ಬ್ರೇಕಿಂಗ್ ನ್ಯೂಸ್
04-02-23 05:35 pm Mangalore Correspondent ಕರಾವಳಿ
ಮಂಗಳೂರು, ಫೆ.4 : ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು ಮಂಗಳೂರಿನ ಮೂವರು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ.
ಮೃತರನ್ನು ಮಂಗಳೂರಿನ ಹಳೆಯಂಗಡಿ ಬಳಿಯ ಕದಿಕೆ ನಿವಾಸಿ ರಿಜ್ವಾನ್ (23), ಸುರತ್ಕಲ್ ಕೃಷ್ಣಾಪುರದ ಶಿಹಾಬ್, ಮಂಗಳೂರು ಬೆಂಗರೆ ನಿವಾಸಿ ಅಕೀಲ್ ಹಾಗು ಬಾಂಗ್ಲಾದೇಶದ ಪ್ರಜೆ ನಾಸೀರ್ ಎಂದು ಗುರುತಿಸಲಾಗಿದೆ ಎಂದು ಮೃತರ ಸಂಬಂಧಿಕರು ಮಾಹಿತಿ ನೀಡಿದ್ದಾರೆ.

ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಅಲ್-ಹಸಾ ಎಂಬ ಪ್ರದೇಶದ ಖುರೈಸ್ ಹೆದ್ದಾರಿಯಲ್ಲಿ ಕಾರಿನಲ್ಲಿ ತೆರಳುತ್ತಿದ್ದಾಗ ಹೆದ್ದಾರಿಗೆ ಒಂಟೆ ಅಡ್ಡಬಂದಿದ್ದು ನಿಯಂತ್ರಣ ತಪ್ಪಿದ ವಾಹನ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಹಳೆಯಂಗಡಿ ಕದಿಕೆ ಕೇಂದ್ರ ಜುಮಾ ಮಸೀದಿ ಬಳಿಯ ನಿವಾಸಿ ರಿಜ್ವಾನ್ 4 ತಿಂಗಳ ಹಿಂದಷ್ಟೇ ಉದ್ಯೋಗ ನಿಮಿತ್ತ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಇವರು ಬದ್ರುದ್ದೀನ್ ಮತ್ತು ಅಲೀಮಾ ದಂಪತಿಯ ಒಬ್ಬನೇ ಮಗ. ಈ ದಂಪತಿಗೆ ಇನ್ನು ಮೂವರು ಪುತ್ರಿಯರು ಇದ್ದಾರೆ. ಮೃತ ಯುವಕರು ಅಲ್ಲಿನ 'ಅಲ್ ಸ್ಯಾಕೊ' ಕಂಪನಿಯಲ್ಲಿ ಉದ್ಯೋಗಿಗಳಾಗಿದ್ದರು. ರಾತ್ರಿ ವೇಳೆ ಕೆಲಸಕ್ಕೆ ತೆರಳುತ್ತಿರುವಾಗ ಹಠಾತ್ತನೆ ಒಂಟೆ ರಸ್ತೆಗೆ ಅಡ್ಡ ಬಂದ ಪರಿಣಾಮ ವಾಹನ ನಿಯಂತ್ರಿಸಲಾಗದೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪಾರ್ಥೀವ ಶರೀರಗಳನ್ನು ಊರಿಗೆ ತರಿಸುವ ಬಗ್ಗೆ ಮಂಗಳೂರಿನ ಸಂಘಟನೆಗಳ ಪ್ರಮುಖರು ಪ್ರಯತ್ನ ನಡೆಸುತ್ತಿದ್ದಾರೆ.
In a ghastly road accident that occurred at Al Hassa of Saudi Arabia, three natives of Dakshina Kannada (DK) died on the night of Friday February 3 night. In total, four non-resident employees lost their lives in the accident. One is a Bangladesh national. It is said that the accident occurred as a camel ran across the car. The deceased are identified as Rizwan from Kadike near Haleangadi, Shihab from Krishnapura Surathkal, Akil, a resident of Bengare in Mangaluru and Nasir from Bangladesh.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 04:40 pm
Mangalore Correspondent
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm