ಬ್ರೇಕಿಂಗ್ ನ್ಯೂಸ್
11-12-22 04:49 pm Mangalore Correspondent ಕರಾವಳಿ
ಉಳ್ಳಾಲ, ಡಿ.11 : ಸೂಪರ್ ಹಿಟ್ ಕಾಂತಾರ ಚಿತ್ರದ ಗುರುವ ಪಾತ್ರಧಾರಿ ಖ್ಯಾತಿಯ ಸ್ವರಾಜ್ ಶೆಟ್ಟಿ ಚಿತ್ರಕಥೆ, ನಿರ್ದೇಶನದೊಂದಿಗೆ ಮ್ಯಾಕ್ಸ್ ಕ್ರಿಯೇಷನ್ ಲಾಂಛನದಲ್ಲಿ ನಿರ್ಮಾಣಗೊಳ್ಳುತ್ತಿರುವ ಹೊಸ ಕನ್ನಡ ಚಿತ್ರಕ್ಕೆ ಹರೇಕಳ ಸಂಪಿಗೆದಡಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಭಾನುವಾರ ಮುಹೂರ್ತ ಸಮಾರಂಭ ನೆರವೇರಿತು.
ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಹೊಸ ಚಿತ್ರಕ್ಕೆ ಕ್ಲಾಪ್ ಮಾಡಿದರು. ತುಳು ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಕ್ಯಾಮರಾ ಚಾಲನೆ ಮಾಡಿದರು. ಚಿತ್ರ ನಿರ್ದೇಶಕ, ನಾಯಕ ನಟ ಸ್ವರಾಜ್ ಶೆಟ್ಟಿ ಮಾತನಾಡಿ ಚಿತ್ರಕ್ಕೆ ಇನ್ನಷ್ಟೇ ಹೆಸರಿಡಬೇಕಿದೆ. ಕಾಂತಾರ ಚಿತ್ರದ ಗುರುವ ಪಾತ್ರದ ಮೂಲಕ ಕನ್ನಡಿಗರು ನನ್ನನ್ನು ಗುರುತಿಸಿದ್ದಾರೆ. ಹೊಸ ಚಿತ್ರ ಕಂಪ್ಲೀಟ್ ಫ್ಯಾಮಿಲಿ ಎಂಟರ್ ಟೈನರ್ ಆಗಿದ್ದು ಪತಿ-ಪತ್ನಿ ನಡುವಿನ ನವಿರಾದ ಪ್ರೇಮಕಥೆಯನ್ನು ಒಳಗೊಂಡಿದೆ. ಚಿತ್ರಕಥೆ, ಸಂಭಾಷಣೆಯ ಜೊತೆಗೆ ನಿರ್ದೇಶನದ ಜವಾಬ್ದಾರಿಯೂ ನನ್ನ ಮೇಲಿದೆ. ಮಂಗಳೂರು ಸುತ್ತಮುತ್ತಲಲ್ಲೇ 20-25 ದಿನಗಳ ಕಾಲ ಚಿತ್ರೀಕರಣ ನಡೆಯಲಿದ್ದು, ಚಿತ್ರದಲ್ಲಿ "ಕಾಂತಾರ" ಚಿತ್ರದ ಬಹುತೇಕ ಕಲಾವಿದರು ಬಣ್ಣ ಹಚ್ಚಲಿದ್ದಾರೆ ಎಂದರು.
ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ ಸ್ವರಾಜ್ ಶೆಟ್ಟಿ ಉತ್ತಮ ಕಲಾವಿದ. ಮೊದಲ ಬಾರಿ ಚಿತ್ರಕಥೆ ನಿರ್ದೇಶನದ ಜವಾಬ್ದಾರಿಯ ಜೊತೆಗೆ ಪೂರ್ಣ ಪ್ರಮಾಣದಲ್ಲಿ ನಾಯಕ ನಟರಾಗಿ ಅಭಿನಯಿಸುತ್ತಿದ್ದಾರೆ. ಅವರಿಗೆ ನಮ್ಮ ನಿಮ್ಮೆಲ್ಲರ ಶುಭ ಹಾರೈಕೆ ಇರಲಿ ಎಂದರು.
ಸ್ವರಾಜ್ ಶೆಟ್ಟಿಗೆ ನಾಯಕಿಯಾಗಿ ಶಿವಾನಿ ರೈ ಅಭಿನಯಿಸುತ್ತಿದ್ದಾರೆ. ಶಿವಾನಿ ಅವರ ಮೊದಲ ಕನ್ನಡ ಚಿತ್ರ "ಅಭಿರಾಮ ಚಂದ್ರ" ಇನ್ನಷ್ಟೇ ಬಿಡುಗಡೆಯಾಗಲಿದೆ. ಚಿತ್ರದ ನಿರ್ಮಾಪಕರಾದ ಭಾಗ್ಯರಾಜ್ ಶೆಟ್ಟಿ, ಪ್ರವೀಣ್ ಶೆಟ್ಟಿ, ಸಂಕಲನಕಾರ ಗಣೇಶ್ ನೀರ್ಚಾಲ್, ಕೆಮರಾ ಮ್ಯಾನ್ ರೂಪೇಶ್ ಷಾಜಿ, ಸಂಗೀತ ನಿರ್ದೇಶಕ ವಿನೋದ್ ರಾಜ್ ಕೋಕಿಲ, ಕಲಾ ನಿರ್ದೇಶಕ ರಾಜೇಶ್, ಸಹನಿರ್ದೇಶಕ ಮಹಾನ್ ಶೆಟ್ಟಿ, ಕಾರ್ಯಕಾರಿ ನಿರ್ಮಾಪಕ ರಾಜೇಶ್ ಕುಡ್ಲ, ರಕ್ಷಾ ರಾಜ್ ಶೆಟ್ಟಿ, ರಾಧಾಕೃಷ್ಣ, ಪ್ರತಿಮಾ ರೈ ಮೊದಲಾದವರು ಉಪಸ್ಥಿತರಿದ್ದರು.
Mangalore Muhurtam held at temple for upcoming kannada movie of Max creation.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm