ಬ್ರೇಕಿಂಗ್ ನ್ಯೂಸ್
26-02-23 02:04 pm Mangalore Correspondent ಕರಾವಳಿ
ಮಂಗಳೂರು, ಫೆ.26 : ಎರಡು ವರ್ಷಗಳ ಹಿಂದೆ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಅಡಿಕೆ ಕದ್ದ ಪ್ರಕರಣದಲ್ಲಿ ಬಾಲಕನಿಗೆ ಹಲ್ಲೆಗೈದ ಘಟನೆಯ ವಿಡಿಯೋ ವೈರಲ್ ಆಗಿತ್ತು. ಪ್ರಕರಣ ಸಂಬಂಧಿಸಿ ಸುಳ್ಯ ಪೊಲೀಸರು ಹತ್ತು ಮಂದಿಯನ್ನು ಬಂಧಿಸಿ, ಕೋರ್ಟಿಗೆ ಚಾರ್ಜ್ ಶೀಟ್ ಹಾಕಿದ್ದರು. ಆದರೆ, ಎರಡು ವರ್ಷಗಳ ಹಿಂದಿನ ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಮತ್ತೆ ವೈರಲ್ ಮಾಡಲಾಗುತ್ತಿದ್ದು, ಈ ರೀತಿ ಹಲ್ಲೆಗೈದವರಿಗೆ ಸೂಕ್ತ ಶಿಕ್ಷೆಯಾಗಬೇಕೆಂದು ಹೇಳಿ ಷೇರ್ ಮಾಡುತ್ತಿದ್ದಾರೆ.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾಟೆ ವಿಕ್ರಮ್ ಕೂಡಲೇ ಸ್ಪಂದಿಸಿದ್ದು, ಹಳೆ ವಿಡಿಯೋ ಹಂಚಿಕೆ ಮಾಡಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ಘಟನೆ 2021ರ ಅಕ್ಟೋಬರ್ 27ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದಲ್ಲಿ ಹತ್ತು ಮಂದಿಯನ್ನು ಬಂಧಿಸಲಾಗಿತ್ತು. ಸದ್ಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಈ ರೀತಿಯ ಹಳೆಯ ವಿಡಿಯೋಗಳನ್ನು ಅದರ ಪೂರ್ವಾಪರ ತಿಳಿಯದೆ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ವಿಡಿಯೋದಲ್ಲಿ ಹಲ್ಲೆ ನಡೆಸುತ್ತಿರುವ ಯುವಕರು ತುಳು ಮಾತನಾಡುತ್ತಿದ್ದು ಇವರಿಗೆ ಸೂಕ್ತ ಶಿಕ್ಷೆಯಾಗಬೇಕೆಂದು ಕೆಲವರು ಆ ವಿಡಿಯೋವನ್ನು ಫೇಸ್ಬುಕ್ ನಲ್ಲಿ ಷೇರ್ ಮಾಡುತ್ತಿದ್ದಾರೆ. ಹಳೆಯ ವಿಡಿಯೋ ಆಗಿದ್ದರೂ, ಅದನ್ನು ಷೇರ್ ಮಾಡುತ್ತಿದ್ದು ಚುನಾವಣೆ ಹೊತ್ತಿನಲ್ಲಿ ಅದರಿಂದ ಬೇಳೆ ಬೇಯಿಸುವ ದುರುದ್ದೇಶ ಇರುವಂತಿದೆ. ಈ ಬಗ್ಗೆ ಕೂಡಲೇ ಎಚ್ಚೆತ್ತ ಪೊಲೀಸರು ವಿಡಿಯೋ ಹಂಚಿಕೆ ಮಾಡಿದರೆ ಹುಷಾರ್ ಎಂದು ಎಚ್ಚರಿಕೆ ನೀಡಿದ್ದಾರೆ.
Mangalore Boy thrashed for allegedly stealing arecanut, miscreants make old video viral, SP Amathe Vikram warns against circulation. After an old video of a boy being beaten up surfaced and went viral on social media, Dakshina Kannada District police have warned the public not to circulate it. In a Twitter post, Dakshina Kannada SP Dr. Amathe Vikram said that the viral video is from an incident that took place in 2021 under the jurisdiction of Subrahmanya Police Station.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
04-07-25 10:54 pm
Mangalore Correspondent
Puttur pregnant girl, Ashok Rai: ಯುವತಿ ಹೇಳಿಕೆ...
04-07-25 09:44 pm
Ullal Suicide, Mangalore, Railway track: ಮೊಬೈ...
04-07-25 02:38 pm
Mangalore Youth death, ullal: ಕುಡಿದ ಮತ್ತಿನಲ್ಲ...
04-07-25 11:46 am
Mangalore Police, Drugs, Sudheer Kumar Reddy:...
03-07-25 10:50 pm
04-07-25 08:56 pm
Bangalore Correspondent
Praveen Nettaru, NIA Arrest, Abdul Rahiman; ಪ...
04-07-25 06:21 pm
Dharmasthala, Complaint, Murder, Rape: ಧರ್ಮಸ್...
04-07-25 12:31 pm
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm