ಬ್ರೇಕಿಂಗ್ ನ್ಯೂಸ್
05-12-22 06:11 pm Mangalore Correspondent ಕರಾವಳಿ
ಉಳ್ಳಾಲ, ಡಿ.5: ಉಳ್ಳಾಲ ನಗರಸಭೆಯ ಕಾಂಗ್ರೆಸ್ ಕೌನ್ಸಿಲರ್ ರವಿಚಂದ್ರ ಗಟ್ಟಿ ಅವರು ಸಾಮಾಜಿಕ ಜಾಲತಾಣದಲ್ಲಿ ಪಕ್ಷ ವಿರೋಧಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನ ಅಮಾನತು ಮಾಡಲಾಗಿದೆ.
ತಮ್ಮ ಹಾಸ್ಯ ಪೃವೃತ್ತಿಯಿಂದ ಪಾನಕ ರವಿ ಎಂದೇ ಖ್ಯಾತರಾಗಿರುವ ಉಳ್ಳಾಲ ನಗರಸಭೆಯ ಕೌನ್ಸಿಲರ್ ರವಿಚಂದ್ರ ಗಟ್ಟಿ ಅವರು ನಿರಂತರ ತನ್ನದೇ ಕಾಂಗ್ರೆಸ್ ಪಕ್ಷದ ವಿರುದ್ಧ ಹೇಳಿಕೆಗಳಲ್ಲದೆ, ಚಟುವಟಿಕೆಗಳನ್ನ ನಡೆಸುತ್ತಿರುವುದರ ವಿರುದ್ಧ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರು ಶಿಸ್ತು ಕ್ರಮ ಕೈಗೊಂಡಿದ್ದಾರೆ. ರವಿ ಅವರು ಇತ್ತೀಚೆಗೆ ಉಳ್ಳಾಲ ನಗರಸಭೆ ಕಚೇರಿಯೊಳಗಡೆ ಅರೆ ಬೆತ್ತಲಾಗಿ ಹೊರಳಾಡಿ ಆಡಳಿತ ಕಾಂಗ್ರೆಸ್ ಪಕ್ಷದ ವಿರುದ್ಧವೇ ಪ್ರತಿಭಟನೆ ನಡೆಸಿದ್ದು ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸ್ವಪಕ್ಷದ ಕೌನ್ಸಿಲರೇ ನಗರಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದು ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕೊಳಪಡಿಸಿತ್ತು.

ಇತ್ತೀಚೆಗೆ ನಡೆದ ಉಳ್ಳಾಲ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಸಂದರ್ಭವೂ ರವಿ ಅವರು ಸಭೆಗೆ ಗೈರಾಗಿ ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡಿದ ಕಾರಣದಿಂದ ಅಮಾನತು ಮಾಡಲಾಗಿದ್ದು ಮುಂದಿನ ಆದೇಶದ ತನಕ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ullal councillor ravichandra gatty suspended from party by congress block President.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm