ಬ್ರೇಕಿಂಗ್ ನ್ಯೂಸ್
13-02-23 08:15 pm Mangalore Correspondent ಕರಾವಳಿ
ಮಂಗಳೂರು, ಫೆ.13: ಅಭಿಮಾನಿಗಳ ತಲೈವಾ, ಸೂಪರ್ ಸ್ಟಾರ್ ರಜನಿಕಾಂತ್ ಅವರು ಮಂಗಳೂರಿನಲ್ಲಿದ್ದಾರೆ. ನಿನ್ನೆ ರಾತ್ರಿ ವಿಶೇಷ ವಿಮಾನದಲ್ಲಿ ರಜನಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಜೈಲರ್ ಸಿನಿಮಾದ ಶೂಟಿಂಗ್ ಹಿನ್ನೆಲೆಯಲ್ಲಿ ರಜನಿಕಾಂತ್ ಮಂಗಳೂರಿಗೆ ಬಂದಿದ್ದಾರೆ.
ಮಂಗಳೂರಿನ ಕೆಲ ಪ್ರದೇಶಗಳಲ್ಲಿ 2 ದಿನ ಜೈಲರ್ ಸಿನಿಮಾದ ಶೂಟಿಂಗ್ ಇದೆ. ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಸ್ಕ್ರೀನ್ ಹಂಚಿಕೊಳ್ಳಲಿದ್ದಾರೆ. ಜೈಲರ್ ಸಿನಿಮಾದಲ್ಲಿ ಇಬ್ಬರು ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದು ಮಂಗಳೂರಿನಲ್ಲಿ ಈ ನಟರು ಒಟ್ಟಿಗೆ ಶೂಟಿಂಗ್ನಲ್ಲಿ ಭಾಗವಹಿಸಲಿದ್ದಾರೆ. ಶೂಟಿಂಗ್ನ ಬಿಡುವಿನ ಸಮಯದಲ್ಲಿ ರಜನಿ ಹಾಗೂ ಶಿವಣ್ಣ ಕೆಲ ದೇವಾಲಯಗಳಿಗೆ ತೆರಳಿ ದೇವರ ಆಶೀರ್ವಾದ ಪಡೆಯೋ ಸಾಧ್ಯತೆಯಿದೆ.
ಇನ್ನು ಜೈಲರ್ ಸಿನಿಮಾದಲ್ಲಿ ರಜನಿಕಾಂತ್ ಜೈಲು ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಶಿವರಾಜ್ಕುಮಾರ್, ನಟಿಯರಾದ ರಮ್ಯಾಕೃಷ್ಣ, ತಮನ್ನಾ ಭಾಟಿಯಾ, ಜಾಕಿ ಶ್ರಾಫ್ ಚಿತ್ರದ ಮುಖ್ಯ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಜಾಕಿ ಶ್ರಾಫ್ ಮತ್ತು ರಜನಿ ತುಂಬಾ ವರ್ಷಗಳ ನಂತರ ಮತ್ತೆ ತೆರೆ ಮೇಲೆ ಒಂದಾಗುತ್ತಿರುವುದು ವಿಶೇಷ ಎನಿಸಿದೆ. ನರಸಿಂಹ ಸಿನಿಮಾದಲ್ಲಿ ರಜನಿಕಾಂತ್ಗೆ ಪೈಪೋಟಿ ನೀಡೋ ರೀತಿ ಅಭಿನಯಿಸಿ ದಕ್ಷಿಣ ಭಾರತದಲ್ಲಿ ಖ್ಯಾತಿಯಾಗಿದ್ದ ನಟಿ ರಮ್ಯಕೃಷ್ಣ ಕೂಡ ಚಿತ್ರದಲ್ಲಿರುವುದು ಕುತೂಹಲ ಮೂಡಿಸಿದೆ.
Thalaivar enroute To Mangalore ✈️#Jailer with #Shivarajkumar in almost full black beard#Rajinikanth pic.twitter.com/bxrcvZlrc9
— Rajini Trends Page ᴶᴬᴵᴸᴱᴿ (@RajiniTrendPage) February 12, 2023
Superstar Rajinikanth was spotted at Mangalore International Airport on Sunday, February 12. The star actor is scheduled to join the cast of ‘Jailer’ and shoot some key scenes with Shiva Rajkumar, who also features in the film.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm