ಬ್ರೇಕಿಂಗ್ ನ್ಯೂಸ್
12-12-22 06:28 pm Mangalore Correspondent ಕರಾವಳಿ
ಮಂಗಳೂರು, ಡಿ.12 : ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜೇಂದ್ರ ಪ್ರಸಾದ್ (39) ಹಠಾತ್ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.
ಮೂಲತಃ ಸುಳ್ಯಪದವು ನಿವಾಸಿಯಾಗಿರುವ ರಾಜೇಂದ್ರ ಪ್ರಸಾದ್, ಕುಟುಂಬ ಸಹಿತ ಮಂಗಳೂರಿನ ಪಡೀಲಿನಲ್ಲಿ ವಾಸವಿದ್ದರು. ಸೋಮವಾರ ಬೆಳಗ್ಗೆ ರಾಜೇಂದ್ರ ಪ್ರಸಾದ್ ಅವರಿಗೆ ಮನೆಯಲ್ಲಿದ್ದಾಗಲೇ ಎದೆ ನೋವು ಕಾಣಿಸಿಕೊಂಡಿತ್ತು. ಈ ವೇಳೆ ತಮ್ಮ ಕಾರಿನಲ್ಲಿ ಡ್ರೈವ್ ಮಾಡಿಕೊಂಡು ಮಗಳನ್ನು ಶಾಲೆಗೆ ಬಿಟ್ಟು ಬಳಿಕ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಆದರೆ ಆಸ್ಪತ್ರೆಯಲ್ಲಿ ಇಸಿಜಿ ಟೆಸ್ಟ್ ನಡೆಸುತ್ತಿದ್ದಾಗಲೇ ಮತ್ತೆ ಆಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.
ರಾಜೇಂದ್ರ ಪ್ರಸಾದ್ ಮೂಡುಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮುಖ್ಯ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾಜೇಂದ್ರ ಪ್ರಸಾದ್ ಅವರ ಗರಡಿಯಲ್ಲಿ ನಾಲ್ಕು ಮಂದಿ ಅಂತರ್ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ಏಕಲವ್ಯ ಪ್ರಶಸ್ತಿ ಪುರಸ್ಕೃತ, ಇಂಗ್ಲೆಂಡಿನ ಬರ್ಮಿಂಗ್ ಹ್ಯಾಂನಲ್ಲಿ ನಡೆದಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ (2018ರಲ್ಲಿ ಬೆಳ್ಳಿ ಪದಕ) ಪಡೆದಿರುವ ಗುರುರಾಜ್ ಪೂಜಾರಿಯವರು ರಾಜೇಂದ್ರ ಪ್ರಸಾದ್ ಅವರ ಶಿಷ್ಯರಾಗಿದ್ದರು.
Mangalore Alvas college weight lifting coach Rajendra Prasad dies of heart attack.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm