ಬ್ರೇಕಿಂಗ್ ನ್ಯೂಸ್
11-12-22 02:13 pm Mangalore Correspondent ಕರಾವಳಿ
ಮಂಗಳೂರು, ಡಿ.11 : ನಗರದ ಕಂಕನಾಡಿಯ ಸುಲ್ತಾನ್ ಗೋಲ್ಡ್ ಜುವೆಲ್ಲರಿಗೆ ನುಗ್ಗಿ ಯುವ ಜೋಡಿಗೆ ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣದಲ್ಲಿ ನಾಲ್ವರು ಬಜರಂಗದಳ ಕಾರ್ಯಕರ್ತರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಚೇತನ್, ಪ್ರಕಾಶ್, ಗಣೇಶ್ ಮತ್ತು ಸಿಬಿಲ್ ಎಂಬವರು ಬಂಧಿತರು. ವಾರದ ಹಿಂದೆ ಕಂಕನಾಡಿಯ ಸುಲ್ತಾನ್ ಗೋಲ್ಡ್ ಜುವೆಲ್ಲರಿಗೆ ದಾಳಿ ನಡೆಸಿದ್ದ ಬಜರಂಗದಳ ಕಾರ್ಯಕರ್ತರು ಅಲ್ಲಿದ್ದ ಯುವ ಜೋಡಿಗೆ ಹಲ್ಲೆ ನಡೆಸಿದ್ದರು. ಅಲ್ಲಿ ಕೆಲಸಕ್ಕಿದ್ದ ಹಿಂದು ಯುವತಿ, ಅದೇ ಜುವೆಲ್ಲರಿಯಲ್ಲಿ ಸೇಲ್ಸ್ ಮನ್ ಆಗಿರುವ ಮುಸ್ಲಿಂ ಯುವಕನೊಂದಿಗೆ ತಿರುಗಾಡುತ್ತಿದ್ದಳು. ಈ ಬಗ್ಗೆ ಬಜರಂಗದಳ ಈ ಹಿಂದೆಯೂ ಎಚ್ಚರಿಕೆ ನೀಡಿತ್ತು ಎನ್ನಲಾಗಿದೆ. ಆದರೆ ಕಾರ್ಯಕರ್ತರ ಎಚ್ಚರಿಕೆ ಲೆಕ್ಕಿಸದೆ ಆಕೆ ತಿರುಗಾಟ ಮುಂದುವರಿಸಿದ್ದಳು.
ಯುವತಿ ತೀರ್ಥಹಳ್ಳಿ ಮೂಲದ ನಿವಾಸಿಯಾಗಿದ್ದು ಈ ಹಿಂದೆ ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕಿದ್ದಳು. ಆನಂತರ ಜುವೆಲ್ಲರಿಗೆ ಕೆಲಸ ಬದಲಾಯಿಸಿದ್ದಳು. ಈ ವೇಳೆ, ಅಲ್ಲಿದ್ದ ಯುವಕನ ಪರಿಚಯವಾಗಿ ತಿರುಗಾಟ ಆರಂಭಿಸಿದ್ದಳು. ಈ ಬಗ್ಗೆ ಬಜರಂಗದಳ ಕಾರ್ಯಕರ್ತರು ಯುವತಿಯ ಹೆತ್ತವರಿಗೂ ಮಾಹಿತಿ ನೀಡಿದ್ದರು.
ಮೊನ್ನೆ ಹೆತ್ತವರನ್ನು ಜುವೆಲ್ಲರಿಗೆ ಕರೆಸಿ, ಅವರಿಂದಲೇ ಯುವತಿಗೆ ಎರಡೇಟು ಬಿಗಿಯುವಂತೆ ಮಾಡಿದ್ದಾರೆ. ಅಲ್ಲದೆ, ಮುಸ್ಲಿಂ ಯುವಕನಿಗೂ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಘಟನೆ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರತ್ಯೇಕ ಮೂರು ದೂರು ದಾಖಲಾಗಿ ಎಫ್ಐಆರ್ ಆಗಿತ್ತು. ಹಲ್ಲೆಗೊಳಗಾದ ಯುವಕ ಹಲ್ಲೆ ಕೃತ್ಯದ ಬಗ್ಗೆ, ಸುಲ್ತಾನ್ ಗೋಲ್ಡ್ ಜುವೆಲ್ಲರಿಯವರು ಮಳಿಗೆ ಒಳಗೆ ಅಕ್ರಮವಾಗಿ ಪ್ರವೇಶಿಸಿ ದಾಂಧಲೆ ನಡೆಸಿರುವ ಬಗ್ಗೆ ದೂರು ನೀಡಿದ್ದರು. ಇದಲ್ಲದೆ, ಯುವತಿಯ ತಾಯಿಯೂ ದೂರು ನೀಡಿದ್ದರು. ಇದರಂತೆ, ಪ್ರತ್ಯೇಕ ಕೇಸು ದಾಖಲಾಗಿದ್ದು ತನಿಖೆ ಕೈಗೊಂಡಿದ್ದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
sulthan gold jewelry Moral police case four arrested bajrangdal activist in Mangalore.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm