ಬ್ರೇಕಿಂಗ್ ನ್ಯೂಸ್
14-02-23 01:03 pm Mangalore Correspondent ಕರಾವಳಿ
ಉಳ್ಳಾಲ, ಫೆ.14: ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಅಂಗಣದಲ್ಲಿ ರಾಜ್ಯದಲ್ಲೇ ಎರಡನೇ ಅತಿ ಎತ್ತರದ 164 ಅಡಿ ಬಾನೆತ್ತರದ ಧ್ವಜ ಸ್ತಂಭ ನಿರ್ಮಾಣವಾಗಿದ್ದು ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ ಅವರು ನೂತನ ಸ್ತಂಭದಲ್ಲಿ ಮೊದಲ ಧ್ವಜಾರೋಹಣಗೈದು ಲೋಕಾರ್ಪಣೆ ಮಾಡಿದ್ದಾರೆ.
ರಾಜ್ಯದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಹೊರತುಪಡಿಸಿದರೆ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಅತೀ ಎತ್ತರದ ಧ್ವಜ ಸ್ತಂಭ ನಿರ್ಮಾಣವಾಗಿದೆ. ಕಳೆದ ವರುಷ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ಬಳಿ ಶಾಸಕ ಯು.ಟಿ ಖಾದರ್ ಅವರು ತಮ್ಮ ಅನುದಾನದಲ್ಲಿ 110 ಅಡಿ ಎತ್ತರದ ಧ್ವಜಸ್ತಂಭ ನಿರ್ಮಿಸಿ ಲ ಧ್ವಜಾರೋಹಣ ನೆರವೇರಿಸಿದ್ದರು. ಬಾನೆತ್ತರಕ್ಕೆ ಹಾರುತ್ತಿದ್ದ ಬೃಹತ್ ಗಾತ್ರದ ಬಾವುಟ ಕಣ್ಮನ ಸೆಳೆದಿತ್ತು. ಇದೀಗ ತೊಕ್ಕೊಟ್ಟಿನ 110 ಅಡಿ ಎತ್ತರವನ್ನ ಮೀರಿಸಿ ದೇರಳಕಟ್ಟೆಯಲ್ಲಿ ನಿರ್ಮಾಣಗೊಂಡ 164 ಅಡಿ ಎತ್ತರದ ಸ್ತಂಭದಲ್ಲಿ 30×45 ವಿಸ್ತೀರ್ಣದ ಗಜ ಗಾತ್ರದ ರಾಷ್ಟ್ರಧ್ವಜ ಹಾರಾಡುತ್ತಿದೆ.
ಐಜಿಪಿ ಚಂದ್ರಗುಪ್ತ ಮಾತನಾಡಿ ದೇಶವನ್ನು ಉದಾತ್ತ ಮೌಲ್ಯಗಳ ಮೂಲಕ ಎತ್ತರಕ್ಕೇರಿಸುವ ಚಿಂತನೆಗಳು ನಿಟ್ಟೆ ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡ ಬೃಹತ್ ಗಾತ್ರದ ರಾಷ್ಟ್ರ ಧ್ವಜಾರೋಹಣದಂತಹ ಪವಿತ್ರ ಕಾರ್ಯಗಳಿಂದ ನೆರವೇರುತ್ತದೆ. ತ್ಯಾಗ, ಬಲಿದಾನ, ಶೌರ್ಯ, ಆತ್ಮಸ್ಥೈರ್ಯ, ಶಾಂತಿ, ಸೌಹಾರ್ದ, ಸಮನ್ವಯತೆ ಹೀಗೆ ಬಹು ಸಂಸ್ಕೃತಿಯ ಆಶಯಗಳು ರಾಷ್ಟ್ರಧ್ವಜದ ಮೂಲಕ ಹರಡಲಿದೆ ಎಂದರು.
ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ಮಾತನಾಡಿ ಸಂಸ್ಥೆಯು ದೇರಳಕಟ್ಟೆ ಪರಿಸರದಲ್ಲಿ 24 ವರ್ಷಗಳಿಂದ ಆಸ್ಪತ್ರೆ ನಡೆಸಿಕೊಂಡು ಬರುತ್ತಿದೆ. ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಸಂಸ್ಥೆಯಲ್ಲಿ ಬೃಹತ್ ರಾಷ್ಟ್ರಧ್ವಜದ ಅನಾವರಣ ಆಗಿರುವುದು ಗೌರವ ತಂದಿದೆ. ಪ್ರತಿ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯ ಒಳಬರುವಾಗ ರಾಷ್ಟ್ರಧ್ವಜಕ್ಕೆ ಸೆಲ್ಯೂಟ್ ನೀಡಿ ಪ್ರವೇಶಿಸಬೇಕು. ಗಾತ್ರ, ಎತ್ತರ ಎಷ್ಟೆನ್ನುವುದು ವಿಚಾರ ಮುಖ್ಯವಲ್ಲ, ರಾಷ್ಟ್ರಧ್ವಜದ ಮಹತ್ವ ಬಹುಮುಖ್ಯವಾಗಿರುತ್ತದೆ ಎಂದರು.
ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಆಡಳಿತ ಸಹ ಕುಲಾಧಿಪತಿ ಎನ್.ವಿಶಾಲ್ ಹೆಗ್ಡೆ, ಸಹಕುಲಾಧಿಪತಿ ಡಾ| ಎಂ. ಶಾಂತರಾಮ ಶೆಟ್ಟಿ, ಕುಲಪತಿ ಡಾ| ಸತೀಶ್ ಕುಮಾರ್ ಭಂಡಾರಿ, ಉಪಕುಲಪತಿ ಡಾ| ಎಂ.ಎಸ್ ಮೂಡಿತ್ತಾಯ, ಹಣಕಾಸು ವಿಭಾಗದ ನಿರ್ದೇಶಕ ರಾಜೇಂದ್ರ ಎಂ., ವೈದ್ಯಕೀಯ ಅಧೀಕ್ಷಕಿ ಡಾ| ಸುಮಲತಾ ಆರ್ ಶೆಟ್ಟಿ ಉಪಸ್ಥಿತರಿದ್ದರು.
Mangalore 164 feet long fag pole inaugurated at Deralakatte by K S Hedge Hospital. The inauguration was led by IGP Western range Chandragupta. This will be the tallest flag pole in the city. Recently the 110 feet flag pole was inaugurated by MLA Khader at Thokottu.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 10:51 pm
HK News Desk
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
17-05-25 10:09 pm
Mangalore Correspondent
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
Siddaramaiah, Cm Mangalore, BJP black flag: ಸ...
16-05-25 06:05 pm
17-05-25 05:00 pm
Bangalore Correspondent
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm