ಬ್ರೇಕಿಂಗ್ ನ್ಯೂಸ್
07-12-22 01:56 pm Mangalore Correspondent ಕರಾವಳಿ
ಉಳ್ಳಾಲ, ಡಿ.6: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂಬೇಡ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಅಗತ್ಯ ಬೆಂಬಲ ನೀಡುತ್ತೇನೆ ಎಂದು ಕರ್ನಾಟಕ ರಾಜ್ಯಪಾಲರೂ ಮಂಗಳೂರು ವಿ.ವಿ ಕುಲಾಧಿಪತಿಗಳು ಆಗಿರುವ ಥಾವರ್ ಚಂದ್ ಗೆಹ್ಲೋಟ್ ಭರವಸೆ ನೀಡಿದರು.
ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 66ನೇ ಮಹಾ ಪರಿನಿರ್ವಾಣ ದಿನವಾದ ಮಂಗಳವಾರ (ಡಿಸೆಂಬರ್ 6) ಮಂಗಳೂರು ವಿಶ್ವವಿದ್ಯಾನಿಲಯದ ವಿಜ್ಞಾನ ವಿಭಾಗದ ಬಳಿ ಡಾ.ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಮೂಲಕ ಸ್ಥಾಪಿಸಲಾಗಿರುವ ಬಾಬಾಸಾಹೇಬರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ ಬಳಿಕ ಮಂಗಳಾ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅತ್ಯುನ್ನತ ಶಿಕ್ಷಣ ಪಡೆದಿದ್ದ ಅಂಬೇಡ್ಕರ್ ತಮ್ಮ ಸುಖ ಜೀವನವನ್ನು ನಿರ್ಲಕ್ಷಿಸಿ ಸಮಾಜದ ಲೋಪಗಳನ್ನು ತಿದ್ದಲು ಪ್ರಯತ್ನಿಸಿದರು. ಅವರು ಸಮಾಜದ ಎಲ್ಲಾ ವರ್ಗಗಳಿಗೂ ಸೇರಿದವರು. ಎಲ್ಲರ ನಡುವೆ ಸಮಾನತೆ, ಸಾಮರಸ್ಯ ತರಲು ಪ್ರಯತ್ನಿಸಿದವರು. ಈ ಚಿಂತನೆ ಅವರು ರಚಿಸಿದ ಸಂವಿಧಾನದಲ್ಲೂ ಪ್ರತಿಫಲಿಸುತ್ತದೆ ಎಂದರು.

ಮಹಾತ್ಮ ಗಾಂಧಿ ತೋಟಗಾರಿಕೆ ಮತ್ತು ಅರಣ್ಯ ವಿಶ್ವವಿದ್ಯಾನಿಲಯ, ದುರ್ಗ್, ಛತ್ತೀಸ್ ಗಢ್ ಕುಲಪತಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ವಿಶ್ವವಿದ್ಯಾನಿಲಯ ಸಮಾಜ ವಿಜ್ಞಾನಗಳು, ಮಾಹೊ ಇಲ್ಲಿನ ಸಂಸ್ಥಾಪಕ ಕುಲಪತಿ ಪ್ರೊ. ಆರ್. ಎಸ್. ಕುರೀಲ್ ಅವರು ಅಂಬೇಡ್ಕರ್ ಅವರ ಜೀವನದ ಮಹತ್ತರ ಘಟ್ಟಗಳು, ಸಾಧನೆಗಳನ್ನು ವಿವರಿಸಿದರು.

ಸಂವಿಧಾನವೇ ಅಂಬೇಡ್ಕರ್ ಅವರು ಸಮಾಜದ ಸಮಸ್ಯೆಗಳಿಗೆ ನೀಡಿದ ಪರಿಹಾರ ಎಂದು ಬಣ್ಣಿಸಿದ ಅವರು, ಅಂಬೇಡ್ಕರ್ ಅವರಂತೆಯೇ ಸಾಮಾಜಿಕ ನ್ಯಾಯಕ್ಕಾಗಿ ದುಡಿದ ನಾರಾಯಣ ಗುರುಗಳಿಗೆ ʼಭಾರತ ರತ್ನʼ ನೀಡಬೇಕು. ಸಾಮಾಜಿಕ ನ್ಯಾಯ ಹಾಗೂ ಬಡವರ್ಗಗಳ ಏಳಿಗೆಗೆ ಪ್ರತ್ಯೇಕ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕು ಎಂದು ಆಗ್ರಹಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಮೊದಲಾದವರು ಉಪಸ್ಥಿತರಿದ್ದರು.
Karnataka Governor Thaawar Chand Gehlot, who is also the Chancellor of Mangalore University, has assured that he will extend necessary support to the Centre if a proposal is submitted to the Central Government for setting up an Ambedkar Study Chair in Mangalore University.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am