ಬ್ರೇಕಿಂಗ್ ನ್ಯೂಸ್
17-02-23 02:20 pm Mangalore Correspondent ಕರಾವಳಿ
ಮಂಗಳೂರು, ಫೆ.17 : ಮಾಜಿ ಸಿಎಂ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥನಾರಾಯಣ ಅವರನ್ನು ಸಂಪುಟದಿಂದ ಕಿತ್ತುಹಾಕಿ, ಸೂಕ್ತ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕಾಂಗ್ರೆಸ್ ಬೀದಿಗೆ ಇಳಿದು ಹೋರಾಟ ಮಾಡಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಿ ಸಾಮಾಜಿಕ ಮೌಲ್ಯವನ್ನು ಎತ್ತಿ ಹಿಡಿದು ಯುವಜನತೆಗೆ ಮಾರ್ಗದರ್ಶಕರಾಗಿ ಇರಬೇಕಾದವರು ಕೋಮು ಭಾವನೆ ಕೆರಳಿಸುವ ಕೆಟ್ಟ ಮನೋಸ್ಥಿತಿಗೆ ನಾಂದಿ ಹಾಡಿರುವುದು ಇಡೀ ರಾಜ್ಯಕ್ಕೆ ಮಾರಕ. ಇದು ಸಿದ್ದರಾಮಯ್ಯ ಅವರನ್ನು ನಿರ್ಭೀತಿಯಿಂದ ಕೆಲಸ ಮಾಡದಂತೆ ತಡೆಯುವ ಮತ್ತು ಜನರಿಗೆ ಅಪರಾಧ ಮಾಡಲು ಪ್ರಚೋದನೆ ನೀಡುವ ಹೇಯ ಕೃತ್ಯವಾಗಿದೆ ಎಂದು ಹೇಳಿದರು.

ಇಂಥವರಿಗೆ ಸಚಿವರಾಗಿ ಅಧಿಕಾರದಲ್ಲಿ ಮುಂದುವರೆಯುವ ಯಾವ ನೈತಿಕತೆಯೂ ಇಲ್ಲ. ಕೂಡಲೇ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ಐವಾನ್ ಡಿಸೋಜ ಹೇಳಿದರು. ಟಿಪ್ಪು ಪಾಠ ಪಠ್ಯದಲ್ಲಿದ್ದು, ಬ್ರಿಟಿಷರ ವಿರುದ್ಧದ ಹೋರಾಟ ಬಗ್ಗೆ ನಾವೆಲ್ಲ ಓದಿದ್ದೇವೆ. ಟಿಪ್ಪು ಪುಸ್ತಕಕ್ಕೆ ಮುನ್ನುಡಿ ಬರೆದಿರುವ ಜಗದೀಶ್ ಶೆಟ್ಟರ್, ಟಿಪ್ಪು ವೇಷ ಭೂಷಣ ಧರಿಸಿದ್ದ ಯಡಿಯೂರಪ್ಪ ಅವರಿಗೂ ನಿಮ್ಮ ಬಹಿರಂಗ ಹೇಳಿಕೆ ಇದು ಅನ್ವಯಿಸುತ್ತಾ.. ಅವರನ್ನು ಹೊಡೆದು ಹಾಕಲು ಕರೆ ಕೊಡುತ್ತೀರಾ ಎಂದು ಪ್ರಶ್ನಿಸಿದರು.

ಬಿಜೆಪಿಗೆ ಬದ್ಧತೆ ಇರುವುದಾದರೆ, ಕೊಲೆಗೆ ಪ್ರಚೋದನೆ ನೀಡಿರುವ
ಅಶ್ವತ್ಥನಾರಾಯಣ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡಬೇಕು. ಸಚಿವ ಸಂಪುಟದಿಂದ ಕಿತ್ತು ಹಾಕಬೇಕು. ನಾವು ಈಗಾಗಲೇ ಪೊಲೀಸ್ ಕಮೀಷನರ್ಗೆ ದೂರು ನೀಡಿದ್ದು, ಸ್ವಯಂಪ್ರೇರಿತವಾಗಿ ಕೇಸು ದಾಖಲಿಸಬೇಕು. ಇದನ್ನು ಮಾಡದಿದ್ದರೆ, ಬೀದಿಗೆ ಇಳಿದು ಹೋರಾಟ ಮಾಡುತ್ತೇವೆ ಎಂದು ಅವರು ಹೇಳಿದರು. ಕಾಂಗ್ರೆಸ್ ಮುಖಂಡರಾದ ಕೋಡಿಜಾಲ್ ಇಬ್ರಾಹಿಂ, ಅಪ್ಪಿ, ಸಬಿತಾ ಮಿಸ್ಕಿತ್, ಪ್ರಕಾಶ್ ಸಾಲ್ಯಾನ್, ಭಾಸ್ಕರ ರಾವ್ ಮತ್ತಿರರಿದ್ದರು.
Bjp Ashwath Narayan comment on Siddaramaiah, Ivan dsouza in Mangalore says throw ashwath out of cabinet.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am