ಬ್ರೇಕಿಂಗ್ ನ್ಯೂಸ್
20-12-22 12:36 pm Mangalore Correspondent ಕರಾವಳಿ
ಉಳ್ಳಾಲ, ಡಿ.20: ಮಂಗಳೂರು ವಿವಿಯ ಆಡಳಿತ ಪದವಿ ಫಲಿತಾಂಶಕ್ಕೆ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಪ್ರಶ್ನಿಸಿ ಎಬಿವಿಪಿ ಕಾರ್ಯಕರ್ತರು ಕೊಣಾಜೆಯ ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿದ್ದಲ್ಲದೆ ವಿವಿ ಸಿಂಡಿಕೇಟ್ ಸಭೆಗೆ ಏಕಾಏಕಿ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. ಈ ವೇಳೆ, ಪೊಲೀಸರು ಮತ್ತು ಎಬಿವಿಪಿ ಕಾರ್ಯಕರ್ತರ ನಡುವೆ ತಳ್ಳಾಟ ನಡೆದಿದೆ.
ಮಂಗಳೂರು ವಿವಿಯ ಪರೀಕ್ಷಾ ಫಲಿತಾಂಶ ವಿಳಂಬದ ವಿರುದ್ಧ ಎಬಿವಿಪಿ ನೇತೃತ್ವದಲ್ಲಿ ಇಂದು ನಡೆದ ಪ್ರತಿಭಟನೆ ತಾರಕಕ್ಕೇರಿದ್ದು ಪೊಲೀಸರು, ಎಬಿವಿಪಿ ಕಾರ್ಯಕರ್ತರ ನಡುವೆ ನೂಕಾಟ, ತಳ್ಳಾಟ ನಡೆದಿದೆ. ಸುಮಾರು 500 ರಷ್ಟಿದ್ದ ಎಬಿವಿಪಿ ವಿದ್ಯಾರ್ಥಿಗಳು ಮಂಗಳೂರು ವಿ.ವಿ ಆಡಳಿತ ಸೌಧದ ಆವರಣಕ್ಕೆ ಬಂದಾಗ ಪೊಲೀಸರು ಅವರನ್ನ ತಡೆದಿದ್ದಾರೆ. ಈ ವೇಳೆ ಎಬಿವಿಪಿ ಕಾರ್ಯಕರ್ತರು ಬ್ಯಾರಿಕೇಡ್ಗಳನ್ನು ತಳ್ಳಿ ಆಡಳಿತ ಸೌಧದೊಳಗೆ ನುಗ್ಗಿದ್ದು ಪೊಲೀಸರು ಅವರನ್ನ ತಡೆಯಲು ಯತ್ನಿಸಿದ್ದು ಈ ವೇಳೆ ತಳ್ಳಾಟ ಉಂಟಾಗಿದೆ.



ಮಂಗಳೂರು ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್ ಧರ್ಮ ಮತ್ತು ಕುಲಪತಿ ಪಿ.ಎಸ್ ಯಡಪಡಿತ್ತಾಯ ಅವರು ಪ್ರತಿಭಟನಾ ಸ್ಥಳಕ್ಕಾಗಮಿಸಿದಾಗ ಆಕ್ರೋಶ, ತಳ್ಳಾಟ ಹೆಚ್ಚಾಗಿದೆ. ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ ಹರ್ಷಿತ್ ಕೊಯ್ಲ ಮಾತನಾಡಿ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವುದು, ಅಂಕಪಟ್ಟಿ ಬಾರದೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಅವಕಾಶ ಸಿಗದಿರುವುದು, ಮೌಲ್ಯಮಾಪನವನ್ನು ಸೂಕ್ತ ಸಮಯದಲ್ಲಿ ನಡೆಸದಿರುವುದು, ಎಲ್ಲ ಸಮಸ್ಯೆಗಳು ಒಂದು ಕಡೆಯಾದರೆ ಎನ್ಇಪಿ ಜಾರಿಯಾದ ನಂತರ ಮೊದಲನೇ ವರ್ಷಕ್ಕೆ ಸೇರ್ಪಡೆಯಾದ ವಿದ್ಯಾರ್ಥಿಗಳು ಪ್ರಸ್ತುತ ದ್ವಿತೀಯ ವರ್ಷದಲ್ಲಿ ಇದ್ದರೂ ಸಹ ಪ್ರಥಮ ಹಾಗೂ ದ್ವಿತೀಯ ಸೆಮಿಸ್ಟರ್ ನ ಮೌಲ್ಯಮಾಪನವನ್ನು ನಡೆಸಿ ಫಲಿತಾಂಶವನ್ನು ಈವರೆಗೂ ನೀಡದೆ ಚೆಲ್ಲಾಟವಾಡುತ್ತಿದೆ. ಎಲ್ಲ ಸಮಸ್ಯೆಗಳಿಗೆ ಮಂಗಳೂರು ವಿವಿಯ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರು ಕಾರಣ ಎಂದು ದೂರಿದರು.




ಎಲ್ಲ ಸಮಸ್ಯೆಗಳಿಗೆ ಕುಲಸಚಿವರೇ ಕಾರಣ ಎಂಬ ಆರೋಪಕ್ಕೆ ಭಾವುಕರಾದ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್. ಧರ್ಮ ಮಾತನಾಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಾ ಫಲಿತಾಂಶ ವಿಳಂಬಕ್ಕೆ ಪರೀಕ್ಷಾಂಗ ಕುಲಸಚಿವರ ರಾಜೀನಾಮೆ ಆಗ್ರಹಿಸುತ್ತಿದ್ದಾರೆ. ನನ್ನಿಂದ ಸಮಸ್ಯೆ ಆಗಿದ್ದು ಪರಿಹಾರ ದೊರಕೋದಾದ್ರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲು ಸಿದ್ಧನಿದ್ದೇನೆ. ಅದಕ್ಕಾಗಿ ರಾಜಿನಾಮೆ ಪತ್ರವನ್ನು ರೆಡಿ ಮಾಡಿಕೊಂಡು ಬಂದಿದ್ದೇನೆ ಎಂದರು. ವಿದ್ಯಾರ್ಥಿಗಳು ವಾಸ್ತವ ಅರ್ಥ ಮಾಡಿಕೊಂಡಿಲ್ಲ. ಒಂದು ದಿವಸ ಸಿಎಲ್ ಹಾಕದೆ ನನ್ನ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಯುಸಿಎಂಎಸ್ ನದ್ದೇ ನಮಗೆ ಸಮಸ್ಯೆ ಆಗಿರೋದು. ಸರ್ವರ್ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸರಕಾರದ ವಿರುದ್ಧ ನಾನು ಮಾತನಾಡುತ್ತಿಲ್ಲ. ವ್ಯವಸ್ಥೆ ವಿರುದ್ಧ ಮಾತನಾಡುತ್ತಿದ್ದೇನೆ. ವಿವಿ ವಿದ್ಯಾರ್ಥಿಗಳಿಗೆ ಸಹಾಯವೇ ಮಾಡಿದೆ. ಜನವರಿ 25ರ ಒಳಗಡೆ ಫಲಿತಾಂಶ ಪ್ರಕಟಣೆಗೆ ಎಲ್ಲ ವ್ಯವಸ್ಥೆ ಮಾಡುತ್ತೇವೆ ಎಂಬ ಭರವಸೆ ನೀಡಬಲ್ಲೆ ಎಂದರು.



ಪರೀಕ್ಷಾಂಗ ಕುಲಸಚಿವರ ಭರವಸೆ ಮೇರೆಗೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆಯಿಂದ ಹಿಂಸರಿದರು. ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಚಿನ್ ಕುಲಗೇರಿ, ತಾಲೂಕು ಸಂಚಾಲಕ ಆದರ್ಶ್ ಉಪ್ಪಾರ, ಜಿಲ್ಲಾ ಸಂಚಾಲಕ ಶ್ರೇಯಸ್ ಶೆಟ್ಟಿ ಮೊದಲಾದವರು ಪ್ರತಿಭಟನೆಯಲ್ಲಿದ್ದರು.
Delayed results, ABVP Students gherao Mangalore University, chancellor arrives at spot.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm