ಬ್ರೇಕಿಂಗ್ ನ್ಯೂಸ್
01-03-23 07:21 pm Mangalore Correspondent ಕರಾವಳಿ
ಮಂಗಳೂರು, ಮಾ.1 : ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಕೊಡಿಯಾಲ್ ಬೈಲ್ ಬಳಿ ನಡೆದಿದ್ದು, ಮಹಿಳೆ ಹಾಗೂ 4 ವರ್ಷದ ಬಾಲಕಿ ಸಾವನಪ್ಪಿದ್ದರೆ, ಮತ್ತೋರ್ವ ಬಾಲಕಿ ಪವಾಡ ಸದೃಶ್ಯ ಸಾವಿನ ದವಡೆಯಿಂದ ಪಾರಾಗಿದ್ದಾಳೆ.
ಮೃತ ಮಹಿಳೆಯನ್ನು 33 ವರ್ಷದ ವಿಜಯಾ, 4 ವರ್ಷದ ಶೋಭಿತಾ ಎಂದು ಗುರುತಿಸಲಾಗಿದೆ. 12 ವರ್ಷದ ಇನ್ನೊಬ್ಬ ಮಗಳು ಯಜ್ಞಾ ಬದುಕಿ ಉಳಿದಿದ್ದಾಳೆ. ವಿಜಯಾ ಅವರ ಮೊದಲ ಪತಿ ಸುರೇಂದ್ರ 6 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಬಳಿಕ ವಿಜಯಾ 2ನೇ ಮದುವೆಯಾಗಿದ್ದು 20 ದಿನಗಳ ಹಿಂದೆ 2ನೇ ಪತಿ ಉಮೇಶ್ ಕೂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ.
ಇದರಿಂದ ತೀವ್ರ ನೊಂದಿದ್ದ ವಿಜಯಾ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದು ಇಬ್ಬರು ಮಕ್ಕಳಿಗೂ ನೇಣು ಕುಣಿಕೆ ಹಾಕಿ ತಾನು ಕೂಡ ನೇಣಿಗೆ ಶರಣಾಗಿದ್ದಾಳೆ. ಆದರೆ ಅದೃಷ್ಟವಶಾತ್ 12 ವರ್ಷದ ಯಜ್ಞಾ ಕಾಲ ಬುಡದಲ್ಲಿದ್ದ ಟೀಫಾಯಿ ಆಕೆಯನ್ನು ಬದುಕಿಸಿದೆ. ನೇಣು ಕುಣಿಕೆಯಲ್ಲಿದ್ದರೂ ಜೀವ ರಕ್ಷಣೆಗಾಗಿ ಕೂಗಿದ್ದಾಳೆ. ಮನೆಯ ಮೇಲಿನ ಮಹಡಿಯಲ್ಲಿ ಬಾಡಿಗೆ ಇದ್ದವರು ಮಗುವಿನ ಚೀರಾಟ ಕೇಳಿ ಕೆಳಗೆ ಓಡಿ ಬಂದಿದ್ದು ನೋಡಿದಾಗ ತಾಯಿ ವಿಜಯಾ ಮತ್ತು 4 ವರ್ಷದ ಮಗು ಪ್ರಾಣ ಬಿಟ್ಟಿದ್ದರು. ಯಜ್ಞಾಳನ್ನು ಅಪಾಯದಿಂದ ಪಾರು ಮಾಡಿದ್ದಾರೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಿಸಿದ್ದಾರೆ.
Mangalore Mother commits suicide with her four year old daughter at Kodial Guthu. The deceased have been identified as Vijaya (33) and her daughter Shobita (4). Another daughter is said to be out of danger. Barke police have registered the case. She had lost her first husband six years ago and recently she lost her second Husband too.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am