ಬ್ರೇಕಿಂಗ್ ನ್ಯೂಸ್
10-12-22 10:38 pm Mangalore Correspondent ಕರಾವಳಿ
ಮಂಗಳೂರು, ಡಿ.10: ಹಿಮಾಚಲ ಪ್ರದೇಶ ಮತ್ತು ದೆಹಲಿ ಪಾಲಿಕೆಯ ಚುನಾವಣೆಯಲ್ಲಿ ಸೋಲಾದ ಬಳಿಕ ಬಿಜೆಪಿಗೆ ಚುನಾವಣೆ ಭಯ ಕಾಡತೊಡಗಿದೆ. ಹಾಗಾಗಿ ಗುಜರಾತ್ ಮಂತ್ರ ಪಠಿಸುತ್ತಿದ್ದಾರೆ. ಗುಜರಾತ್ ರೀತಿಯಲ್ಲೇ ಕರ್ನಾಟಕದಲ್ಲಿಯೂ ಫಲಿತಾಂಶ ಬರಲಿದೆ ಎನ್ನುತ್ತಿದ್ದಾರೆ. ಆದರೆ ಹಿಮಾಚಲದಲ್ಲಿ ಕಾಂಗ್ರೆಸ್, ಬಿಜೆಪಿಯನ್ನು ಸೋಲಿಸಿರುವುದರಿಂದ ಅದನ್ನು ಅರಗಿಸಿಕೊಳ್ಳಲಾಗದೆ ಗುಜರಾತ್ ಮಾದರಿ ಅನ್ನುತ್ತಿದ್ದಾರೆ. ಹಿಮಾಚಲದ ಸೋಲಿನ ಇಲ್ಲಿಯೂ ಮರುಕಳಿಕೆ ಆಗಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಬಿಜೆಪಿಯವರು ಚುನಾವಣೆಯಲ್ಲಿ ಸೋಲುವ ಭಯದಲ್ಲಿ ಇಲ್ಲದ ವಿಚಾರಗಳನ್ನು ಮುಂದಿಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್ ಎಂದು ಹೇಳಿ ಮುಸ್ಲಿಮರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಇವರಿಗೆ ಖಡಕ್ಕಾಗಿ ಪ್ರತ್ಯುತ್ತರ ನೀಡುತ್ತಿರುವುದರಿಂದ ಅವರನ್ನು ಟಾರ್ಗೆಟ್ ಮಾಡಿದ್ದಾರೆ. ಬಿಜೆಪಿಯವರಿಗೆ ಹಿಂದು- ಮುಸ್ಲಿಂ ನಡುವೆ ಕಂದಕ ಏರ್ಪಡಿಸುವುದೇ ಕೆಲಸವಾಗಿದೆ. ಮುಸ್ಲಿಮರು ಇಲ್ಲದೆ ಬಿಜೆಪಿ ಪಕ್ಷವೇ ಇರುವುದಿಲ್ಲ. ಬಿಜೆಪಿಯವರು ತಮ್ಮ ಬಿ ಟೀಮ್ ಆಗಿ ಎಸ್ಡಿಪಿಐ, ಆಪ್, ಎಐಎಂಐಎಂ ಸೃಷ್ಟಿಸಿದ್ದಾರೆ. ಅವುಗಳಿಗೆ ಫಂಡಿಂಗ್ ಮಾಡಿ, ಕಾಂಗ್ರೆಸ್ ವಿರುದ್ಧ ಛೂಬಿಡುತ್ತಿದ್ದಾರೆ ಎಂದು ಹೇಳಿದರು.


ಒವೈಸಿ ದೇಶ ವಿರೋಧಿ, ಹಿಂದು ವಿರೋಧಿ ಹೇಳಿಕೆ ನೀಡಿದರೂ ಬಿಜೆಪಿಯವರು ಏನೂ ಕ್ರಮ ಕೈಗೊಳ್ಳುವುದಿಲ್ಲ. ಯಾರಾದ್ರೂ ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ಜೈಲಿಗೆ ಹಾಕುತ್ತಾರೆ. ಓವೈಸಿ, ಮೋದಿಗೆ ಬೈದರೂ, ಹಿಂದುಗಳಿಗೆ ನೇರಾನೇರ ಬೈದರೂ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಕೇಳದಂತೇ ಇರುತ್ತಾರೆ. ಇದು ಬಿಜೆಪಿಯ ರಾಜಕೀಯ ಎಂದು ಹರೀಶ್ ಕುಮಾರ್ ಹೇಳಿದರು. ಕರಾವಳಿಯಲ್ಲಿ ಮರಳು ಮಾಫಿಯಾ ಮಿತಿ ಮೀರಿದೆ. ಈಗ ಲೋಕಾಯುಕ್ತ ಅಧಿಕಾರಿಗಳು ಮರಳು ಮಾಫಿಯಾ ವಿರುದ್ಧ ದಾಳಿ ನಡೆಸುವಂತಾಗಿದೆ. ಆದರೆ ಸಂಬಂಧಪಟ್ಟ ಅಧಿಕಾರಿಗಳು, ಇದನ್ನು ನಿಯಂತ್ರಣ ಮಾಡಬೇಕಿರುವ ಸಂಸದ, ಶಾಸಕರು ಮೌನವಾಗಿದ್ದಾರೆ ಎಂದು ಹೇಳಿದರು.

ಪ್ರತಿ ಕ್ಷೇತ್ರದಲ್ಲಿ ಎಂಟತ್ತು ಜನ ಆಕಾಂಕ್ಷಿಗಳು ಶಾಸಕ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ, ಯಾವ ರೀತಿ ಆಯ್ಕೆ ಮಾಡುತ್ತೀರಿ ಎಂಬ ಪ್ರಶ್ನೆಗೆ, ಅದು ನಮ್ಮ ಚುನಾವಣೆಗೆ ಆಯ್ಕೆ ಪ್ರಕ್ರಿಯೆ. ಪಕ್ಷದ ನಾಯಕರು ಯಾರು ಅಭ್ಯರ್ಥಿಯಾಗಬೇಕೆಂದು ಆಯ್ಕೆ ಮಾಡುತ್ತಾರೆ. ಹೈಕಮಾಂಡ್ ಅದನ್ನು ನಿರ್ಧರಿಸುತ್ತದೆ. ಈ ಬಾರಿ ರಾಜ್ಯದಲ್ಲಿ 50 ಶೇಕಡಾ ಹೊಸಬರಿಗೆ ಟಿಕೆಟ್ ದೊರೆಯಲಿದೆ ಎಂದು ಹೇಳಿದ್ದಾರೆ.
District Congress MLA Harish Kumar said, “Election fear has started for BJP after results in Himachal Pradesh assembly polls, MCD polls in Delhi and bye-elections. The BJP claim that Karnataka will go the Gujarat way after the recent election results just because they have won in Gujarat. Karnataka will go the Himachal Pradesh way where Congress defeated the BJP.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am