಸಿ ಎಸ್ಟಿ ಘಟಕದ ನಾಯಕರು ಪ್ರಶ್ನಿಸಿದ್ದಾರೆ.
ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಎಸ್ಸಿ ಎಸ್ಟಿ ಘಟಕದ ಅಧ್ಯಕ್ಷ ಶೇಖರ ಕುಕ್ಕೇಡಿ ಮತ್ತು ರಘುರಾಜ್ ಕದ್ರಿ, ಮಿಥುನ್ ರೈ ನಿಜವಾದ ಹಿಂದು ನಾಯಕ. ಅವರು ಅನೇಕ ದೇವಸ್ಥಾನ, ದೈವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ನೆರವು ನೀಡಿದ್ದಾರೆ. ೧೫೦ಕ್ಕೂ ಹೆಚ್ಚು ಗೋವುಗಳನ್ನ ದಾನ ಮಾಡಿದ್ದಾರೆ. ಹಾಗಾಗಿ ಮಿಥುನ್ ರೈ ಹಿಂದುತ್ವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂದು ಹೇಳಿದರು.
ಉತ್ತರ ಪ್ರದೇಶದಲ್ಲಿ ದಲಿತ ಯುವತಿಯರ ಅತ್ಯಾಚಾರ, ಕೊಲೆ ಕೃತ್ಯಗಳು ನಡೆಯುತ್ತಲೇ ಇದೆ. ಅಲ್ಲಿನ ಮುಖ್ಯಮಂತ್ರಿ ವೈಫಲ್ಯದ ಬಗ್ಗೆ ಮಿಥುನ್ ರೈ ಮಾತನಾಡಿದ್ದಾರೆ ವಿನಾ ಯಾವುದೇ ಸಮುದಾಯವನ್ನು ಅವಮಾನಿಸುವ ಹೇಳಿಕೆ ನೀಡಿಲ್ಲ. ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಮೇಲೆ ದೈಹಿಕ ಹಲ್ಲೆಗಳಾದಾಗ ಮಾತನಾಡದ ಬಿಜೆಪಿಗರು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥರ ಆಡಳಿತ ವೈಫಲ್ಯದ ವಿರುದ್ಧ ಧ್ವನಿ ಎತ್ತಿರುವುದಕ್ಕೆ ಅಪಸ್ವರ ಎತ್ತುವುದು ಯಾವ ನ್ಯಾಯ ಎಂದು ಕಿಡಿಕಾರಿದರು. ಜಿಲ್ಲೆಯ ಬಿಜೆಪಿಯವರಿಗೆ ದಲಿತರ ಬಗ್ಗೆ ಕಾಳಜಿ ಇದ್ದರೆ ದಲಿತರ ಮೇಲಾಗುವ ಅನ್ಯಾಯದ ವಿರುದ್ಧ ಮೊದಲು ಧ್ವನಿ ಎತ್ತಲಿ. ದೇಶದ ನಲವತ್ತು ಕೋಟಿ ದಲಿತರಿಗೆ ರಕ್ಷಣೆ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ದಿನನಿತ್ಯ ದೇಶಾದ್ಯಂತ ದಲಿತರ ಮೇಲೆ ದೌರ್ಜನ್ಯ ಆಗುತ್ತಿದೆ. ಅವುಗಳಲ್ಲಿ ಕೆಲವು ಪ್ರಕರಣ ಮಾತ್ರ ಬೆಳಕಿಗೆ ಬರುತ್ತಿದೆ ಎಂದು ವಿಷಾದಿಸಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ರಜನೀಶ್ ಕಾಪಿಕಾಡ್, ರೋಹಿತ್ ಉಳ್ಳಾಲ್, ಹೊನ್ನಯ್ಯ , ಪ್ರೇಮನಾಥ್ ಬಲ್ಲಾಳ್ಬಾಗ್ , ವಿಜಯಲಕ್ಷ್ಮಿ, ದಿನೇಶ್, ಪ್ರಭಾಕರ, ಚಂದ್ರಿಕಾ ಉಪಸ್ಥಿತರಿದ್ದರು.
What Power does BJP have to question about Youth Congress Leader Mithun Rai's Hindutva, slams youth congress members here in Mangalore at a press meet held at congress Bhavan office here on 13 Tuesday, October 2020.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm