ಬ್ರೇಕಿಂಗ್ ನ್ಯೂಸ್
02-03-23 12:02 pm Udupi Correspondent ಕರಾವಳಿ
ಉಡುಪಿ, ಮಾ.1: ಸಚಿವ ಸುನಿಲ್ ಕುಮಾರ್ ವಿರುದ್ಧ ಮತ್ತೆ ಪ್ರಮೋದ್ ಮುತಾಲಿಕ್ ವಾಗ್ದಾಳಿ ಮುಂದುವರಿಸಿದ್ದಾರೆ. ಕೈಗಾರಿಕಾ ವಲಯ ಸ್ಥಾಪನೆ ಹೆಸರಲ್ಲಿ ಹೆಬ್ರಿ ತಾಲೂಕಿನ ಶಿವಪುರ ಗ್ರಾಮದಲ್ಲಿ 67 ಎಕರೆ ಜಾಗವನ್ನು ಖರೀದಿಸಲು ಉದ್ದೇಶಿಸಲಾಗಿದೆ. ಅದನ್ನು ಗಜಾನನ ಮತ್ತು ವಿದ್ಯಾ ಸುವರ್ಣ ಎಂಬವರ ಹೆಸರಿನಲ್ಲಿ ಬೇನಾಮಿಯಾಗಿದ್ದು ಇವರು ಬಿಜೆಪಿಯ ಸಾಮಾನ್ಯ ಕಾರ್ಯಕರ್ತರು, ಇದರ ಹಿಂದೆ 'ಪ್ರಭಾವಿ' ಸಚಿವರ ಕೈವಾಡದ ಶಂಕೆಯಿದ್ದು ಸಚಿವರೇ ಬೇನಾಮಿ ಹೆಸರಲ್ಲಿ ಭಾರೀ ಆಸ್ತಿ ಮಾಡಿಕೊಂಡಿದ್ದಾರೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ಇದೇ ಜಾಗವನ್ನು ಕೈಗಾರಿಕಾ ಅಭಿವೃದ್ಧಿಗಾಗಿ ಖರೀದಿ ಬೆಲೆಗಿಂತ 5-6 ಪಟ್ಟು ಹೆಚ್ಚಿನ ಬೆಲೆಗೆ ಸರಕಾರ ಖರೀದಿ ಮಾಡುವ ಹಂತದಲ್ಲಿದೆ. ಇದರಿಂದ ಮೂಲ ಜಾಗದ ಮಾಲಕರಾದ ರೈತರಿಗೆ ಅನ್ಯಾಯವಾಗಿದೆ. ಇದು ಬೇನಾಮಿ ಆಸ್ತಿ ಎಂಬ ಸಂಶಯವಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಪ್ರಮೋದ್ ಮುತಾಲಿಕ್, ಉಡುಪಿ ಜಿಲ್ಲಾಧಿಕಾರಿಗೆ ಮನವಿ ನೀಡಿ ತನಿಖೆಗೆ ಒತ್ತಾಯಿಸಿದ್ದಾರೆ.
ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬೇನಾಮಿ ಆಸ್ತಿ ವ್ಯವಹಾರದ ಕುರಿತು ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರಿಗೆ ಮನವಿ ಸಲ್ಲಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಮುತಾಲಿಕ್, ಇಡೀ ಪ್ರಕರಣದಲ್ಲಿ ನಡೆದಿರುವ ಅವ್ಯವಹಾರವನ್ನು ಬಿಡಿಸಿಟ್ಟರು.
ಶಿವಪುರದಲ್ಲಿ ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿ ಖರೀದಿಸಿರುವ 67 ಎಕರೆ ಭೂಮಿ ಬೇನಾಮಿ ಆಸ್ತಿ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಬಿಜೆಪಿ ತಾಲೂಕು ಸಮಿತಿಯಲ್ಲಿರುವ ದಂಪತಿ ಹೆಸರಿನಲ್ಲಿ 67 ಎಕರೆ ಭೂಮಿ ಖರೀದಿಯಾಗಿದೆ. ಈ ಬೇನಾಮಿ ಆಸ್ತಿ ಖರೀದಿಯ ಹಿಂದೆ 'ಪವರ್ಫುಲ್' ಸಚಿವರ ಕೈವಾಡವಿರುವ ಬಲವಾದ ಶಂಕೆ ಇದೆ ಎಂದು ಗಂಭೀರ ಆರೋಪ ಮಾಡಿದರು.
ಈ ಜಾಗದಲ್ಲಿ ಸರಕಾರ 'ಕೈಗಾರಿಕಾ ವಲಯ' ಪ್ರಾರಂಭಿಸಲಿದೆ ಎಂದು ಗೊತ್ತಿದ್ದೇ ಭೂಮಿಯನ್ನು ಖರೀದಿಸಲಾಗಿದೆ. ಇವರ ಜಾಗ ಖರೀದಿಸಿಟ್ಟ ಕೆಲವೇ ದಿನಗಳಲ್ಲಿ ಸರಕಾರ ಜಾಗವನ್ನು ಇಂಡಸ್ಟ್ರಿಯಲ್ ಏರಿಯಾ ಎಂದು ಘೋಷಿಸಿದೆ. ಇದರಿಂದ ಜಾಗದ ಬೆಲೆ ನಾಲ್ಕೈದು ಪಟ್ಟು ಹೆಚ್ಚಾಗಿದೆ. ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದರಲ್ಲಿ ಸಚಿವರ ಪ್ರಭಾವ ವ್ಯವಸ್ಥಿತವಾಗಿ ಇರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಈ ಬಗ್ಗೆ ತಮ್ಮಲ್ಲಿ ದಾಖಲೆಗಳಿದ್ದು ಸಮಗ್ರ ತನಿಖೆ ನಡೆಸಬೇಕು ಎಂದು ಎಂದು ಮುತಾಲಿಕ್ ಹೇಳಿದರು.
ಜಿಲ್ಲಾಧಿಕಾರಿಗಳು ಕೂಡಲೇ ಪ್ರಕರಣವನ್ನು ಸಮಗ್ರ ತನಿಖೆಗೊಳಪಡಿಸಿ ಬೇನಾಮಿ ಆಸ್ತಿಯ ಮಾಲಕರನ್ನು ಪತ್ತೆ ಹಚ್ಚಬೇಕು. ಸಂಬಂಧಪಟ್ಟ ದಾಖಲೆಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಜೊತೆಗೆ ಆದಾಯ ತೆರಿಗೆ ಇಲಾಖೆ ಹಾಗೂ ಲೋಕಾಯುಕ್ತಕ್ಕೂ ದಾಖಲೆಗಳನ್ನು ಸಲ್ಲಿಸಲಾಗುವುದು ಎಂದು ಪ್ರಮೋದ್ ಮುತಾಲಿಕ್ ತಿಳಿಸಿದರು.
Power Minister Sunil Kumar alleged of having 67 acres of illegal land in different names in Karkala slams Pramod Muthalik.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm