ಬ್ರೇಕಿಂಗ್ ನ್ಯೂಸ್
28-11-22 06:39 pm Udupi Correspondent ಕರಾವಳಿ
ಉಡುಪಿ, ನ.28 : ಮಣಿಪಾಲದ ಎಂಐಟಿ ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ತರಗತಿ ವೇಳೆ ಮುಸ್ಲಿಂ ವಿದ್ಯಾರ್ಥಿಯೊಬ್ಬನಿಗೆ `ಟೆರರಿಸ್ಟ್’ ಎಂಬ ಪದ ಬಳಸಿ ನಿಂದನೆ ಮಾಡಿದ ಘಟನೆಯ ವಿಡಿಯೋ ವೈರಲ್ ಆಗಿದೆ.
ತರಗತಿಯಲ್ಲಿ ವಿದ್ಯಾರ್ಥಿ ಮತ್ತು ಪ್ರೊಫೆಸರ್ ವಾಗ್ವಾದ ನಡೆಸುತ್ತಿರುವ ವಿಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದೇ ತಿಂಗಳ ನವೆಂಬರ್ 26ರಂದು ಘಟನೆ ನಡೆದಿದ್ದು, ವಿದ್ಯಾರ್ಥಿಗಳೊಂದಿಗೆ ಮಾತನಾಡುವಾಗ ಮುಸ್ಲಿಮರು ಟೆರರಿಸ್ಟ್ ಗಳು ಎಂಬ ಅರ್ಥದಲ್ಲಿ ಪ್ರೊಫೆಸರ್ ಹೇಳಿದ್ದು, ವಿವಾದಕ್ಕೆ ಕಾರಣವಾಗಿದೆ.

ಪ್ರೊಫೆಸರ್ ಮಾತಿಗೆ ತರಗತಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿ, ಇಡೀ ಮುಸ್ಲಿಂ ಕಮ್ಯುನಿಟಿಯನ್ನು ಟೆರರಿಸ್ಟ್ ಎಂದು ಕರೆಯಬೇಡಿ, ಅನಗತ್ಯವಾಗಿ ಈ ರೀತಿ ಮಾತನಾಡಬೇಡಿ ಎಂದಿದ್ದಾನೆ. ಬಳಿಕ ಪ್ರಾಧ್ಯಾಪಕರು ಸಮಜಾಯಿಷಿ ಹೇಳಿದ್ದು ವಿದ್ಯಾರ್ಥಿ ತನ್ನ ಮಗನಂತೆ ಎಂದಿದ್ದಾರೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿ `ನೀವು ನಿಮ್ಮ ಮಗನಿಗೆ ಹೀಗೆ ಮಾತನಾಡುತ್ತೀರಾ? ನೀವು ಅವನನ್ನು ಭಯೋತ್ಪಾದಕ ಎಂದು ಕರೆಯುತ್ತೀರಾ? ನೀವು ಎಷ್ಟು ಜನರ ಮುಂದೆ ನನ್ನನ್ನು ಹಾಗೆ ಕರೆಯುತ್ತೀರಿ? ಇದು ತರಗತಿ, ನೀವು ವೃತ್ತಿಪರರಾಗಿ ಕಲಿಸುತ್ತಿದ್ದೀರಿ, ಮುಸ್ಲಿಮನಾಗಿ ದಿನನಿತ್ಯ ಇದನ್ನು ಎದುರಿಸುವುದು ತಮಾಷೆಯಲ್ಲ. ನೀವು ನನ್ನನ್ನು ಹಾಗೆ ಕರೆಯಬೇಡಿ” ಎಂದು ವಿದ್ಯಾರ್ಥಿ ವಾಗ್ವಾದಕ್ಕಿಳಿದಿದ್ದಾನೆ. ವಿದ್ಯಾರ್ಥಿ ಆಕ್ಷೇಪಿಸುತ್ತಿದ್ದಂತೆ ಪ್ರೊಫೆಸರ್ ವಿಷಾದ ವ್ಯಕ್ತಪಡಿಸಿ, ಸ್ಥಳದಲ್ಲೇ ಕ್ಷಮೆ ಕೋರಿದ್ದು ವಿಡಿಯೋದಲ್ಲಿದೆ.
ನೀವು ಕ್ಷಮೆ ಕೇಳಿದ ತಕ್ಷಣ ಮಾಡಿರುವ ಆರೋಪ ಬದಲಾಗಲ್ಲ ಎಂದು ವಿದ್ಯಾರ್ಥಿ ಆಕ್ಷೇಪಿಸಿದ್ದಾನೆ. ಈ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಉಪನ್ಯಾಸಕನ ವಿರುದ್ಧ ಮಾಹೆ ವಿಶ್ವವಿದ್ಯಾನಿಲಯದ ಆಡಳಿತ ಅಮಾನತುಗೊಳಿಸಿ ಆಂತರಿಕ ತನಿಖೆಗೆ ಆದೇಶಿಸಿದೆ. ವಿದ್ಯಾರ್ಥಿಗೆ ಕೌನ್ಸಿಲಿಂಗ್ ಮೂಲಕ ಸಾಂತ್ವನ ಹೇಳಿದೆ.
A Professor in a class room in India calling a Muslim student ‘terrorist’ - This is what it has been to be a minority in India! pic.twitter.com/EjE7uFbsSi
— Ashok Swain (@ashoswai) November 27, 2022
In a shocking incident, a professor from a Reputed University was suspended after a video went viral on social media where a student is seen to be arguing with the professor for allegedly calling him a terrorist. The professor later apologised to the student and said that he did not seriously mean it and that he is like his kid.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am