ಬ್ರೇಕಿಂಗ್ ನ್ಯೂಸ್
01-12-22 11:11 pm Udupi Correspondent ಕರಾವಳಿ
ಉಡುಪಿ, ಡಿ.1 : ಸುರತ್ಕಲ್ ಟೋಲ್ ರದ್ದುಗೊಳಿಸಿ, ಅದರ ಶುಲ್ಕವನ್ನು ಹೆಜಮಾಡಿ ಟೋಲ್ ಜತೆ ವಿಲೀನ ಮಾಡಿರುವುದು ಅವೈಜ್ಞಾನಿಕವಾಗಿದ್ದು, ಇದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಡಿ.1ರಂದು ಶಾಸಕ ರಘುಪತಿ ಭಟ್ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ವಿನಂತಿಸಿದರು.
ಮನವಿ ಸ್ವೀಕರಿಸಿದ ಸಚಿವ ನಿತಿನ್ ಗಡ್ಕರಿ ಈ ವಿಷಯದ ಕುರಿತಾಗಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳೊಂದಿಗೆ ಡಿ. 5 ರಂದು ಸಭೆ ನಡೆಸುವುದಾಗಿ ತಿಳಿಸಿದರು. ಉಡುಪಿ - ಚಿಕ್ಕಮಗಳೂರು ಸಂಸದರು, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಗುಜರಾತ್ ಚುನಾವಣೆಯಲ್ಲಿ ಇರುವುದರಿಂದ ಅವರ ಸೂಚನೆಯಂತೆ ನ.30ರಂದು ಶೋಭಾ ಕರಂದ್ಲಾಜೆ ಅವರ ದೆಹಲಿ ಕಚೇರಿಯ ಅಧಿಕಾರಿಗಳು ಈ ಕುರಿತು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಕಚೇರಿ ಅಧಿಕಾರಿಗಳನ್ನು ಭೇಟಿ ಮಾಡಿ ವಿಷಯ ಪ್ರಸ್ತಾಪಿಸಿದ್ದರು. ಬಳಿಕ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳನ್ನು ಭೇಟಿಯಾಗಿ ಸುರತ್ಕಲ್ ಟೋಲ್ ಶುಲ್ಕವನ್ನು ಹೆಜಮಾಡಿ ಟೋಲ್ ಜತೆ ವಿಲೀನ ಮಾಡಿರುವುದರಿಂದ ಸ್ಥಳೀಯವಾಗಿ ಉಂಟಾಗುವ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ.
ಸುರತ್ಕಲ್ ಟೋಲ್ ರದ್ದು ಮಾಡಿ ಅದರ ಶುಲ್ಕವನ್ನು ಹೆಜಮಾಡಿ ಟೋಲ್ ಜತೆ ವಿಲೀನಗೊಳಿಸಿ 2 ಕಡೆಯ ಟೋಲ್ ಶುಲ್ಕವನ್ನು ಒಂದೇ ಟೋಲ್ ಮೇಲೆ ಹೇರುವುದರಿಂದ ಉಡುಪಿ ಜಿಲ್ಲೆಯ ವಾಹನ ಸವಾರರು ದುಬಾರಿ ಶುಲ್ಕ ಪಾವತಿಸಬೇಕಾಗುತ್ತದೆ. ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಟ್ಯಾಕ್ಸಿ ಅಥವಾ ಇತರ ವಾಹನಗಳು ಮುಲ್ಕಿಯಿಂದ ಕಿನ್ನಿಗೋಳಿ ಮುಖಾಂತರ ಹೋಗುತ್ತಿದ್ದರಿಂದ ಸುರತ್ಕಲ್ ಟೋಲ್ ಪಾವತಿಸುವ ಅವಶ್ಯಕತೆ ಇರಲಿಲ್ಲ. ಈಗ ಸುರತ್ಕಲ್ ಟೋಲ್ ಶುಲ್ಕ ಹೆಜಮಾಡಿ ಟೋಲ್ ಜತೆ ವಿಲೀನದಿಂದ ಮೂಲ್ಕಿಯಿಂದ ಕಿನ್ನಿಗೋಳಿ ಮೂಲಕ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಟ್ಯಾಕ್ಸಿ ಸೇರಿದಂತೆ ಇತರ ವಾಹನ ಸವಾರರು ಹೆಜಮಾಡಿ ಟೋಲ್ ನಲ್ಲಿ ಹೆಚ್ಚುವರಿ ಶುಲ್ಕ ಪಾವತಿಸಬೇಕಾಗುತ್ತದೆ. ಅಲ್ಲದೆ ಸುರತ್ಕಲ್ ಟೋಲ್ ನಲ್ಲಿ ಸ್ಥಳೀಯ ವಾಣಿಜ್ಯ ಉದ್ದೇಶಕ್ಕೆ ಬಳಸುವ ವಾಹನಗಳಿಗೆ ಶೇ 50 ರಷ್ಟು ರಿಯಾಯಿತಿ ಇತ್ತು. ಅದನ್ನು ಈ ಟೋಲ್ ನಲ್ಲಿ ವಿಲೀನ ಮಾಡುವಾಗ ಪರಿಗಣಿಸದೆ ಇರುವ ಬಗ್ಗೆಯೂ ಮನವಿಯಲ್ಲಿ ತಿಳಿಸಿರುತ್ತಾರೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರು ಡಿ. 5 ರಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳೊಂದಿಗೆ ನಡೆಸುವ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವ ವರೆಗೆ ಟೋಲ್ ದರ ಹೆಚ್ಚಳ ಮಾಡದಂತೆ ಶಾಸಕ ರಘುಪತಿ ಭಟ್ ಅವರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರ ಆಪ್ತ ಕಾರ್ಯದರ್ಶಿ ಸಾಕೇತ್ ಸಿಂಗ್ ರಾಣಾವತ್, ಹೆಚ್ಚುವರಿ ಆಪ್ತ ಕಾರ್ಯದರ್ಶಿ ಮಂಜುನಾಥ್ ಗೌಡ ಹಾಗೂ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್ ಉಪಸ್ಥಿತರಿದ್ದರು.
Mla Raghupathi Bhat met Union Minister for Road Transport and Highways Nitin Gadkari in New Delhi on December 1 and submitted a memorandum to him about the consequences of the cancellation of Surathkal toll and the merger of its fee with hejamadi toll. He requested them to be convinced of the issues and take appropriate action.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm