ಬ್ರೇಕಿಂಗ್ ನ್ಯೂಸ್
08-01-23 09:36 pm Mangalore Correspondent ಕರಾವಳಿ
ಮಂಗಳೂರು, ಜ.8 : ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಬಹುನಿರೀಕ್ಷಿತ ಜಿಪಿಎಲ್ ಉತ್ಸವ - 2023 ಇದರ ಆಮಂತ್ರಣ ಪತ್ರಿಕೆಯನ್ನು ಭಾರತೀಯ ಕ್ರಿಕೆಟ್ ತಂಡದ ಯಶಸ್ವಿ ನಾಯಕ ಎಂದೇ ಕರೆಸಿಕೊಂಡಿರುವ ಮಹೇಂದ್ರ ಸಿಂಗ್ ಧೋನಿ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದರು.
ಇದೇ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕರೂ, ಜಿಪಿಎಲ್ ಉತ್ಸವದ ಪ್ರಮುಖರೂ ಆದ ವೇದವ್ಯಾಸ ಕಾಮತ್ ಫೆಬ್ರವರಿ 10, 11, 12 ರಂದು ಅಡ್ಯಾರ್ ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಹಚ್ಚಹಸುರಿನ ಸುಂದರ ಕ್ರೀಡಾಂಗಣದಲ್ಲಿ ನಡೆಯುವ ಜಿಪಿಎಲ್ ಉತ್ಸವಕ್ಕೆ ಧೋನಿಯವರನ್ನು ಆಮಂತ್ರಿಸಿದರು. ಜಿಪಿಎಲ್ ಟ್ರೋಫಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಧೋನಿಯವರು ಭಾಗವಹಿಸುವ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ವೇದವ್ಯಾಸ ಕಾಮತ್ ಅವರೊಂದಿಗೆ ಜಿಪಿಎಲ್ ಉತ್ಸವದ ಆಯೋಜಕರಾದ ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್, ಕೊಂಚಾಡಿ ಗುರುಪ್ರಸಾದ್ ಕಾಮತ್, ಕಾನೆಂಗಾಡ್ ಗುರುಪ್ರಸಾದ್ ಕಾಮತ್ ಉಪಸ್ಥಿತರಿದ್ದರು.



7ನೇ ವರ್ಷದ ಜಿಪಿಎಲ್ ಉತ್ಸವ- 2023 ಈ ಬಾರಿಯೂ ವಿಶೇಷ ಹಬ್ಬದಂತೆ ಆಯೋಜಿಸುತ್ತಿದ್ದು, ಕ್ರಿಕೆಟ್ ಪಂದ್ಯಾಟಗಳೊಂದಿಗೆ ಹೆಲಿಕಾಪ್ಟರ್ ರೌಂಡ್, ಬೋಟಿಂಗ್, ಕಿಡ್ಸ್ ಝೋನ್, ಮೂರು ಮುತ್ತು ತಂಡದಿಂದ ನಾಟಕ ಪ್ರದರ್ಶನ, ಬೊಂಬೆಯಾಟ, ವಾಯ್ಸ್ ಆಫ್ ಜಿಎಸ್ ಬಿ ಅಡಿಶನ್, ವೆರೈಟಿ ಎಂಟರ್ಟೇನ್ಮೆಂಟ್, ಫುಡ್ ಕೋರ್ಟ್ ಸಹಿತ ಹಲವಾರು ಆಕರ್ಷಣೆಗಳನ್ನು ಒಳಗೊಂಡಿದೆ ಎಂದು ಉತ್ಸವದ ಪ್ರಾಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
JPL Utsav 2023, Cricket player Dhoni along with MLA Vedavyas Kamat releases Invitation poster in Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 04:40 pm
Mangalore Correspondent
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm