ಬ್ರೇಕಿಂಗ್ ನ್ಯೂಸ್
07-01-23 10:33 pm Mangalore Correspondent ಕರಾವಳಿ
ಮಂಗಳೂರು, ಜ.7: ಕರಾವಳಿಯಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ರಿಂಗ್ ಆಗುತ್ತಿರುವುದು ಮೊದಲೇನಲ್ಲ. ಆದರೆ ಈ ಬಾರಿ ಶಿವಮೊಗ್ಗ ಬಾಂಬ್ ಟ್ರಯಲ್ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಎರಡು ದಿನಗಳ ಹಿಂದೆ ಮಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿದ ಸಂದರ್ಭದಲ್ಲಿಯೇ ಸ್ಯಾಟಲೈಟ್ ಫೋನ್ ರಿಂಗ್ ಆಗಿದೆ. ಹೀಗಾಗಿ ಇದೊಂದು ಉಗ್ರರ ಜಾಡಿನ ಹೆಜ್ಜೆಯೇ ಎನ್ನುವ ಅನುಮಾನ ವ್ಯಕ್ತವಾಗಿದ್ದು, ಈ ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕೇರಳ- ಕರ್ನಾಟಕದ ಗಡಿಭಾಗದ ನಿರ್ಜನ ಕಾಡು ಪ್ರದೇಶದಲ್ಲಿ ಈ ಬಾರಿ ಸ್ಯಾಟಲೈಟ್ ಫೋನ್ ಸಕ್ರಿಯವಾಗಿರುವ ಬಗ್ಗೆ ಕೇಂದ್ರೀಯ ತನಿಖಾ ಏಜನ್ಸಿಗಳು ಪತ್ತೆ ಮಾಡಿವೆ. ಪುತ್ತೂರಿನ ಗಡಿಭಾಗ ಪಾಣಾಜೆ ಎಂಬಲ್ಲಿನ ಕಾಡು ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸಕ್ರಿಯವಾಗಿದ್ದು, ಯಾರೋ ವಿದೇಶಗಳ ಜೊತೆಗೆ ಸಂಪರ್ಕ ಸಾಧಿಸಿರುವ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಕೇರಳ ಸ್ಪೆಷಲ್ ಬ್ರಾಂಚ್ ಪೊಲೀಸರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆಂತರಿಕ ಭದ್ರತಾ ವಿಭಾಗದ ಸಿಬಂದಿ ತನಿಖೆ ಆರಂಭಿಸಿದ್ದಾರೆ.
ವಿಶೇಷ ಅಂದ್ರೆ, ಈ ಹಿಂದೆ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆದಿರುವುದಕ್ಕೂ ಹಿಂದಿನ ದಿನ ಸ್ಯಾಟಲೈಟ್ ಫೋನ್ ವರ್ಕ್ ಆಗಿತ್ತು. ನ.18ರಂದು ಸ್ಯಾಟಲೈಟ್ ಫೋನ್ ಬಳಕೆಯಾಗಿರುವುದನ್ನು ಕೇಂದ್ರ ಗುಪ್ತಚರ ತಂಡಗಳು ಪತ್ತೆ ಮಾಡಿವೆ. ಆ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನ ಕಾಕುಂಜೆ ಎನ್ನುವ ಕಾಡು ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ವರ್ಕ್ ಆಗಿತ್ತು. ಕಳೆದ ಜೂನ್ ತಿಂಗಳಲ್ಲಿ ಕರಾವಳಿ ಮತ್ತು ಮಲೆನಾಡಿನ ನಾಲ್ಕೈದು ಕಡೆಗಳಲ್ಲಿ ಸ್ಯಾಟಲೈಟ್ ಫೋನ್ ವರ್ಕ್ ಆಗಿರುವುದು ಪತ್ತೆಯಾಗಿತ್ತು. ಮಂಗಳೂರಿನ ಹೊರವಲಯ ಕುಳಾಯಿ, ಕೋಣಾಜೆ ಬಳಿಯ ನಾಟೆಕಲ್, ಶಿರಸಿ ಬಳಿಯ ಯಲ್ಲಾಪುರದಲ್ಲಿ ನಿಷೇಧಿತ ಫೋನ್ ಸಂಪರ್ಕ ಆಗಿದ್ದನ್ನು ಪತ್ತೆ ಮಾಡಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ತನಿಖಾ ಏಜನ್ಸಿಗಳು ಯಾವುದೇ ಖಚಿತ ಮಾಹಿತಿಯನ್ನು ಪತ್ತೆ ಮಾಡಲು ಸಾಧ್ಯವಾಗಿರಲಿಲ್ಲ.
Satellite phone signals were detected in the border areas of Karnataka and Kerala on Thursday. This has caused concern as NIA arrested two students in connection with the cooker bomb blast on the same day itself.Satellite phones were found to be active in border areas of Kasaragod and Panaje. The Central Intelligence department has detected the signals. Kerala special branch police and cops of the Dakshina Kannada district are investigating further.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm