ಬ್ರೇಕಿಂಗ್ ನ್ಯೂಸ್
19-10-20 05:58 pm Mangalore Reporter ಕರಾವಳಿ
ಸುಳ್ಯ, ಅಕ್ಟೋಬರ್ 19: ಸುಳ್ಯ ನಗರದ ಲಾಡ್ಜ್ ನಲ್ಲಿ ಯುವಕ ಮತ್ತು ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅತ್ಮಹತ್ಯೆ ಮಾಡಿಕೊಂಡ ಯುವಕ ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್(19) ಮತ್ತು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿಯ ನಾರ್ಯ ಕಲ್ಕಜೆಯ ಶೇಷಪ್ಪ ಎಂಬವರ ಪುತ್ರಿ ಇಂದಿರಾ(19) ಎಂದು ಗುರುತಿಸಲಾಗಿದೆ.
ಅ. 18 ರಂದು ರಾತ್ರಿ ಸುಳ್ಯದ ಲಾಡ್ಜ್ ನಲ್ಲಿ ಬಂದು ಸಂಬಂಧಿಕರು ಎಂದು ಹೇಳಿ ಊರಿಗೆ ಹೋಗಲು ಬಸ್ಸು ಇಲ್ಲ ಎಂದು ಹೇಳಿ ಯುವತಿಯ ದಾಖಲೆ ನೀಡಿ ರೂಮ್ ಬುಕ್ ಮಾಡಿಕೊಂಡಿದ್ದ. ಅ. 19 ರಂದು ಮಧ್ಯಾಹ್ನ ವೇಳೆಗೆ ಲಾಡ್ಜ್ ನ ಮ್ಯಾನೆಜರ್ ರೂಮ್ ಬಳಿ ಹೋಗಿ ಕಿಟಕಿ ಬಳಿ ಬಂದು ಇಣುಕಿ ನೋಡಿದಾಗ ಆತ್ಮಹತ್ಯೆ ಪ್ರಕರಣ ಬಯಲಾಗಿದ್ದು ಒಂದೇ ನೇಣಿಗೆ ಇಬ್ಬರು ಕೊರಳೊಡ್ಡಿದ್ದಾರೆ ಎನ್ನಲಾಗಿದೆ.
ಯುವಕ ದರ್ಶನ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದು, ಕೋರೋನ ಬರುವ ಮೊದಲು ಇದೇ ವಸತಿಗೃಹದಲ್ಲಿರುವ ಹೋಟೆಲ್ನಲ್ಲಿ ಸ್ವಲ್ಪ ಸಮಯ ಕೆಲಸ ಮಾಡಿಕೊಂಡಿದ್ದ. ಕಳೆದ 4 ದಿನದ ಹಿಂದೆ ಮನೆಯಿಂದ ಸ್ನೇಹಿತರ ಜೊತೆಗೆ ಪ್ರವಾಸ ಹೋಗುತ್ತೇನೆ ಎಂದು ಹೊರಟು ಬಂದಿದ್ದನು. ನಿನ್ನೆಯ ದಿನ ತಾಯಿ ಇಂದುಮತಿಯವರು ದರ್ಶನ್ಗೆ ಕರೆ ಮಾಡಿ ಮಾತನಾಡಿದ್ದರು. ಅಲ್ಲದೇ ಯುವಕನ ತಾಯಿ ಯುವತಿಗೆ ಕರೆ ಮಾಡಿ ಮಗನ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಯುವತಿ ಸ್ನೇಹಿತರ ಜೊತೆಗೆ ಹೋಗಿದ್ದಾನೆ ಎಂದು ತಿಳಿಸಿದ್ದಾಳೆ ಎಂದು ತಿಳಿದುಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
A couple have been found dead inside a lodge in Sullia. Love issue has made them to take this harsh step it is said. The Sullia police are investigating the case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am